Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಫೆಬ್ರವರಿಯಲ್ಲಿ ಮಿನಿ ಹರಾಜು ಪ್ರಕ್ರಿಯೆ ಸಾಧ್ಯತೆ

IPL mini auction will be held around February 11th

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಮುಂದಿನ ಐಪಿಎಲ್ ಆಯೋಜನೆಗೆ ಸಿದ್ಧತೆ ಆರಂಭಿಸಿದೆ. ಮುಂಬೈ ಮಿರರ್ ಈ ಬಗ್ಗೆ ವರದಿಯೊಂದನ್ನು ಪ್ರಕಟಿಸಿದ್ದು ಐಪಿಎಲ್ ಆಡಳಿತ ಮಂಡಳಿ ಜನವರಿ 4ರಂದು ಮಂಗಳವಾರ ಸಭೆ ಸೇರಿದ್ದು 2021ರ ಐಪಿಎಲ್‌ಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದೆ ಎನ್ನಲಾಗಿದೆ.

ಈ ವರದಿಯ ಪ್ರಕಾರ ಹರಾಜು ಪ್ರಕ್ರಿಯೆಗೂ ಮುನ್ನ ಬಿಸಿಸಿಐ ವಹಿವಾಟು ನಡೆಸಲು ಬಾಗಿಲು ತೆರೆದಿದ್ದು ಜನವರಿ 21ರ ಒಳಗೆ ಆಟಗಾರರನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಫೆಬ್ರವರಿ 11 ರಂದು ಮಿನಿ ಹರಾಜು ನಡೆಸುವ ತಾತ್ಕಾಲಿಕ ದಿನಾಂಕವನ್ನು ನಿಗದಿಗೊಳಿಸಲಾಗಿದೆ ಎಂದು ಇದೇ ವರದಿ ಹೇಳುತ್ತಿದೆ.

ಪೂರ್ವ ನಿಗದಿಯ ಪ್ರಕಾರ ಈ ವರ್ಷದಲ್ಲಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆ ನಡೆಯಬೇಕಾಗಿತ್ತು. ಆದರೆ ಕೊರೊನಾ ವೈರಸ್‌ನ ಕಾರಣದಿಂದಾಗಿ ಕಳೆದ ಆವೃತ್ತಿ ಆರು ತಿಂಗಳು ತಡವಾಗಿ ಆರಂಭವಾಗಿತ್ತು. ಹೀಗಾಗಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆಯನ್ನು ಕೈ ಬಿಟ್ಟು ಮಿನಿ ಹರಾಜು ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ.

ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ದೇಶೀಯ ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಈ ಬಾರಿ ಆಯೋಜನೆ ಮಾಡಲಾಗುತ್ತಿದೆ. ಐಪಿಎಲ್ ಹರಾಜು ಪ್ರಕ್ರಿಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡೆ ರಣಜಿ ಟ್ರೋಫಿಗೂ ಮುನ್ನ ಈ ಬಾರಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಆಯೋಜನೆ ಮಾಡಲಾಗಿದೆ. ಹೀಗಾಗಿ ಹರಾಜು ಪ್ರಕ್ರಿಯೆಯಲ್ಲಿ ಈ ದೇಶೀಯ ಕ್ರಿಕೆಟ್ ಟೂರ್ನಿ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ.

ಇನ್ನು ಮುಂದಿನ ಆವೃತ್ತಿಯ ಆಯೋಜನೆಗೆ ಭಾರತವೇ ಮೊದಲನೇ ಆಯ್ಕೆಯಾಗಿದೆ. ಆದರೆ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುಂದಿನ ಸವಾಲನ್ನು ಎದುರಿಸಲು ಸಜ್ಜಾಗಿದೆ. ಹಾಗಾಗಿ ಯುಎಇಯನ್ನು 14ನೇ ಆವೃತ್ತಿಯ ಐಪಿಎಲ್ ಆಯೋಜನೆಗೂ ಮೀಸಲು ಇಡಲಾಗಿದೆ.

Story first published: Wednesday, January 6, 2021, 13:07 [IST]
Other articles published on Jan 6, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+