IPL 2022: ಐಪಿಎಲ್ ಟೂರ್ನಿಯಲ್ಲಿ ಆಗಲಿರುವ ಭಾರೀ ಬದಲಾವಣೆಯನ್ನು ಬಹಿರಂಗಪಡಿಸಿದ ಬಿಸಿಸಿಐ

ಸಾಕಷ್ಟು ನಿರೀಕ್ಷೆಗಳೊಂದಿಗೆ ಭಾರತದಲ್ಲಿ ಆರಂಭವಾಗಿದ್ದ 14 ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ 29 ಪಂದ್ಯಗಳು ಕೊರೊನಾ ವೈರಸ್ ನಡುವೆಯೂ ಯಾವುದೇ ಆತಂಕವಿಲ್ಲದೇ ಯಶಸ್ವಿಯಾಗಿ ನಡೆದಿದ್ದವು. ಆದರೆ ನಂತರ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ತಕ್ಷಣವೇ ನಿರ್ಧಾರವನ್ನು ಕೈಗೊಂಡಿತ್ತು.
ಹೀಗೆ ಭಾರತದಲ್ಲಿ ಆರಂಭವಾಗಿ ಕೊರೊನಾ ಹೊಡೆತಕ್ಕೆ ಸಿಲುಕಿ ತಾತ್ಕಾಲಿಕವಾಗಿ ಸ್ಥಗಿತಗೊಂಡ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಯುಎಇಯಲ್ಲಿ ಮುಂದುವರಿಸಲು ಬಿಸಿಸಿಐ ಬೇಕಾದ ಸಿದ್ಧತೆಗಳನ್ನು ನಡೆಸುತ್ತಿದೆ. ಯುಎಇಯಲ್ಲಿ ಮುಂಬರುವ ಸೆಪ್ಟೆಂಬರ್ 19 ರಂದು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಪುನಾರಂಭವಾಗಲಿದೆ. ಈಗಾಗಲೇ ಚೆನ್ನೈ ಮತ್ತು ಮುಂಬೈ ತಂಡಗಳ ಕೆಲ ಆಟಗಾರರು ದುಬೈ ತಲುಪಿದ್ದು ಕ್ವಾರಂಟೈನ್ ನಿಯಮವನ್ನು ಅನುಸರಿಸುತ್ತಿದ್ದಾರೆ.
ಈ ನಡುವೆ ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಅವರು ಈ ಬಾರಿ ಪುನಾರಂಭವಾಗುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮತ್ತು 2022ರಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕುರಿತು ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದು ಐಪಿಎಲ್ ವೀಕ್ಷಕರಿಗೆ ಮತ್ತು ಅಭಿಮಾನಿಗಳಿಗೆ ಈ ಕೆಳಕಂಡ ಸಿಹಿ ಸುದ್ದಿಗಳನ್ನು ತಿಳಿಸಿದ್ದಾರೆ.

2022ರ ಐಪಿಎಲ್‌ನಲ್ಲಿ 10 ತಂಡಗಳ ಭಾಗವಹಿಸುವಿಕೆ ಖಚಿತ
ಮುಂದಿನ ವರ್ಷ ನಡೆಯಲಿರುವ 15 ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 10 ತಂಡಗಳು ಭಾಗವಹಿಸಲಿವೆ ಎಂಬ ಮಾತುಗಳು ಸಾಕಷ್ಟು ದಿನಗಳಿಂದ ಹರಿದಾಡುತ್ತಿದೆ. ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೇ 10 ತಂಡಗಳು ಭಾಗವಹಿಸಲಿವೆ ಎಂದು ಈ ಹಿಂದೆ ಹೇಳಲಾಗುತ್ತಿತ್ತು. ಆದರೆ ಈ ವರ್ಷವೂ ಸಹ 8 ತಂಡಗಳು ಸೆಣಸಾಟ ನಡೆಸುತ್ತಿದ್ದು ಇತ್ತೀಚಿಗಷ್ಟೆ ಐಪಿಎಲ್ ಟೂರ್ನಿಯ ಕುರಿತು ಮಾತನಾಡಿರುವ ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಮುಂದಿನ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಿಂದ 10 ತಂಡಗಳು ಭಾಗವಹಿಸಲಿದ್ದು, 8 ತಂಡಗಳ ಐಪಿಎಲ್ ಟೂರ್ನಿ ಈ ವರ್ಷವೇ ಕೊನೆಯಾಗಲಿದೆ ಎಂದು ತಿಳಿಸಿದ್ದಾರೆ.

ಯುಎಇಯಲ್ಲಿ ನಡೆಯಲಿರುವ ಐಪಿಎಲ್ ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ
ಇನ್ನೂ ಮುಂದುವರಿದು ಮಾತನಾಡಿರುವ ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಸೆಪ್ಟೆಂಬರ್ ತಿಂಗಳಿನಿಂದ ಮುಂದುವರಿಯಲಿರುವ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪಂದ್ಯ ವೀಕ್ಷಿಸಲು ಪ್ರೇಕ್ಷಕರಿಗೆ ಅನುಮತಿ ನೀಡುವುದರ ಕುರಿತು ಚರ್ಚಿಸಲಾಗುತ್ತಿದೆ ಎಂದಿದ್ದಾರೆ. ಪಂದ್ಯ ವೀಕ್ಷಿಸಲು ಪ್ರೇಕ್ಷಕರಿಗೆ ಅನುಮತಿ ನೀಡುವುದರ ಕುರಿತು ಈಗಾಗಲೇ ಚರ್ಚೆ ನಡೆಸಿದ್ದು ಯುಎಇ ಸರ್ಕಾರ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದನ್ನು ಕಾದು ನೋಡಬೇಕು.

10 ತಂಡಗಳ ಐಪಿಎಲ್ ಇದೇ ಮೊದಲೇನಲ್ಲ!
ಮುಂಬರಲಿರುವ ಐಪಿಎಲ್ ಟೂರ್ನಿಯಲ್ಲಿ 10 ತಂಡಗಳು ಆಡಲಿವೆ ಎಂಬುದನ್ನು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಖಚಿತಪಡಿಸಿದ್ದಾರೆ. ಆದರೆ ಪ್ರೇಕ್ಷಕರಿಗೆ ಹತ್ತು ತಂಡಗಳ ಭಾಗವಹಿಸುವಿಕೆಯ ಐಪಿಎಲ್ ವೀಕ್ಷಿಸುವುದು ಇದೇ ಮೊದಲನೇ ಅನುಭವವೇನಲ್ಲ. ಈ ಹಿಂದೆ 2011ರ ಐಪಿಎಲ್ ಆವೃತ್ತಿಯಲ್ಲಿ ಹತ್ತು ತಂಡಗಳು ಭಾಗವಹಿಸಿದ್ದವು. ಈಗಿರುವ ತಂಡಗಳ ಜೊತೆ ಕೊಚ್ಚಿ ಟಸ್ಕರ್ಸ್ ಕೇರಳ ಮತ್ತು ಪುಣೆ ವಾರಿಯರ್ಸ್ ಇಂಡಿಯಾ ತಂಡಗಳು 2011ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಿದ್ದವು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications