IPL Orange Cap: ಐಪಿಎಲ್ ಇತಿಹಾಸದಲ್ಲಿ ಗರಿಷ್ಠ ಬಾರಿ ಆರೆಂಜ್ ಕ್ಯಾಪ್ ಗೆದ್ದ ಸಾಧಕರು ಇವರೇ..
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 19ನೇ ಆವೃತ್ತಿಯ ಚಾಂಪಿಯನ್ ಯಾರು ಎಂಬ ಪ್ರಶ್ನೆಗೆ ಇನ್ನೇನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಈ ಮೂಲಕ ಬಹುದಿನಗಳ ಕಾಯುವಿಕೆ ಕೊನೆಯಾಗುತ್ತದೆ. ಟ್ರೋಫಿಯನ್ನು ನೀಡುವ ಸಮಾರೋಪ ಸಮಾರಂಭದಲ್ಲಿ ಹಲವು ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಈ ವೇಳೆ ಎಲ್ಲರ ಕಣ್ಣುಗಳು ಆ ಎರಡು ಪ್ರಶಸ್ತಿಯನ್ನು ಪಡೆಯುವುದು ಯಾರು? ಎಂಬ ಮೇಲೆ ನೆಟ್ಟಿದೆ. ಈ ಲೀಗ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದವರಿಗೆ ಆರೆಂಜ್ ಕ್ಯಾಪ್ ಹಾಗೂ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ.
ಈ ಲೀಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ಈ ಗೌರವಕ್ಕೆ ಪಾತ್ರರಾಗಬೇಕು ಎಂದು ಹಲವು ಸ್ಟಾರ್ ಆಟಗಾರರು ಕಣ್ಣು ನೆಟ್ಟಿದ್ದಾರೆ. ಈ ಬಾರಿಯ ಲೀಗ್‌ನಲ್ಲೂ ಆರೆಂಜ್ ಕ್ಯಾಪ್ ಮೇಲೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ (555), ಗುಜರಾತ್ ಟೈಟಾನ್ಸ್ ತಂಡದ ಸಾಯಿ ಸುದರ್ಶನ್ (554), ಗುಜರಾತ್ ನಾಯಕ ಶುಭಮನ್ ಗಿಲ್ (552) ಹಾಗೂ ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (542) ಈ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು 11 ದಿನಗಳಲ್ಲಿ ಈ ಪಟ್ಟ ಯಾರಿಗೆ ಲಭಿಸುತ್ತದೆ ಎಂಬ ಬಗ್ಗೆ ಸ್ಪಷ್ಟತೆ ಸಿಗುತ್ತದೆ.

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಆರೆಂಜ್ ಕ್ಯಾಪ್ ಗೆದ್ದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕ್ರಿಸ್ ಗೇಲ್ ಹಾಗೂ ವಿರಾಟ್ ಕೊಹ್ಲಿ ಅವರಿಗೆ ಸ್ಥಾನ. ಈ ಇಬ್ಬರೂ ಆಟಗಾರರನ್ನು ಬಿಟ್ಟರೆ ಉಳಿದ ಯಾವೊಬ್ಬ ಬ್ಯಾಟರ್ ಈ ಸಾಧನೆ ಮಾಡಿಲ್ಲ. ಈ ವರೆಗೆ 18 ಆವೃತ್ತಿಯ ಐಪಿಎಲ್ ನಡೆದಿದ್ದು ಇಬ್ಬರು ಆಟಗಾರರು ಎರಡು ಬಾರಿ ಆರೆಂಜ್ ಕ್ಯಾಪ್ ಗೆದ್ದಿದ್ದಾರೆ.
ಕ್ರಿಸ್ ಗೇಲ್
ಐಪಿಎಲ್ ಇತಿಹಾಸದಲ್ಲಿ ಆರೆಂಜ್ ಕ್ಯಾಪ್ ಬ್ಯಾಕ್ ಟು ಬ್ಯಾಕ್ ಗೆದ್ದ ಆಟಗಾರ ಎಂಬ ಹೆಗ್ಗಳಿಕೆ ಕ್ರಿಸ್ ಗೇಲ್ ಅವರಿಗೆ ಸಲ್ಲುತ್ತದೆ. ಇವರು 2011ರಲ್ಲಿ ಮೊದಲ ಬಾರಿಗೆ ಈ ಸಾಧನೆ ಮಾಡಿದ್ದರು. ಇವರು ಆಡಿದ 12 ಪಂದ್ಯಗಳಲ್ಲಿ 67ರ ಸರಾಸರಿಯಲ್ಲಿ 608 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 2 ಶತಕ ಹಾಗೂ 3 ಅರ್ಧಶತಕ ಸೇರಿವೆ. ಇನ್ನು 2012ರಲ್ಲೂ ಕ್ರಿಸ್ ಗೇಲ್ ಈ ಸಾಧನೆ ಮಾಡಿದ್ದರು. ಇವರು ಆಡಿದ 15 ಪಂದ್ಯಗಳಲ್ಲಿ 733 ರನ್ ಸಿಡಿಸಿದ್ದಾರೆ. ಈ ವೇಳೆ 1 ಶತಕ ಹಾಗೂ 7 ಅರ್ಧಶತಕಗಳು ಸೇರಿವೆ.
ವಿರಾಟ್ ಕೊಹ್ಲಿ
ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಹ ಆರೆಂಜ್ ಕ್ಯಾಪ್ 2 ಬಾರಿ ಗೆದ್ದಿದ್ದಾರೆ. ಇವರು 2016ರಲ್ಲಿ ಆಡಿದ 16 ಪಂದ್ಯಗಳಲ್ಲಿ 81ರ ಸರಾಸರಿಯಲ್ಲಿ 973 ರನ್ ಸಿಡಿಸಿದ್ದಾರೆ. ಈ ವೇಳೆ 4 ಶತಕ ಹಾಗೂ 7 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ವಿರಾಟ್ 2024ರಲ್ಲೂ ಈ ಸಾಧನೆ ಮಾಡಿದ್ದಾರೆ. ವಿರಾಟ್ ಆಡಿದ 15 ಪಂದ್ಯಗಳಲ್ಲಿ 61ರ ಸರಾಸರಿಯಲ್ಲಿ 741 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 1 ಶತಕ ಹಾಗೂ 5 ಅರ್ಧಶತಕಗಳು ಸೇರಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications