Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಬೆಂಗಳೂರಿನಲ್ಲಿ ಐಪಿಎಲ್ 11ರ ಹರಾಜು ದಿನಾಂಕ ನಿಗದಿ

ಬೆಂಗಳೂರು, ಡಿಸೆಂಬರ್ 19: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ನ 11ನೇ ಆವೃತ್ತಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ.

ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ತುತ್ತಾಗಿ ಎರಡು ವರ್ಷಗಳ ಕಾಲ ಐಪಿಎಲ್ ನಿಂದ ಹೊರಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡಗಳು ಮುಂದಿನ ಐಪಿಎಲ್ ನಲ್ಲಿ ಕಣಕ್ಕಿಳಿಯಲಿವೆ.

IPL auctions on January 27, 28 in Bengaluru

2018ರ ಐಪಿಎಲ್ ನಲ್ಲಿ ಈ ಎರಡು ತಂಡಗಳು ಆಡಲಿದ್ದು, ಹಳೆ ತಂಡದಲ್ಲಿದ್ದ 5 ಆಟಗಾರರನ್ನು ಖರೀದಿ ಮಾಡಬಹುದು ಹಾಗೂ ಕೆಲ ಆಟಗಾರರನ್ನು ಉಳಿಸಿಕೊಳ್ಳಬಹುದಾಗಿದೆ. ಹೀಗಾಗಿ, ಚೆನ್ನೈ ಸೂಪರ್ ಕಿಂಗ್ಸ್ ಪರ ಧೋನಿ ಮತ್ತೊಮ್ಮೆ ಬ್ಯಾಟ್ ಬೀಸಬಹುದಾಗಿದೆ.

ಬೆಂಗಳೂರಿನಲ್ಲಿ ಜನವರಿ 27 ಹಾಗೂ 28ರಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಆಟಗಾರರ ಸಂಬಳ ಮಿತಿ 80 ಕೋಟಿ ರುಗೆ ಏರಿಸಲಾಗಿದೆ.

ಮೂರು ಭಾರತೀಯ ಹಾಗೂ ಇಬ್ಬರು ವಿದೇಶಿ ಆಟಗಾರರನ್ನು ಖರೀದಿ ಮಾಡಬಹುದಾಗಿದೆ. ಐಪಿಎಲ್ 11ರಲ್ಲಿ ಪ್ರತಿಯೊಂದು ತಂಡ 25 ಆಟಗಾರರನ್ನು ಖರೀದಿ ಮಾಡಬಹುದಾಗಿದೆ, ಈ ಪೈಕಿ 17 ಭಾರತೀಯರಾದರೆ 8 ವಿದೇಶಿ ಆಟಗಾರರಿಗೆ ಅವಕಾಶವಿರುತ್ತದೆ.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+