ಭುವಿ ಯಾರ್ಕರ್‌ಗೆ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಶಾಕ್
ಮಾರ್ಚ್ 28 ರಿಂದ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗಲಿದೆ. ಈ ಲೀಗ್‌ನ ಚಾಂಪಿಯನ್ ಪಟ್ಟದ ಮೇಲೆ 10 ತಂಡಗಳು ಚಿತ್ತ ನೆಟ್ಟಿವೆ. 17 ವರ್ಷದಿಂದ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದ್ದ ಆರ್‌ಸಿಬಿ, ಕಳೆದ ಆವೃತ್ತಿಯಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಈ ಬಾರಿ ರಜತ್ ಪಾಟಿದಾರ್ ಅವರ ತಂಡ ಎರಡನೇ ಬಾರಿಗೆ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸಲಿದೆ. ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇತ್ತೀಚೆಗೆ ತಂಡವನ್ನು ಸೇರಿದ್ದಾರೆ. ಲಂಡನ್‌ನಿಂದ ವಿರಾಟ್, ಬೆಂಗಳೂರಿಗೆ ಬಂದಿರುವ ವಿಡಿಯೋವನ್ನು ಆರ್‌ಸಿಬಿ ಹಂಚಿಕೊಂಡಿದೆ.
ಬಹು ದಿನಗಳಿಂದ ಕ್ರಿಕೆಟ್ ಆಡದ ವಿರಾಟ್ ಕೊಹ್ಲಿ ಮತ್ತೆ ಅಭ್ಯಾಸ ಆರಂಭಿಸಿದ್ದಾರೆ. ಇವರ ಬ್ಯಾಟಿಂಗ್ ಕಣ್ಣು ತುಂಬಿಕೊಳ್ಳಲು ಚಿನ್ನಸ್ವಾಮಿ ಮೈದಾನ ತುಂಬಲಿದೆ. ಇವರ ಕಲಾತ್ಮಕ ಹೊಡೆತಗಳನ್ನು ನೋಡಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ವಿರಾಟ್ ಕೊಹ್ಲಿ ಆರ್‌ಸಿಬಿ ತಂಡ ಸೇರುತ್ತಿದ್ದಂತೆ ಅಭ್ಯಾಸ ಆರಂಭಿಸಿದ್ದಾರೆ. ಈ ವೇಳೆ ಭುವನೇಶ್ವರ್ ಕುಮಾರ್ ಅವರ ಎಸೆತವನ್ನು ಎದುರಿಸುವಾಗ ವಿಡಿಯೋ ಒಂದು ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ವಿರಾಟ್ ಕೊಹ್ಲಿ ಅಭ್ಯಾಸದ ವೇಳೆ, ವೇಗಿ ಭುವನೇಶ್ವರ್ ಕುಮಾರ್ ಅವರ ಎಸೆತವನ್ನು ಎದುರಿಸಿದ್ದಾರೆ. ಈ ವೇಳೆ ಭುವಿ ಎಸೆದ ಯಾರ್ಕರ್ ಗುರುತಿಸುವಲ್ಲಿ ವಿಫಲರಾದ ವಿರಾಟ್ ಕೊಹ್ಲಿ ಅವರ ವಿಡಿಯೋ ವೈರಲ್ ಆಗುತ್ತಿದೆ. ಈ ಆವೃತ್ತಿಯ ಐಪಿಎಲ್ ಕೊಹ್ಲಿಗೆ ನಿರ್ಣಾಯಕವಾಗಿದೆ, ಏಕೆಂದರೆ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಐಪಿಎಲ್‌ನಲ್ಲಿ ಮಾತ್ರ ಆಡುತ್ತಿದ್ದಾರೆ.
ವಿರಾಟ್ ಸಾಧನೆ
ಆರ್‌ಸಿಬಿ ತಂಡದ ಬ್ಯಾಟಿಂಗ್ ಬೆನ್ನೆಲುಬು ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ರನ್ ಶಿಖರ ಏರಿದ ಆಟಗಾರ. ಇವರು ಆಡಿದ 267 ಪಂದ್ಯಗಳಲ್ಲಿ 8,661 ರನ್ ಕಲೆ ಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಕೊಹ್ಲಿ ಈ ಆವೃತ್ತಿಯಲ್ಲಿ 9 ಸಾವಿರ ರನ್‌ಗಳ ಮೈಲುಗಲ್ಲನ್ನು ಮುಟ್ಟಬಹುದು. ಈ ಮೂಲಕ ವಿರಾಟ್ ಐಪಿಎಲ್‌ನಲ್ಲಿ ಮತ್ತೊಂದು ಇತಿಹಾಸವನ್ನು ನಿರ್ಮಿಸಬಹುದಾಗಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮೊದಲ ಪಂದ್ಯವನ್ನು ಆಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications