ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆರ್‌ಸಿಬಿ ಅಲ್ಲ ಮುಂಬೈ ಇಂಡಿಯನ್ಸ್‌ಗೆ ರಾಹುಲ್?; ಅನುಮಾನ ಸೃಷ್ಟಿಸಿದ ಕೆಎಲ್ ರಾಹುಲ್‌ರ ಈ ನಡೆ!

IPL: KL Rahul started to follow Mumbai Indians official account on Instagram

ಸದ್ಯ ಕ್ರಿಕೆಟ್ ಅಭಿಮಾನಿಗಳ ಚಿತ್ತ ಪ್ರಸ್ತುತ ಯುಎಇಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯತ್ತ ಇದೆ. ಇದಕ್ಕೂ ಮುನ್ನ ಇದೇ ಯುಎಇ ನೆಲದಲ್ಲಿ ನಡೆದಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಫೈನಲ್ ಪಂದ್ಯದಲ್ಲಿ ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವುದರ ಮೂಲಕ ನಾಲ್ಕನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು.

'ಒಬ್ಬನಿಂದ ತಂಡವಲ್ಲ'; ಕೆಎಲ್ ರಾಹುಲ್ ಉಳಿಸಿಕೊಳ್ಳುವ ಕುರಿತು ತುಟಿಬಿಚ್ಚಿದ ಪಂಜಾಬ್ ಕಿಂಗ್ಸ್ ಮಾಲೀಕರು!'ಒಬ್ಬನಿಂದ ತಂಡವಲ್ಲ'; ಕೆಎಲ್ ರಾಹುಲ್ ಉಳಿಸಿಕೊಳ್ಳುವ ಕುರಿತು ತುಟಿಬಿಚ್ಚಿದ ಪಂಜಾಬ್ ಕಿಂಗ್ಸ್ ಮಾಲೀಕರು!

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೆಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿ ಪ್ಲೇಆಫ್ ಸುತ್ತನ್ನು ಪ್ರವೇಶಿಸದೇ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿತ್ತು. ಹೀಗೆ ಟೂರ್ನಿ ಮುಗಿದ ನಂತರ ಕೆಎಲ್ ರಾಹುಲ್ ಸಾಮಾಜಿಕ ಜಾಲತಾಣದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಮತ್ತು ತಮ್ಮ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ಬರಹವೊಂದನ್ನು ಬರೆದುಕೊಂಡಿದ್ದರು. ಕೆಎಲ್ ರಾಹುಲ್ ಅವರ ಆ ಒಂದು ಪೋಸ್ಟ್ ಮುಂದಿನ ಆವೃತ್ತಿಯಲ್ಲಿ ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡವನ್ನು ತೊರೆದು ಬೇರೆ ತಂಡವನ್ನು ಸೇರಲಿದ್ದಾರೆ ಎನ್ನುವ ಅನುಮಾನವನ್ನು ಹೆಚ್ಚಿಸಿತ್ತು.

ದ್ರಾವಿಡ್ 5ರಿಂದ 10 ವರ್ಷದ ಯೋಜನೆಯೊಂದಿಗೆ ಟೀಮ್ ಇಂಡಿಯಾ ಕೋಚ್ ಆಗುತ್ತಾರೆ ಎಂದ ಮಾಜಿ ಕ್ರಿಕೆಟಿಗದ್ರಾವಿಡ್ 5ರಿಂದ 10 ವರ್ಷದ ಯೋಜನೆಯೊಂದಿಗೆ ಟೀಮ್ ಇಂಡಿಯಾ ಕೋಚ್ ಆಗುತ್ತಾರೆ ಎಂದ ಮಾಜಿ ಕ್ರಿಕೆಟಿಗ

ಹೌದು, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಲಕ್ನೋ ಮತ್ತು ಅಹಮದಾಬಾದ್ ನೂತನ ತಂಡಗಳ ಸೇರ್ಪಡೆಯಾಗುತ್ತಿದ್ದು, ಟೂರ್ನಿಯ ಆರಂಭಕ್ಕೂ ಮುನ್ನ ಮೆಗಾ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ ಅಸ್ತಿತ್ವದಲ್ಲಿರುವ ಫ್ರಾಂಚೈಸಿಗಳು ಉಳಿಸಿಕೊಳ್ಳಬಹುದಾದ ಆಟಗಾರರನ್ನು ಆಯ್ಕೆ ಮಾಡಿಕೊಂಡು ಇತರ ಎಲ್ಲಾ ಆಟಗಾರರನ್ನೂ ಮೆಗಾ ಹರಾಜಿಗೆ ಬಿಟ್ಟುಕೊಡಬೇಕಾಗಿದೆ. ಹೀಗಾಗಿ ಕೆಎಲ್ ರಾಹುಲ್ ಕೂಡ ಪಂಜಾಬ್ ಕಿಂಗ್ಸ್ ತಂಡದಿಂದ ಹೊರ ಬೀಳಲಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿ ನಾಯಕರಾಗಲಿದ್ದಾರೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ವೈರಲ್ ಆಗಿತ್ತು. ಆದರೆ ಆ ಸುದ್ದಿ ಕುರಿತಾಗಿ ಕೆಎಲ್ ರಾಹುಲ್ ಅವರ ಇತ್ತೀಚೆಗಿನ ನಡೆಯೊಂದು ಅನುಮಾನವನ್ನು ಹುಟ್ಟಿಸಿದೆ. ಹೀಗೆ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರುವುದರ ಕುರಿತು ಅನುಮಾನ ಹುಟ್ಟಲು ಕಾರಣವಾದ ಅಂಶ ಈ ಕೆಳಕಂಡಂತಿದೆ...

ಮುಂಬೈ ಇಂಡಿಯನ್ಸ್ ಫಾಲೋ ಮಾಡಿದ ಕೆಎಲ್ ರಾಹುಲ್

ಮುಂಬೈ ಇಂಡಿಯನ್ಸ್ ಫಾಲೋ ಮಾಡಿದ ಕೆಎಲ್ ರಾಹುಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೆಎಲ್ ರಾಹುಲ್ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ದೊಡ್ಡಮಟ್ಟದಲ್ಲಿ ಹಬ್ಬಿತ್ತು. ಆದರೆ ಇದೀಗ ಕೆಎಲ್ ರಾಹುಲ್ ತಮ್ಮ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಖಾತೆಯನ್ನು ಫಾಲೋ ಮಾಡಲು ಆರಂಭಿಸಿದ್ದಾರೆ. ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡವನ್ನು ಹೊರತುಪಡಿಸಿ ಬೇರೆ ಯಾವುದೇ ಐಪಿಎಲ್ ಫ್ರಾಂಚೈಸಿ ಖಾತೆಯನ್ನೂ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅನುಸರಿಸುತ್ತಿಲ್ಲ. ಆದರೆ ಈಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖಾತೆಯನ್ನು ಕೆಎಲ್ ರಾಹುಲ್ ಅನುಸರಿಸಲು ಆರಂಭಿಸಿರುವುದು ಮುಂದಿನ ಆವೃತ್ತಿಯಲ್ಲಿ ಕೆ ಎಲ್ ರಾಹುಲ್ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಲಿದ್ದಾರಾ ಎಂಬ ಅನುಮಾನವನ್ನು ಹುಟ್ಟುಹಾಕಿದೆ.

ಕೆಎಲ್ ರಾಹುಲ್ ಉಳಿಸಿಕೊಳ್ಳುವ ಕುರಿತು ಪಂಜಾಬ್ ಕಿಂಗ್ಸ್ ಮಾಲೀಕರು ಹೇಳಿದ್ದಿಷ್ಟು

ಕೆಎಲ್ ರಾಹುಲ್ ಉಳಿಸಿಕೊಳ್ಳುವ ಕುರಿತು ಪಂಜಾಬ್ ಕಿಂಗ್ಸ್ ಮಾಲೀಕರು ಹೇಳಿದ್ದಿಷ್ಟು

ಇತ್ತೀಚಿಗಷ್ಟೇ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ಸಹ ಮಾಲೀಕರಾದ ನೆಸ್ ವಾಡಿಯಾ ಕೆ ಎಲ್ ರಾಹುಲ್ ಅವರನ್ನು ಮುಂಬರಲಿರುವ ಐಪಿಎಲ್ ಆವೃತ್ತಿಯಲ್ಲಿ ಉಳಿಸಿಕೊಳ್ಳುವ ಕುರಿತು ಮಾತನಾಡಿದ್ದರು. "ಕೆಎಲ್ ರಾಹುಲ್ ನಾಯಕನಾಗಿ ಕಳೆದೆರಡು ವರ್ಷಗಳಲ್ಲಿ ಕಷ್ಟದ ಸಂದರ್ಭದಲ್ಲಿಯೂ ಪಂಜಾಬ್ ಕಿಂಗ್ಸ್ ತಂಡವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿದ್ದಾರೆ, ಮುಂಬರುವ ಐಪಿಎಲ್ ಆವೃತ್ತಿಯಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದರ ಕುರಿತು ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಆದರೆ ಕ್ರಿಕೆಟ್ ಎಂಬುದು ಹನ್ನೊಂದು ಆಟಗಾರರ ಆಟವೇ ಹೊರತು ಓರ್ವ ಆಟಗಾರನಿಂದ ಇಡೀ ತಂಡವಲ್ಲ. ನಾವು ಆಟಗಾರರ ನಿರ್ಧಾರವನ್ನು ಪರಿಗಣಿಸಿ ಮುಂದೆ ಸಾಗಬೇಕು" ಎಂಬ ಹೇಳಿಕೆಯನ್ನು ನೀಡುವುದರ ಮೂಲಕ ನೆಸ್ ವಾಡಿಯಾ ಕೆ ಎಲ್ ರಾಹುಲ್ ಅವರನ್ನು ಉಳಿಸಿಕೊಳ್ಳುವುದರ ಕುರಿತು ಧನಾತ್ಮಕ ಹೇಳಿಕೆಯನ್ನು ನೀಡಲಿಲ್ಲ.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೆಎಲ್ ರಾಹುಲ್ ಅಬ್ಬರ

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೆಎಲ್ ರಾಹುಲ್ ಅಬ್ಬರ

ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ಪರ 13 ಪಂದ್ಯಗಳನ್ನಾಡಿ 626 ರನ್ ಕಲೆ ಹಾಕಿದ್ದಾರೆ. ಈ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೆ ಎಲ್ ರಾಹುಲ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದರು.

Story first published: Saturday, October 30, 2021, 10:00 [IST]
Other articles published on Oct 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X