Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ ಹರಾಜು: 14.25 ಕೋಟಿಗೆ ಆರ್‌ಸಿಬಿ ಪಾಲಾದ ಗ್ಲೆನ್ ಮ್ಯಾಕ್ಸ್‌ವೆಲ್

IPL auction: Glenn Maxwell Sold To RCB For 14.25 Crore

ಆಸ್ಟ್ರೇಲಿಯಾ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಈ ಬಾರಿಯ ಹರಾಜಿನಲ್ಲಿ ಆರ್‌ಸಿಬಿ ಪಾಲಾಗಿದ್ದಾರೆ. ಆಸ್ಟ್ರೇಲಿಯಾದ ಆಲ್‌ರೌಂಡರ್‌ನನ್ನು ತೆಕ್ಕೆಗೆ ಹಾಕಿಕೊಳ್ಳಲು ಕಸರತ್ತು ನಡೆಸಿದ ಆರ್‌ಸಿಬಿ ಕಡೆಗೆ 14.25 ಕೋಟಿ ಬಿಡ್ ಮಾಡುವ ಮೂಲಕ ತನ್ನ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಮ್ಯಾಕ್ಸ್‌ವೆಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಹೀಗಾಗಿ 2 ಕೋಟಿ ಮೂಲ ಬೆಲೆ ಹೊಂದಿದ್ದ ಮ್ಯಾಕ್ಸ್‌ವೆಲ್ ಬೃಹತ್ ಮೊತ್ತವನ್ನು ಪಡೆದುಕೊಂಡಿದ್ದಾರೆ.

ಕಳೆದ ಬಾರಿಯ ಐಪಿಎಲ್ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ 10.75 ಕೋಟಿಗೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪಾಲಾಗಿದ್ದರು. ಆದರೆ ಕಳಪೆ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಪಂಜಾಬ್ ಮ್ಯಾಕ್ಸ್‌ವೆಲ್ ಅವರನ್ನು ಬಿಡುಗಡೆಗೊಳಿಸಿತ್ತು. ಈಗ ಕಳೆದ ಬಾರಿಯ ಮೊತ್ತಕ್ಕಿಂತಲೂ ಹೆಚ್ಚಿನ ಬೆಲೆಗೆ ಮ್ಯಾಕ್ಸ್‌ವೆಲ್ ಹರಾಜಾಗಿದ್ದಾರೆ.

ಆರ್‌ಸಿಬಿ ತಂಡ ಮಧ್ಯಮ ಕ್ರಮಾಂಕವನ್ನು ಬಲಿಷ್ಠಗೊಳಿಸುವ ದೃಷ್ಟಿಯಲ್ಲಿ ಮ್ಯಾಕ್ಸ್‌ವೆಲ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿದೆ. ಈ ಮೂಲಕ ಅಗತ್ಯವಾಗಿದ್ದ ಆಲ್‌ರೌಂಡರ್ ಓರ್ವ ಆರ್‌ಸಿಬಿ ತಂಡದ ಪಾಲಾದಂತಾಗಿದೆ.

Story first published: Thursday, February 18, 2021, 15:52 [IST]
Other articles published on Feb 18, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+