ಅಕ್ಷರ್ ಪಟೇಲ್ ಹೆಸರಿನಲ್ಲಿದೆ ಈ ವಿಶೇಷ ಐಪಿಎಲ್ ದಾಖಲೆ ; ಸರಿಗಟ್ಟುವುದು ಸುಲಭದ ಮಾತಲ್ಲ

ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದು, ಉಳಿದಿರುವ 31 ಪಂದ್ಯಗಳನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಮುಂದುವರೆಸುವ ಆಲೋಚನೆಯನ್ನು ಬಿಸಿಸಿಐ ನಡೆಸುತ್ತಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಬೌಲರ್ ಅಕ್ಷರ್ ಪಟೇಲ್ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ 4 ಪಂದ್ಯಗಳನ್ನಾಡಿ 6 ವಿಕೆಟ್‍ಗಳನ್ನು ಪಡೆದು ಜವಾಬ್ದಾರಿಯುತ ಪ್ರದರ್ಶನವನ್ನು ನೀಡಿದರು. ಡೆಲ್ಲಿ ಕ್ಯಾಪಿಟಲ್ಸ್ ಆಡಿದ್ದ 8 ಪಂದ್ಯಗಳ ಪೈಕಿ 4 ಪಂದ್ಯಗಳನ್ನು ಮಾತ್ರ ಅಕ್ಷರ್ ಪಟೇಲ್ ಆಡಿದ್ದು ಮುಂದಿನ ಪಂದ್ಯಗಳಲ್ಲಿ ಹೆಚ್ಚಿನ ಅವಕಾಶಕ್ಕಾಗಿ ಎದುರು ನೋಡುತ್ತಿದ್ದರು. ಹೀಗೆ ಪ್ರಸ್ತುತ ಟೂರ್ನಿಯಲ್ಲಿ ಜವಾಬ್ದಾರಿಯುತ ಆಟವನ್ನಾಡಿದ್ದ ಅಕ್ಷರ್ ಪಟೇಲ್ ಐಪಿಎಲ್ ಇತಿಹಾಸದಲ್ಲಿ ವಿಶೇಷ ದಾಖಲೆಯನ್ನು ಹೊಂದಿದ್ದಾರೆ.
ಹೌದು ಐಪಿಎಲ್ ಇತಿಹಾಸದಲ್ಲಿ ಒಂದೇಒಂದು ನೋಬಾಲ್ ಎಸೆಯದೇ ಅತಿಹೆಚ್ಚು ಎಸೆತಗಳನ್ನು ಎಸೆದ ಆಟಗಾರ ಎಂಬ ಬಲು ಅಪರೂಪದ ದಾಖಲೆಯನ್ನು ಅಕ್ಷರ್ ಪಟೇಲ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಅಕ್ಷರ್ ಪಟೇಲ್ ಐಪಿಎಲ್ ಇತಿಹಾಸದಲ್ಲಿ ಕೇವಲ ಒಂದೇಒಂದು ನೋಬಾಲ್ ಹಾಕದೇ 2155 ಎಸೆತಗಳನ್ನು ಎಸೆಯುವ ಮೂಲಕ ಈ ದಾಖಲೆಯನ್ನು ಮಾಡಿದ್ದಾರೆ. ಅಕ್ಷರ್ ಪಟೇಲ್ ಹೊರತುಪಡಿಸಿ ರಶೀದ್ ಖಾನ್ 1644, ಶಕೀಬ್ ಅಲ್ ಹಸನ್ 1388, ಕರ್ಣ್ ಶರ್ಮ 1222 ಹಾಗೂ ಶೇನ್ ವಾರ್ನ್ 1194 ಎಸೆತಗಳನ್ನು ಯಾವುದೇ ನೋಬಾಲ್ ಹಾಕದೆ ಎಸೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications