ಆರ್‌ಸಿಬಿ ತಂಡ ಸೇರಿದ ಸ್ಫೊಟಕ ಬ್ಯಾಟರ್ ಫಿಲ್ ಸಾಲ್ಟ್
ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟರ್ ಫಿಲ್ ಸಾಲ್ಟ್ ಅವರನ್ನು ಕೊಳ್ಳುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಇವರಿಗೆ ಆರ್‌ಸಿಬಿ 11.50 ಕೋಟಿ ರೂಪಾಯಿ ನೀಡಿ ಆರ್‌ಸಿಬಿ ತಮ್ಮ ತಂಡಕ್ಕೆ ಬರಮಾಡಿಕೊಂಡಿತು.
ಸ್ಫೋಟಕ ವಿಕೆಟ್ ಕೀಪರ್ ಬ್ಯಾಟರ್ ಫಿಲ್ ಸಾಲ್ಟ್ ಅವರನ್ನು ಕೊಳ್ಳಲು ಆರ್‌ಸಿಬಿ ಹಾಗೂ ಕೆಕೆಆರ್ ಹಣವನ್ನು ಹೂಡಿದವು. 28 ವರ್ಷದ ಇಂಗ್ಲೆಂಡ್ ತಂಡದ ಆಟಗಾರ ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದಲೇ ಹೆಸರು ವಾಸಿ. ಇವರು ಈಗಾಗಲೇ ಇಂಗ್ಲೆಂಡ್ ಪರ 38 ಟಿ20 ಪಂದ್ಯಗಳಲ್ಲಿ 165.32 ಸ್ಟ್ರೈಕ್ ರೇಟ್‌ನಲ್ಲಿ 1106 ರನ್ ಸಿಡಿಸಿದ್ದು, ಇವರ ಅನುಭವಕ್ಕೆ ಆರ್‌ಸಿಬಿ ಮಣೆ ಹಾಕಿದೆ. ಇವರು ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3 ಶತಕ ಹಾಗೂ 4 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಫಿಲಿಪ್ ಸಾಲ್ಟ್: ಇಂಗ್ಲೆಂಡ್ ತಂಡದ ವಿಕೆಟ್‌ಕೀಪರ್-ಬ್ಯಾಟರ್ ಫಿಲಿಪ್ ಸಾಲ್ಟ್ ಸ್ಪೋಟಕ ಬ್ಯಾಟಿಂಗ್‌ಹೆ ಹೆಸರುವಾಸಿಯಾಗಿದ್ದಾರೆ. ಐಪಿಎಲ್ 2024ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಪರ ಫಿಲಿಪ್ ಸಾಲ್ಟ್ ಆರಂಭಿಕ ಬ್ಯಾಟರ್ ಆಗಿ ಬಿಗ್ ಇನ್ನಿಂಗ್ಸ್ ಆಡಿದ್ದರು. ಈ ಮೂಲಕ ಕೆಕೆಆರ್ ಫೈನಲ್ ತಲುಪಲು ನೆರವಾಗಿದ್ದರು. ಐಪಿಎಲ್‌ನಲ್ಲಿ ಕೇವಲ 21 ಪಂದ್ಯಗಳನ್ನು ಆಡಿರುವ ಫಿಲಿಪ್ ಸಾಲ್ಟ್ 653 ರನ್‌ಗಳನ್ನು ಬಾರಿಸಿದ್ದಾರೆ. ಇದರಲ್ಲಿ 6 ಅರ್ಧಶತಕಗಳು ಕೂಡಿವೆ. ಸ್ಪೋಟಕ ಬ್ಯಾಟಿಂಗ್ ಜೊತೆಗೆ ಚುರುಕು ವಿಕೆಟ್‌ಕೀಪಿಂಗ್‌ನಲ್ಲಿಯೂ ಮುಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications