Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ ಆರಂಭದ ಬಗ್ಗೆ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಮಾತು

Ipl Might Happen When Things Settle Down - Rohit Sharma

ಕೊರೊನಾ ವೈರಸ್‌ ಭೀತಿಯಿಂದ ವಿಶ್ವಾದ್ಯಂತ ಎಲ್ಲಾ ಕ್ರೀಡಾ ಕೂಟಗಳನ್ನೂ ಮುಂದೂಡಲಾಗಿದೆ. ಐಪಿಎಲ್‌ಅನ್ನು ಕೂಡ ಏಪ್ರಿಲ್ 14ರ ವರೆಗೆ ಮುಂದೂಡಲಾಗಿದ್ದು ಕೊರೊನಾ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಐಪಿಎಲ್ ನಡೆಯುವುದು ಅನುಮಾನವೆನಿಸಿದೆ. ಈ ಮಧ್ಯೆ ಟೀಮ್ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ ಐಪಿಎಲ್ ಆರಂಭವಾಗುವ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಬಳಿಕ ಐಪಿಎಲ್ ಆರಂಭವಾಗಲಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಮಾತನಾಡಿದ ರೋಹಿತ್ ಶರ್ಮಾ ಐಪಿಎಲ್ ಆರಂಭದ ಬಗ್ಗೆ ಹೀಗೆ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಮುಂದಿನ ಭಾನುವಾರ ಐಪಿಎಲ್ ಆರಂಭವಾಗಬೇಕಿತ್ತು. ಆದರೆ ವಿಶ್ವದಲ್ಲಿ ಕೊರೊನಾ ವೈರಸ್ ಅಟ್ಟಹಾಸವನ್ನು ಮೆರೆಯುತ್ತಿದೆ. ಭಾರತದಲ್ಲೂ ಸಾಕಷ್ಟು ಪ್ರಮಾಣದಲ್ಲಿ ವ್ಯಾಪಿಸುತ್ತಿದೆ. ಏಪ್ರಿಲ್ 15ರ ವರೆಗೆ ಮುಂದೂಡಲಾಗಿತ್ತು.

ಮತ್ತೊಂದೆಡೆ ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ ಘೋಷಿಸಲಾಗಿದೆ. ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವೇ ಒಂದಾಗುವ ಸಂದರ್ಭ ಉಂಟಾಗಿದೆ. ಹೀಗಾಗಿ ಐಪಿಎಲ್ ಯಾವಾಗ ಆರಂಭವಾಗಲಿದೆ ಎಂಬ ಪ್ರಶ್ನೆಗೆ ಸಧ್ಯಕ್ಕೆ ಉತ್ತರ ಸಿಗುವ ಪರಿಸ್ಥಿತಿಯಿಲ್ಲ.

ಇನ್ನು ಈ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ಹೇಳಿಕೆಯನ್ನು ನೀಡಿದ್ದರು. ಐಪಿಎಲ್ ಯಾವಾಗ ಆರಂಭವಾಗಲಿದೆ ಎಂಬ ಪ್ರಶ್ನೆಗೆ ತನ್ನಲ್ಲೂ ಯಾವುದೇ ಉತ್ತರವಿಲ್ಲ ಎಂದು ಗಂಗೂಲಿ ಹೇಳಿದ್ದರು. ಮುಂದೂಡಿದ ದಿನದಿಂದ ಯಾವುದೇ ರೀತಿಯ ಸಕಾರಾತ್ಮಕ ಬೆಳವಣಿಗೆಗಳೂ ಕಂಡಿಲ್ಲ ಹೀಗಾಗಿ ಸದ್ಯಕ್ಕೆ ಇದಕ್ಕೆ ಉತ್ತರವಿಲ್ಲ ಎಂದು ಸೌರವ್ ಗಂಗೂಲಿ ಹೇಳಿದ್ದರು.

Story first published: Thursday, March 26, 2020, 21:23 [IST]
Other articles published on Mar 26, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+