ಆರ್‌ಸಿಬಿಗೆ ಹರಾಜಾದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಮ್ಯಾಕ್ಸ್‌ವೆಲ್

ಐಪಿಎಲ್ ಹರಾಜಿನಲ್ಲಿ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ 14.25 ಮೊತ್ತಕ್ಕೆ ಹರಾಜಾಗಿದ್ದಾರೆ. ಈ ಬಗ್ಗೆ ಗ್ಲೆನ್ ಮ್ಯಾಕ್ಸ್‌ವೆಲ್ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಗ್ಲೆನ್ ಮ್ಯಾಕ್ಸ್‌ವೆಲ್ ಪ್ರತಿಕ್ರಿಯಿಸಿದ್ದು ಐಪಿಎಲ್ ಟ್ರೋಫಿ ಗೆಲ್ಲಲು ಎಲ್ಲಾ ಪ್ರಯತ್ನ ನಡೆಸುವುದಾಗಿ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.
"ಈ ಬಾರಿಯ ಟೂರ್ನಿಗಾಗಿ ಆರ್‌ಸಿಬಿ ತಂಡವನ್ನು ಸೇರಿಕೊಳ್ಳಲು ಉತ್ಸುಕನಾಗಿದ್ದೇನೆ. ಪ್ರಶಸ್ತಿಯನ್ನು ಗೆಲ್ಲಲು ನನ್ನ ಎಲ್ಲಾ ಪ್ರಯತ್ನವನ್ನು ಮಾಡುವುದಕ್ಕೆ ನಾನು ಕಾತುರನಾಗಿದ್ದೇನೆ" ಎಂದು ಟ್ವೀಟ್‌ನಲ್ಲಿ ಮ್ಯಾಕ್ಸ್‌ವೆಲ್ ಬರೆದುಕೊಂಡಿದ್ದಾರೆ.
ಇದಕ್ಕೂ ಮುನ್ನ ಆಸ್ಟ್ರೇಲಿಯಾ ಕ್ರಿಕೆಟಿಗ ಆ್ಯಡಂ ಜಂಪಾ ಮ್ಯಾಕ್ಸ್‌ವೆಲ್‌ಗೆ ಆರ್‌ಸಿಬಿ ಟ್ರೋಫಿಯನ್ನು ನೀಡಿ ಸ್ವಾಗತಿಸಿದ ಫೋಟೋವನ್ನು ಹಂಚಿಕೊಂಡಿದ್ದರು. ಆರ್‌ಸಿಬಿ ತಂಡದ ಸ್ಪಿನ್ನರ್ ಆಗಿರುವ ಆಡಂ ಜಂಪಾ ಈ ಬಾರಿ ಆರ್‌ಸಿಬಿ ತಂಡದಲ್ಲೇ ಮುಂದುವರಿಯಲಿದ್ದಾರೆ.
ಗ್ಲೆನ್ ಮ್ಯಾಕ್ಸ್‌ವೆಲ್ ಕಳೆದ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರವಾಗಿ ಕಣಕ್ಕಿಳಿದಿದ್ದರು. ಆದರೆ ಟೂರ್ನಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಮ್ಯಾಕ್ಸ್‌ವೆಲ್ ಅವರನ್ನು ಪಂಜಾಬ್ ಬಿಡುಗಡೆಗೊಳಿಸಿತ್ತು. ಆದರೆ ಈ ಬಾರಿಯ ಹರಾಜಿನಲ್ಲಿ ಅದಕ್ಕಿಂತಲೂ ದೊಡ್ಡ ಮೊತ್ತವನ್ನು ಮ್ಯಾಕ್ಸ್‌ವೆಲ್ ಪಡೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications