ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮ್ಯಾಕ್ಸ್‌ವೆಲ್ ವಿಕೆಟ್ ಪಡೆದಿದ್ದ ಅಶ್ವಿನ್‌ ವಿರುದ್ಧ ಧೋನಿ ಮೈದಾನದಲ್ಲೇ ಕಿಡಿಕಾರಿದ್ದರು: ಸೆಹ್ವಾಗ್

IPL: MS Dhoni was unhappy for R Ashwins celebration after taking Glenn Maxwells wicket says Virender Sehwag

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಾಲು ಸಾಲು ಪಂದ್ಯಗಳನ್ನು ಗೆಲ್ಲುವುದರ ಮೂಲಕ ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶವನ್ನು ಮಾಡಿರುವ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾತ್ರವಾಗಿದೆ. ಇನ್ನೂ ತನ್ನ ಪಾಲಿನ 3 ಲೀಗ್ ಪಂದ್ಯಗಳು ಬಾಕಿ ಇರುವಾಗಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇ ಆಫ್ ಸುತ್ತಿಗೆ ಲಗ್ಗೆ ಇಟ್ಟಿದೆ.

ಕೊಹ್ಲಿ ನಾಯಕತ್ವದ ವಿರುದ್ಧ ಅಶ್ವಿನ್ ಬಿಸಿಸಿಐಗೆ ದೂರು ನೀಡಿದ್ದು ನಿಜಾನಾ?; ಕೊನೆಗೂ ಮೌನ ಮುರಿದ ಅಶ್ವಿನ್ಕೊಹ್ಲಿ ನಾಯಕತ್ವದ ವಿರುದ್ಧ ಅಶ್ವಿನ್ ಬಿಸಿಸಿಐಗೆ ದೂರು ನೀಡಿದ್ದು ನಿಜಾನಾ?; ಕೊನೆಗೂ ಮೌನ ಮುರಿದ ಅಶ್ವಿನ್

ಇತ್ತ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿರುವ ಗ್ಲೆನ್ ಮ್ಯಾಕ್ಸ್ ವೆಲ್ ಅಬ್ಬರಿಸುತ್ತಿದ್ದಾರೆ. ಇತ್ತೀಚೆಗಷ್ಟೇ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ 30 ಎಸೆತಗಳಿಗೆ 50 ರನ್ ಚಚ್ಚುವ ಮೂಲಕ ಗ್ಲೆನ್ ಮ್ಯಾಕ್ಸ್‌ವೆಲ್ ಕ್ರಿಕೆಟ್ ಅಭಿಮಾನಿಗಳ ಗಮನವನ್ನು ಸೆಳೆದಿದ್ದಾರೆ. ಕಳೆದ ಟೂರ್ನಿಗಳಲ್ಲಿ ಪಂಜಾಬ್ ಫ್ರಾಂಚೈಸಿ ಪರ ಆಡುತ್ತಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಕಳೆದೆರಡು ಆವೃತ್ತಿಗಳಲ್ಲಿ ಮಂಕಾಗಿದ್ದರು. ಹೀಗಾಗಿಯೇ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಪಂಜಾಬ್ ಪ್ರಾಂಚೈಸಿ ಕೈಬಿಟ್ಟಿತ್ತು. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ ನಂತರ ಗ್ಲೆನ್ ಮ್ಯಾಕ್ಸ್‌ವೆಲ್ ಅಬ್ಬರಿಸುತ್ತಿದ್ದು ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ.

ಕಳೆದ ಐಪಿಎಲ್‌ಗಿಂತ ಈ ಬಾರಿಯ ಐಪಿಎಲ್ ಕಳೆಗುಂದಿದೆ ಎಂದವರಿಗೆ ಅಂಕಿಅಂಶದ ಚಾಟಿ ಬೀಸಿದ ಬಿಸಿಸಿಐಕಳೆದ ಐಪಿಎಲ್‌ಗಿಂತ ಈ ಬಾರಿಯ ಐಪಿಎಲ್ ಕಳೆಗುಂದಿದೆ ಎಂದವರಿಗೆ ಅಂಕಿಅಂಶದ ಚಾಟಿ ಬೀಸಿದ ಬಿಸಿಸಿಐ

ಹೀಗೆ ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಾಲು ಸಾಲು ಗೆಲುವಿನೊಂದಿಗೆ ಮಿಂಚುತ್ತಿದ್ದರೆ, ಇತ್ತ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಉತ್ತಮ ಬ್ಯಾಟಿಂಗ್ ಮಾಡುವ ಮೂಲಕ ಅಬ್ಬರಿಸುತ್ತಿದ್ದಾರೆ. ಹೀಗೆ ಈ ಎರಡೂ ವಿಷಯಗಳ ಕುರಿತಾಗಿ ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ತಾವು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಆಡುತ್ತಿದ್ದಾಗ ತಮ್ಮ ಸಹ ಆಟಗಾರರಾದ ಗ್ಲೆನ್ ಮ್ಯಾಕ್ಸ್‌ವೆಲ್ ಕುರಿತಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ನಡೆದಿದ್ದ ಘಟನೆಯೊಂದನ್ನು ನೆನಪಿಸಿಕೊಂಡಿದ್ದು ಈ ಕೆಳಕಂಡಂತೆ ಮಾತನಾಡಿದ್ದಾರೆ.

{photo-feature}

Story first published: Friday, October 1, 2021, 19:20 [IST]
Other articles published on Oct 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X