ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ ಆಡಳಿತ ಮಂಡಳಿಯ ಸಭೆಗೆ ದಿನಾಂಕ ನಿಗದಿ: ಬ್ರಿಜೇಶ್ ಪಟೇಲ್

Ipl Governing Council Meeting Likely On August 2

ಐಪಿಎಲ್ ಆರಂಭಿಕ ದಿನಾಂಕವನ್ನು ಐಪಿಎಲ್ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಘೋಷಿಸಿದ ನಂತರ ಐಪಿಎಲ್ ಬಗೆಗಿನ ಕಾತುರತೆ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಯುಎಇನಲ್ಲಿ ಈ ಬಾರಿಯ ಐಪಿಎಲ್ ಆಯೋಜನೆಯಾಗುತ್ತಿದ್ದು ಈ ಬಗ್ಗೆ ಕೆಲ ಮಹತ್ವ ನಿರ್ಧಾರವನ್ನು ಅಂತಿಮಗೊಳಿಸಲು ಐಪಿಎಲ್ ಆಡಳಿತ ಮಂಡಳಿಯ ಸಭೆಯ ಮೇಲೆ ಎಲ್ಲರ ದೃಷ್ಠಿ ನೆಟ್ಟಿದೆ.

ಐಪಿಎಲ್ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಪಿಟಿಐ ಸುದ್ದಿ ಸಂಸ್ಥೆಯ ಜೊತೆಗೆ ಮಾತನಾಡಿದ್ದು ಐಪಿಎಲ್ ಆಡಳಿತ ಮಂಡಳಿಯ ಸಭೆ ಜುಲೈ 2ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ. ಬಿಸಿಸಿಐನ ಮತ್ತೊಂದು ಮೂಲದ ಪ್ರಕಾರ ಈ ಸಭೆಯಲ್ಲಿ ಐಪಿಎಲ್‌ನ ಎಲ್ಲಾ ಫ್ರಾಂಚೈಸಿಗಳು ಟೂರ್ನಮೆಂಟ್‌ನ ವಿಧಾನದ ಕುರಿತಾಗಿ ಸ್ಪಷ್ಟ ಚಿತ್ರಣವನ್ನು ದೊರೆಯಲಿದೆ ಎಂದು ತಿಳಿದು ಬಂದಿದೆ.

'ಅವನ ಕ್ರಿಕೆಟ್ ಎಲ್ಲೀವರೆಗೆ ಹೋಗುತ್ತೆ ನೋಡೋಣ': ರೋಹಿತ್ ಟೆಸ್ಟ್ ಭವಿಷ್ಯಕ್ಕೆ ಗಂಭೀರ್ ಹೇಳಿಕೆ'ಅವನ ಕ್ರಿಕೆಟ್ ಎಲ್ಲೀವರೆಗೆ ಹೋಗುತ್ತೆ ನೋಡೋಣ': ರೋಹಿತ್ ಟೆಸ್ಟ್ ಭವಿಷ್ಯಕ್ಕೆ ಗಂಭೀರ್ ಹೇಳಿಕೆ

ಆಡಳಿತ ಮಂಡಳಿಯ ಈ ಪ್ರಮುಖ ಸಭೆಯಲ್ಲಿ ಐಪಿಎಲ್ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ಹಾಗೂ ಈ ಬಾರಿಯ ಐಪಿಎಲ್ ಆವೃತ್ತಿ ಯುಎಇನಲ್ಲಿ ನಡೆಯುವ ಕಾರಣ ಅಲ್ಲಿನ ಸಿದ್ಧತೆಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಐಪಿಎಲ್ ಚೇರ್‌ಮನ್ ಬ್ರಿಜೇಶ್ ಪಟೇಲ್ ಕಳೆದವಾರ ಐಪಿಎಲ್ ಆರಂಭ ಹಾಗೂ ಅಂತ್ಯದ ದಿನಾಂಕಗಳನ್ನು ಬಹಿರಂಗವಾಗಿ ಘೋಷಿಸಿದ್ದರು. ಆದರೆ ಅಂತಿಮ ವೇಳಾಪಟ್ಟಿಯಿನ್ನೂ ಅಧಿಕೃತವಾಗಿ ಬಿಡುಗಡೆಯಾಗಿಲ್ಲ.

ರೊನಾಲ್ಡೋ, ಮೆಸ್ಸಿ, ನೇಮರ್‌ನಂತೆ ವಿಶಿಷ್ಠ ದಾಖಲೆ ಬರೆದ ವಿರಾಟ್ ಕೊಹ್ಲಿ!ರೊನಾಲ್ಡೋ, ಮೆಸ್ಸಿ, ನೇಮರ್‌ನಂತೆ ವಿಶಿಷ್ಠ ದಾಖಲೆ ಬರೆದ ವಿರಾಟ್ ಕೊಹ್ಲಿ!

ಮತ್ತೊಂದೆಡೆ ಐಪಿಎಲ್ 13ನೇ ಆವೃತ್ತಿಯನ್ನು ನಡೆಸಲು ಬಿಸಿಸಿಐ ಇನ್ನೂ ಸರ್ಕಾರದಿಂದ ಅನುಮತಿಯನ್ನು ಪಡೆದುಕೊಂಡಿಲ್ಲ. ಆದರೆ ಈ ಬಗ್ಗೆ ಕಾರ್ಯೋನ್ಮುಖವಾಗಿದ್ದು ಕೆಲವೇ ದಿನಗಳಲ್ಲಿ ಸರ್ಕಾರದಿಂದ ಈ ಬಗ್ಗೆ ಅನುಮತಿಪಡೆದುಕೊಳ್ಳುವ ವಿಶ್ವಾಸವನ್ನು ಬಿಸಿಸಿಐ ಹೊಂದಿದೆ. ಅನುಮತಿ ಪಡೆದ ಬಳಿಕವೇ ಅಂತಿಮ ವೇಳಾಪಟ್ಟಿ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆಯಿದೆ.

Story first published: Tuesday, July 28, 2020, 17:01 [IST]
Other articles published on Jul 28, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X