Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL Auction 2025: ಆರ್‌ಸಿಬಿ ತಂಡದಲ್ಲಿ ಸ್ಥಾನ ಪಡೆದ ಆಟಗಾರರ ಪಟ್ಟಿ

ಈ ಬಾರಿಯ ಐಪಿಎಲ್‌ ಮೆಗಾ ಹರಾಜಿನಲ್ಲಿ ಆರ್‌ಸಿಬಿ ಅಳೆದು ತೂಗಿ ಆಟಗಾರರಿಗೆ ಮಣೆ ಹಾಕಿದೆ. ಈ ಮೆಗಾ ಹರಾಜಿನಲ್ಲಿ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ. ಆರ್‌ಸಿಬಿ ತನ್ನ ತಂಡವನ್ನು ಬಲಿಷ್ಠ ಮಾಡಿಕೊಳ್ಳುವ ದೃಷ್ಟಿಯಿಂದ ಹಲವು ಆಟಗಾರರಿಗೆ ಮಣೆ ಹಾಕಿದೆ. ಈ ವೇಳೆ ಹಲವು ಸ್ಟಾರ್ ಆಟಗಾರರು ತಂಡ ಸೇರಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಸೇರಿದ ಆಟಗಾರರ ಪಟ್ಟಿ ಇಲ್ಲಿದೆ.

ಇಂಗ್ಲೆಂಡ್‌ ತಂಡದ ಸ್ಟಾರ್ ಆಲ್‌ರೌಂಡರ್‌ ಲಿಯಾಮ್‌ ಲಿವಿಂಗ್‌ ಸ್ಟೋನ್ ಅವರಿಗೆ ಆರ್‌ಸಿಬಿ ಆರಂಭದಲ್ಲಿ ಮಣೆ ಹಾಕಿತು. ಇವರು ಮಿಡ್ಲ್‌ ಆರ್ಡರ್‌ ಬ್ಯಾಟರ್‌ ಹಾಗೂ ಸ್ಪಿನ್ ಬೌಲಿಂಗ್ ನಡೆಸಬಲ್ಲ ಕ್ಷಮತೆಯನ್ನು ಹೊಂದಿದ್ದಾರೆ. ಇವರ ಮೂಲ ಬೆಲೆಗಿಂತ ಸುಮಾರು ನಾಲ್ಕು ಪಟ್ಟು ಹೆಚ್ಚಿನ ಹಣವನ್ನು ನೀಡಿ ಆರ್‌ಸಿಬಿ ತಮ್ಮ ತಂಡಕ್ಕೆ ಸೇರಿಸಿಕೊಂಡಿತು. ಆರ್‌ಸಿಬಿ 8.75 ಕೋಟಿ ತಂಡಕ್ಕೆ ಸೇರಿಸಿಕೊಂಡಿತು.

IPL Mega Auction 2025 Full List of Players Bought by RCB team with Price Details in kannada

ಜಿತೇಶ್ ಶರ್ಮಾ

ಭಾರತದ ಆಟಗಾರ ಜಿತೇಶ್ ಶರ್ಮಾ ಅವರನ್ನು ಆರ್‌ಸಿಬಿ ತಮ್ಮ ತಂಡಕ್ಕೆ ಬರ ಮಾಡಿಕೊಳ್ಳುವಲ್ಲಿ ಸಫಲವಾಗಿದೆ. ಇವರು ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಪಂಜಾಬ್‌ ಕಿಂಗ್ಸ್ ತಂಡದ ಪರ ಆಡಿದ್ದರು. ಇವರಿಗೆ ಆರ್‌ಸಿಬಿ 11 ಕೋಟಿ ನೀಡಿ ಸೇರಿಸಿಕೊಂಡಿದೆ. ಇವರು ಮಿಡ್ಲ್ ಆರ್ಡರ್‌ನಲ್ಲಿ ಸ್ಥಿರವಾಗಿ ಬ್ಯಾಟ್ ಮಾಡಬಲ್ಲರು.

ಸ್ಫೋಟಕ ಬ್ಯಾಟರ್‌

ಇಂಗ್ಲೆಂಡ್ ತಂಡದ ಸ್ಟಾರ್‌ ವಿಕೆಟ್‌ ಕೀಪರ್ ಬ್ಯಾಟರ್‌ ಫಿಲ್‌ ಸಾಲ್ಟ್‌ ಅವರಿಗೆ ತಂಡದಲ್ಲಿ ಸೇರಿಸಿಕೊಳ್ಳುವಲ್ಲಿ ಆರ್‌ಸಿಬಿ ಸಫಲವಾಗಿದೆ. ಟಾಪ್‌ ಆರ್ಡರ್‌ ಬ್ಯಾಟರ್ ಆಗಿರುವ ಇವರು ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಂಚು ಹರಿಸಿದ್ದಾರೆ. 11.50 ಕೋಟಿ ನೀಡಿತು. ಇವರು ಸ್ಫೋಟಕ ಬ್ಯಾಟಿಂಗ್‌ನಿಂದ ಹೆಸರುವಾಸಿ.

ವಿದೇಶಿ ವೇಗಿಗೆ ಮಣೆ

ತಮ್ಮ ಬಿಗುವಿನ ದಾಳಿಯಿಂದಲೇ ಹೆಸರುವಾಸಿಯಾಗಿರುವ ಆಟಗಾರ ಜೋಶ್‌ ಹ್ಯಾಜಲ್‌ವುಡ್‌, ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಬಿಗುವಿನ ದಾಳಿ ಸಂಘಟಿಸಿದ್ದರು. ಇವರು ಪವರ್‌ ಪ್ಲೇ ಹಾಗೂ ಡೆತ್‌ ಓವರ್‌ಗಳಲ್ಲಿ ಎದುರಾಳಿಗಳಿಗೆ ಕಾಡಬಲ್ಲ ಕ್ಷಮತೆಯನ್ನು ಗುರುತಿಸಿ ಆರ್‌ಸಿಬಿ ಇವರಿಗೆ ಮಣೆ ಹಾಕಿದ್ದು, ಇವರಿಗೆ 12.50 ಕೋಟಿ ನೀಡಿ ತಂಡಕ್ಕೆ ಸೇರಿಸಿಕೊಂಡಿದೆ.

Story first published: Sunday, November 24, 2024, 20:24 [IST]
Other articles published on Nov 24, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+