ಐಪಿಎಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುವತ್ತ ಈ ಕನ್ನಡಿಗನ ಚಿತ್ತ

ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಟ್ರೋಫಿಗಾಗಿ ಹತ್ತು ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಈಗಾಗಲೇ ನೂತನ ಫ್ರಾಂಚೈಸಿಗಳಾಗಿ ಲಕ್ನೋ ಮತ್ತು ಅಹ್ಮದಾಬಾದ್ ಸೇರ್ಪಡೆಗೊಂಡಿದ್ದು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಣಕ್ಕಿಳಿಯಲಿವೆ.

ದ್ರಾವಿಡ್ ಮತ್ತು ನಾನು ಒಂದೇ ಕುಟುಂಬದವರು ಎಂದ ನಟಿ; ದ್ರಾವಿಡ್‌ಗೂ ಆ ನಟಿಗೂ ಇರುವ ನಂಟೇನು?ದ್ರಾವಿಡ್ ಮತ್ತು ನಾನು ಒಂದೇ ಕುಟುಂಬದವರು ಎಂದ ನಟಿ; ದ್ರಾವಿಡ್‌ಗೂ ಆ ನಟಿಗೂ ಇರುವ ನಂಟೇನು?

ಹೀಗೆ ನೂತನವಾಗಿ ಸೇರ್ಪಡೆಗೊಂಡಿರುವ ಲಕ್ನೋ ಫ್ರಾಂಚೈಸಿಯ ತಂಡಕ್ಕೆ ಕೆಎಲ್ ರಾಹುಲ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ತೀರ್ಮಾನ ಮಾಡಲಾಗಿದ್ದು ಇತ್ತೀಚೆಗಷ್ಟೇ ನಡೆದ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡದಲ್ಲಿ ಉಳಿದುಕೊಳ್ಳದೇ ಹೊರನಡೆದರು. ಹೌದು, ಕಳೆದೆರಡು ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿದ್ದ ಕೆಎಲ್ ರಾಹುಲ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲಕ್ನೋ ತಂಡವನ್ನು ನಾಯಕನಾಗಿ ಮುನ್ನಡೆಸುವುದು ಬಹುತೇಕ ಖಚಿತವಾಗಿದೆ. ಹೀಗೆ ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡದಿಂದ ಹೊರ ನಡೆದ ನಂತರ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಮಯಾಂಕ್ ಅಗರ್ವಾಲ್ ಮತ್ತು ಅರ್ಶದೀಪ್ ಸಿಂಗ್ ಅವರನ್ನು ರೀಟೈನ್ ಮಾಡಿಕೊಂಡಿತು.

ಬಲಿಷ್ಠ ಡೆಲ್ಲಿಗೆ ಮಣ್ಣು ಮುಕ್ಕಿಸಿದ ಬೆಂಗಳೂರು: ಪಿಕೆಎಲ್ ಇತಿಹಾಸದಲ್ಲೇ ಇದು 2ನೇ ದೊಡ್ಡ ಗೆಲುವು!ಬಲಿಷ್ಠ ಡೆಲ್ಲಿಗೆ ಮಣ್ಣು ಮುಕ್ಕಿಸಿದ ಬೆಂಗಳೂರು: ಪಿಕೆಎಲ್ ಇತಿಹಾಸದಲ್ಲೇ ಇದು 2ನೇ ದೊಡ್ಡ ಗೆಲುವು!

ಹೀಗೆ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿಯೇ ಉಳಿದುಕೊಂಡಿರುವ ಮಯಾಂಕ್ ಅಗರ್ವಾಲ್ ಅವರ ಹೆಗಲಿಗೆ ಪಂಜಾಬ್ ಕಿಂಗ್ಸ್ ತಂಡದ ನಾಯಕತ್ವದ ಜವಾಬ್ದಾರಿಯನ್ನು ಹಾಕಲಿದ್ದು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಯಾಂಕ್ ಅಗರ್ವಾಲ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಹೀಗೆ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಲಿರುವ ಮಯಾಂಕ್ ಅಗರ್ವಾಲ್ ಇತ್ತೀಚಿಗಷ್ಟೆ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಪಂಜಾಬ್ ಕಿಂಗ್ಸ್ ತಂಡ ಇಲ್ಲದಿದ್ದರೆ ತಾನು ಬೇರೆ ಯಾವ ತಂಡದ ಪರ ಕಣಕ್ಕಿಳಿಯಲು ಇಷ್ಟಪಡುತ್ತೇನೆ ಎಂಬ ವಿಚಾರವನ್ನು ಈ ಕೆಳಕಂಡಂತೆ ಬಿಚ್ಚಿಟ್ಟಿದ್ದಾರೆ.

ಪಂಜಾಬ್ ಕಿಂಗ್ಸ್ ಇಲ್ಲದಿದ್ದರೆ ಈ ತಂಡದ ಪರ ಕಣಕ್ಕಿಳಿಯಲು ಇಚ್ಛಿಸುತ್ತೇನೆ ಎಂದ ಮಯಾಂಕ್ ಅಗರ್ವಾಲ್

ಪಂಜಾಬ್ ಕಿಂಗ್ಸ್ ಇಲ್ಲದಿದ್ದರೆ ಈ ತಂಡದ ಪರ ಕಣಕ್ಕಿಳಿಯಲು ಇಚ್ಛಿಸುತ್ತೇನೆ ಎಂದ ಮಯಾಂಕ್ ಅಗರ್ವಾಲ್

ಪಂಜಾಬ್ ಕಿಂಗ್ಸ್ ತಂಡವನ್ನು ಹೊರತುಪಡಿಸಿ ಬೇರೆ ಯಾವ ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಪರ ಕಣಕ್ಕಿಳಿಯುತ್ತೀರ ಎಂಬ ಪ್ರಶ್ನೆಗೆ ಉತ್ತರಿಸಿರುವ ಮಯಾಂಕ್ ಅಗರ್ವಾಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಲು ಇಚ್ಛಿಸುತ್ತೇನೆ ಎಂದು ಉತ್ತರಿಸಿದ್ದಾರೆ. ಇನ್ನು 2011ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಪದಾರ್ಪಣೆ ಮಾಡಿದ್ದ ಮಯಾಂಕ್ ಅಗರ್ವಾಲ್ 3 ಆವೃತ್ತಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕಣಕ್ಕಿಳಿದಿದ್ದರು.

ಕೆ ಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದ ಮಯಾಂಕ್

ಕೆ ಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದ ಮಯಾಂಕ್

ಇನ್ನು 2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯವೊಂದರಲ್ಲಿ ಕೆಎಲ್ ರಾಹುಲ್ ಅಲಭ್ಯರಾದಾಗ ಪಂಜಾಬ್ ಕಿಂಗ್ಸ್ ತಂಡವನ್ನು ಮಯಾಂಕ್ ಅಗರ್ವಾಲ್ ನಾಯಕನಾಗಿ ಮುನ್ನಡೆಸಿದ್ದರು. ಮಯಾಂಕ್ ಅಗರ್ವಾಲ್ ನಾಯಕತ್ವದಡಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಆ ಪಂದ್ಯವನ್ನು ಸೋತರೂ ಸಹ ಓರ್ವ ನಾಯಕನಾಗಿ ಮಯಾಂಕ್ ಜವಬ್ದಾರಿಯುತ ಪ್ರದರ್ಶನವನ್ನು ನೀಡಿದ್ದರು. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಆ ಪಂದ್ಯದಲ್ಲಿ 106 ರನ್ ಸಿಡಿಸಿ ಮಯಾಂಕ್ ಅಗರ್ವಾಲ್ ಅಬ್ಬರಿಸಿದ್ದರು.

Mayank Agarwal ಮಾಡಿದ ಎಡವಟ್ಟಿಗೆ ಬೇಸರದಿಂದ Virat ಮಾಡಿದ್ದೇನು? | Oneindia Kannada
ಮಯಾಂಕ್ ಅಗರ್ವಾಲ್ ಐಪಿಎಲ್ ಅಂಕಿ ಅಂಶ

ಮಯಾಂಕ್ ಅಗರ್ವಾಲ್ ಐಪಿಎಲ್ ಅಂಕಿ ಅಂಶ

ಕನ್ನಡಿಗ ಮಯಾಂಕ್ ಅಗರ್ವಾಲ್ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 100 ಪಂದ್ಯಗಳನ್ನಾಡಿದ್ದು 2131 ರನ್ ಕಲೆಹಾಕಿದ್ದಾರೆ. ಈ ಪೈಕಿ ಮಯಾಂಕ್ ಅಗರ್ವಾಲ್ 1 ಶತಕ ಮತ್ತು 11 ಅರ್ಧಶತಕಗಳನ್ನೂ ಸಹ ಸಿಡಿಸಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Thursday, January 13, 2022, 14:39 [IST]
Other articles published on Jan 13, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X