Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB ಐಪಿಎಲ್ ಟ್ರೋಫಿ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ನಿವೃತ್ತಿ?

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇವರು ಸದ್ಯ ಭಾರತದ ಪರ ಏಕದಿನ ಪಂದ್ಯಗಳನ್ನು ಮಾತ್ರ ಆಡಲಿದ್ದಾರೆ. ಅಲ್ಲದೆ ಐಪಿಎಲ್‌ನಲ್ಲಿ ಆಡುವುದನ್ನು ಕಾಣಬಹುದು. ಆದರೆ ಈಗ ಬರುತ್ತಿರುವ ಮಾಹಿತಿಯ ಪ್ರಕಾರ ವಿರಾಟ್‌ ಕೊಹ್ಲಿಯವರು ಐಪಿಎಲ್‌ನಿಂದಲೂ ದೂರ ಉಳಿಯುತ್ತಾರಾ ಎಂಬ ಪ್ರಶ್ನೆಗಳು ಆರಂಭವಾಗಿವೆ. ಇದಕ್ಕೆ ಕಾರಣ ಐಪಿಎಲ್‌ ಚೇರಮೆನ್ ಹೇಳಿದ ಆ ಒಂದು ಹೇಳಿಕೆ. ಹಾಗಿದ್ದರೆ ಐಪಿಎಲ್‌ ಅಧ್ಯಕ್ಷ ಅರುಣ್‌ ಧುಮಲ್‌ ಹೇಳಿದ್ದೇನು ಎಂಬ ಬಗ್ಗೆ ವರದಿ ಇಲ್ಲಿದೆ.

ಭಾರತ ಐಪಿಎಲ್‌ ಮುಗಿದ ಬಳಿಕ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಲಿದೆ. ಈ ವೇಳೆ ಯುವ ತಂಡ ಬಲಿಷ್ಠ ಇಂಗ್ಲೆಂಡ್ ತಂಡದ ಸವಾಲು ಎದುರಿಸಲಿದೆ. ಈ ಪ್ರವಾಸಕ್ಕೂ ಮುನ್ನ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿದ್ದಾರೆ. ಇವರ ಈ ನಿರ್ಧಾರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಇದೇ ವೇಳೆ ಇನ್ನೊಂದು ಸುದ್ದಿಯೊಂದು ಹೊರ ಬರುತ್ತಿದೆ. ಆರ್‌ಸಿಬಿ ಪರ ವಿರಾಟ್‌ ಕೊಹ್ಲಿ ಕೊನೆಯ ಬಾರಿಗೆ ಈ ಆವೃತ್ತಿಯಲ್ಲಿ ಕಾಣಿಸಿಕೊಳ್ಳುತ್ತಾರಾ? ಎಂಬ ಚರ್ಚೆಗಳು ಆರಂಭವಾಗಿವೆ.

IPL Chairman s Statement Sparks Kohli s IPL Retirement Rumours

ವಿರಾಟ್‌ ಐಪಿಎಲ್‌ನಿಂದ ನಿವೃತ್ತರಾಗಬಹುದು ಎಂಬ ಚರ್ಚೆಗಳು ಆರಂಭವಾಗಲು ಕಾರಣವಾಗಿದ್ದು, ಐಪಿಎಲ್‌ ಚೇರಮೆನ್‌ ಅರುಣ್ ಧುಮಲ್‌ ಅವರ ಆ ಒಂದು ಹೇಳಿಕೆ. ಅರುಣ್‌ ಧುಮಲ್‌ ವಿರಾಟ್‌ ಅವರಿಗೆ ಒಂದು ಬಾರಿ ಯೋಚಿಸಿ ಎಂದು ಹೇಳಿದ್ದು, ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಚರ್ಚೆ ಆರಂಭವಾಗಲು ಕಾರಣ ಏನು?

"ವಿರಾಟ್‌ ಕೊಹ್ಲಿ ಕ್ರಿಕೆಟ್‌ನ ದೊಡ್ಡ ರಾಯಭಾರಿ. ಅವರು ಮೊದಲ ಸೀಸನ್‌ಗಿಂತ ತುಂಬಾನೇ ಫಿಟ್ ಆಗಿದ್ದಾರೆ. ಕೊಹ್ಲಿ ಫಿಟ್ನೆಸ್‌ ಬಗ್ಗೆ ಯಾವುದೇ ಚರ್ಚೆಗಳು ಇಲ್ಲ. ಎಲ್ಲ ಕ್ರಿಕೆಟ್‌ ಪ್ರೇಮಿಗಳು ಕೊಹ್ಲಿ ಆಡುವುದನ್ನು ನೋಡಲು ಬಯಸುತ್ತಾರೆ. ಇದೇ ವೇಳೆ ವಿರಾಟ್‌ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಆಲೋಚಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ ಅವರು ಐಪಿಎಲ್‌ಗೆ ವಿದಾಯ ಹೇಳುತ್ತಾರೆ ಎಂದು ನಾನು ಭಾವಿಸುವಿದಿಲ್ಲ" ಎಂದು ಅರುಣ್‌ ಧುಮಲ್‌ ಹೇಳಿದ್ದಾರೆ.

ಪಂಜಾಬ್‌ ಕಿಂಗ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಐಪಿಎಲ್‌ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. ಈ ವೇಳೆ ಐಪಿಎಲ್‌ ಅಧ್ಯಕ್ಷ ಅರುಣ್‌ ಧುಮಲ್‌, ವಿರಾಟ್‌ ಕೊಹ್ಲಿ ಅವರ ಜೊತೆಗೆ ನಿವೃತ್ತಿ ಹಿಂಪಡೆಯುವಂತೆ ಕೇಳಲಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ವಿರಾಟ್ ಅವರು ತಮ್ಮ ನಿರ್ಧಾರದ ಬಗ್ಗೆ ಒಮ್ಮೆ ಪರಾಮರ್ಶಿಸುವಂತೆ ಕೇಳಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಅಹಮದಾಬಾದ್‌ನಲ್ಲಿ ಮಂಗಳವಾರ 18ನೇ ಆವೃತ್ತಿಯ ಫೈನಲ್‌ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ. ಈ ಬಾರಿ ಐಪಿಎಲ್‌ ಟ್ರೋಫಿಯನ್ನು ನೂತನ ತಂಡ ಎತ್ತುವುದು ಕನ್ಫರ್ಮ್.

Story first published: Monday, June 2, 2025, 13:20 [IST]
Other articles published on Jun 2, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+