ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2008ರಿಂದ ಐಪಿಎಲ್ 2022ರವರೆಗೆ ಫೈನಲ್ ಪ್ರವೇಶ ಪಡೆದುಕೊಂಡ ಎಲ್ಲಾ ತಂಡಗಳ ಪಟ್ಟಿ

IPL: Full list of finalists from IPL 2008 to IPL 2022 in Kannada

ಕಳೆದ ಮಾರ್ಚ್ ತಿಂಗಳ ಅಂತಿಮ ವಾರದಲ್ಲಿ ಆರಂಭವಾದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ನಾಳೆ ( ಮೇ 29 ) ನಡೆಯಲಿರುವ ಫೈನಲ್ ಪಂದ್ಯದ ಮೂಲಕ ತೆರೆ ಬೀಳಲಿದೆ.

ಆರ್‌ಸಿಬಿ ಟ್ರೋಫಿ ಆಸೆಗೆ ಕಲ್ಲು ಹಾಕಿದ ಬಟ್ಲರ್‌ಗೆ ಪ್ರಶಸ್ತಿಗಳ ಸುರಿಮಳೆ; ಒಂದೇ ಪಂದ್ಯದಲ್ಲಿ ಸಿಕ್ಕ ಹಣವೆಷ್ಟು?ಆರ್‌ಸಿಬಿ ಟ್ರೋಫಿ ಆಸೆಗೆ ಕಲ್ಲು ಹಾಕಿದ ಬಟ್ಲರ್‌ಗೆ ಪ್ರಶಸ್ತಿಗಳ ಸುರಿಮಳೆ; ಒಂದೇ ಪಂದ್ಯದಲ್ಲಿ ಸಿಕ್ಕ ಹಣವೆಷ್ಟು?

ಇನ್ನು ಈ ಬಾರಿ ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಪ್ರವೇಶಿಸುವಲ್ಲಿ ವಿಫಲವಾದರೆ, ನೂತನ ತಂಡಗಳಾದ ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇ ಆಫ್ ಸುತ್ತಿಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾದವು. ಈ ತಂಡಗಳ ಜತೆಗೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕೂಡ ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆದುಕೊಂಡವು. ಸದ್ಯ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತ ಲಕ್ನೋ ಸೂಪರ್ ಜೈಂಟ್ಸ್ ಟೂರ್ನಿಯಿಂದ ಹೊರಬಿದ್ದಿದ್ದರೆ, ನಂತರ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲುಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಟೂರ್ನಿಯಿಂದ ಹೊರಬಿತ್ತು.

ಆಡಿದ್ದು ಸಾಕು, ಮೊದಲು ಸ್ಟೇಡಿಯಂನಿಂದ ಆಚೆ ನಡೆಯಪ್ಪ: ಆರ್‌ಸಿಬಿ ಸ್ಟಾರ್ ಪ್ಲೇಯರ್ ವಿರುದ್ಧ ಫ್ಯಾನ್ಸ್ ಕಿಡಿ!

ಇತ್ತ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದಿದ್ದ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ನೇರವಾಗಿ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್ ಫೈನಲ್ ಪ್ರವೇಶವನ್ನು ಪಡೆದುಕೊಂಡಿದ್ದು, ಒಂದನೇ ಕ್ವಾಲಿಫೈಯರ್ ಪಂದ್ಯದ ನಂತರ ಮತ್ತೊಮ್ಮೆ ಗುಜರಾತ್ ಟೈಟನ್ಸ್ ವಿರುದ್ಧ ಫೈನಲ್ ಪಂದ್ಯದಲ್ಲಿ ಸೆಣಸಾಟ ನಡೆಸಲಿದೆ. ಹೀಗೆ ಈ ಬಾರಿ ಫೈನಲ್ ಪಂದ್ಯಕ್ಕೆ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಪ್ರವೇಶ ಪಡೆದುಕೊಂಡಿದ್ದು, ಐಪಿಎಲ್ ಉದ್ಘಾಟನಾ ಆವೃತ್ತಿಯಿಂದ ಈ ಬಾರಿಯ ಆವೃತ್ತಿಯವರೆಗೆ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿರುವ ಎಲ್ಲಾ ತಂಡಗಳ ಪಟ್ಟಿ ಮುಂದೆ ಇದೆ ನೋಡಿ.

ಎಲ್ಲಾ ಫೈನಲ್ ಪಂದ್ಯಗಳ ವಿವರ

ಎಲ್ಲಾ ಫೈನಲ್ ಪಂದ್ಯಗಳ ವಿವರ

2022 - ಗುಜರಾತ್ ಟೈಟನ್ಸ್ vs ರಾಜಸ್ಥಾನ್ ರಾಯಲ್ಸ್

2021 - ಚೆನ್ನೈ ಸೂಪರ್ ಕಿಂಗ್ಸ್ vs ಕೊಲ್ಕತ್ತಾ ನೈಟ್ ರೈಡರ್ಸ್

2020 - ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್

2019 - ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್

2018 - ಚೆನ್ನೈ ಸೂಪರ್ ಕಿಂಗ್ಸ್ vs ಸನ್ ರೈಸರ್ಸ್ ಹೈದರಾಬಾದ್

2017 - ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್

2016 - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್

2015 - ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್

2014 - ಕೋಲ್ಕತ್ತಾ ನೈಟ್ ರೈಡರ್ಸ್ vs ಕಿಂಗ್ಸ್ ಇಲೆವೆನ್ ಪಂಜಾಬ್

2013 - ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್

2012 - ಕೋಲ್ಕತ್ತಾ ನೈಟ್ ರೈಡರ್ಸ್ vs ಚೆನ್ನೈ ಸೂಪರ್ ಕಿಂಗ್ಸ್

2011 - ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು

2010 - ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್

2009 - ಡೆಕ್ಕನ್ ಚಾರ್ಜರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು

2008 - ರಾಜಸ್ಥಾನ್ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್

ಗುಜರಾತ್ ಗೆದ್ದರೆ ಹೊಸ ಚಾಂಪಿಯನ್ಸ್ ಜನನ

ಗುಜರಾತ್ ಗೆದ್ದರೆ ಹೊಸ ಚಾಂಪಿಯನ್ಸ್ ಜನನ

ಇನ್ನು ಇತ್ತಂಡಗಳ ನಡುವಿನ ಈ ಮಹತ್ವದ ಫೈನಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಗುಜರಾತ್ ಟೈಟನ್ಸ್ ತಂಡ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದರೆ ಹೊಸ ಚಾಂಪಿಯನ್ ತಂಡ ಹುಟ್ಟಲಿದೆ. ಒಂದುವೇಳೆ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆದ್ದರೆ 13 ವರ್ಷಗಳ ಬಳಿಕ ಮತ್ತೊಮ್ಮೆ ಟ್ರೋಫಿ ಗೆದ್ದ ಮೈಲಿಗಲ್ಲನ್ನು ರಾಯಲ್ಸ್ ನಿರ್ಮಿಸಲಿದೆ.

9 ಬಾರಿ ಪ್ಲೇ ಆಫ್ ಪ್ರವೇಶಿಸಿದೆ ಚೆನ್ನೈ ಸೂಪರ್ ಕಿಂಗ್ಸ್!

9 ಬಾರಿ ಪ್ಲೇ ಆಫ್ ಪ್ರವೇಶಿಸಿದೆ ಚೆನ್ನೈ ಸೂಪರ್ ಕಿಂಗ್ಸ್!

ಇನ್ನು ಈ ಬಾರಿ ಪ್ಲೇ ಆಫ್ ಪ್ರವೇಶಿಸುವಲ್ಲಿ ವಿಫಲವಾಗಿರುವ ಚೆನ್ನೈ ಸೂಪರ್ ಕಿಂಗ್ಸ್ 9 ಐಪಿಎಲ್ ಆವೃತ್ತಿಗಳಲ್ಲಿ ಫೈನಲ್ ಪಂದ್ಯ ತಲುಪುವುದರಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಅತಿ ಹೆಚ್ಚು ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿರುವ ತಂಡ ಎಂಬ ಹೆಗ್ಗಳಿಕೆಗೆ ಚೆನ್ನೈ ಸೂಪರ್ ಕಿಂಗ್ಸ್ ಪಾತ್ರವಾಗಿದೆ.

Story first published: Saturday, May 28, 2022, 14:10 [IST]
Other articles published on May 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X