IPL Qualifier 2: ಗುಜರಾತ್ ಟೈಟಾನ್ಸ್‌ಗೆ ಸವಾಲು ಎಸೆಯಲಿದೆ ರಾಜಸ್ಥಾನ್ ರಾಯಲ್ಸ್
ನ್ಯೂ ಚಂಡೀಗಢ: 19ನೇ ಆವೃತ್ತಿಯ ಐಪಿಎಲ್‌ನ ಎರಡನೇ ಕ್ವಾಲಿಫೈಯರ್ ಪಂದ್ಯ ಶುಕ್ರವಾರ ನಡೆಯಲಿದೆ. ಮೊದಲ ಕ್ವಾಲಿಫೈಯರ್‌ನಲ್ಲಿ ಸೋಲು ಕಂಡಿರುವ ಗುಜರಾತ್ ಟೈಟಾನ್ಸ್ ಹಾಗೂ ಎಲಿಮಿನೇಟರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ ಜಯ ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಜಯ ಸಾಧಿಸಿದ ತಂಡ ಫೈನಲ್‌ನಲ್ಲಿ ಆರ್‌ಸಿಬಿ ವಿರುದ್ಧ ಕಾದಾಟ ನಡೆಸಲಿದೆ.
ರಾಜಸ್ಥಾನ್ ಗೆಲುವಿನ ಜೋಶ್‌ನೊಂದಿಗೆ ಕಣಕ್ಕೆ ಇಳಿಯಲಿದೆ. ಆದರೆ ಟೈಟಾನ್ಸ್ ಸೋಲಿನ ನೋವನ್ನು ಹೊತ್ತುಕೊಂಡು ಮೈದಾನ ಪ್ರವೇಶಿಸಲಿದೆ. ಈ ಪಂದ್ಯದಲ್ಲಿ ಒತ್ತಡವನ್ನು ಮೆಟ್ಟಿನಿಲ್ಲುವ ತಂಡ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದೆ. ಅಲ್ಲದೆ ಉಭಯ ತಂಡಗಳು ತಲಾ ಒಂದು ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿವೆ.

ವೈಭವ್ ಆಕರ್ಷಣೆ
ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕರಾಗಿ ಕಣಕ್ಕೆ ಇಳಿಯುವ ವೈಭವ್ ಸೂರ್ಯವಂಶಿ ಹಾಗೂ ಭರವಸೆಯ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಮೇಲೆ ಭರವಸೆ ಇಡಲಾಗಿದೆ. ಈ ಆಟಗಾರರು ತಮ್ಮ ಅನುಭವ ಬಳಸಿಕೊಂಡ ಆಡಿದಲ್ಲಿ ಪವರ್ ಪ್ಲೇನಲ್ಲಿ ದೊಡ್ಡ ಮೊತ್ತವನ್ನು ಕಲೆ ಹಾಕಬಹುದಾಗಿದೆ. ಅಲ್ಲದೆ 15 ವರ್ಷದ ವೈಭವ್ ಸೂರ್ಯವಂಶಿ ಸ್ಫೋಟಕ ಫಾರ್ಮ್‌ನಲ್ಲಿದ್ದಾರೆ. ಇವರು ಎಸ್‌ಆರ್‌ಎಚ್ ವಿರುದ್ಧ ಅಬ್ಬರಿಸಿದ್ದರು. ಹೀಗಾಗಿ ಇವರ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ.
ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಧ್ರುವ್ ಜುರೇಲ್ ಸಹ ಈ ಲೀಗ್‌ನಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ್ದಾರೆ. ನಾಯಕ ರಿಯಾನ್ ಪರಾಗ್ ತಮ್ಮ ಸಾಮರ್ಥ್ಯಕ್ಕೆ ತಕ್ಕ ಆಟವನ್ನು ಆಡಿದರೆ ದೊಡ್ಡ ಮೊತ್ತದ ಕನಸು ನನಸಾಗುತ್ತದೆ.

ರಾಯಲ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಅನುಭವಿ ವೇಗದ ಬೌಲರ್ ಜೋಫ್ರಾ ಆರ್ಚರ್ ಭರ್ಜರಿ ಲಯಕ್ಕೆ ಮರಳಿದ್ದಾರೆ. ಇವರಿಗೆ ಬ್ರಿಜೇಶ್ ಶರ್ಮಾ, ನಾಂಡ್ರೆ ಬರ್ಗರ್, ಬಿಗುವಿನ ದಾಳಿ ನಡೆಸಬೇಕಿದೆ. ಇನ್ನು ಕರ್ನಾಟಕದ ಯಶ್ ರಾಜ್ ಪುಂಜಾ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಮೋಡಿ ನಡೆಸಿದರೆ ಫೈನಲ್‌ಗೆ ಅರ್ಹತೆ ಪಡೆಯುವ ಕನಸು ನನಸಾಗುತ್ತದೆ.
ಒತ್ತಡದಲ್ಲಿ ಟೈಟಾನ್ಸ್
ಗುಜರಾತ್ ಟೈಟಾನ್ಸ್ ತಂಡದಲ್ಲೂ ಸ್ಟಾರ್ ಆಟಗಾರರ ದಂಡೇ ಇದೆ. ಈ ಆಟಗಾರರು ತಮ್ಮ ಅನುಭವ ಬಳಸಿಕೊಂಡು ಆಡಿದಲ್ಲಿ ಗೆಲುವಿನ ಆಸೆ ಫಲಿಸುತ್ತದೆ. ಗುಜರಾತ್ ಪರ ಬ್ಯಾಟಿಂಗ್ ಭಾರವನ್ನು ಹೊತ್ತುಕೊಂಡಿರುವ ಸಾಯಿ ಸುದರ್ಶನ್, ಶುಭಮನ್ ಗಿಲ್, ಜೋಸ್ ಬಟ್ಲರ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಬೇಕಿದೆ. ಇನ್ನು ಉಳಿದ ಬ್ಯಾಟರ್‌ಗಳು ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡಿದರೆ ದೊಡ್ಡ ಮೊತ್ತದ ಆಸೆ ಫಲಿಸುತ್ತದೆ.
ಬೌಲಿಂಗ್ ವಿಭಾಗದಲ್ಲಿ ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಕಗಿಸೋ ರಬಾಡ ಅವರಂತಹ ಅನುಭವಿ ಬೌಲರ್‌ಗಳು ಇದ್ದು ಇವರು ಶಿಸ್ತುಬದ್ಧ ದಾಳಿ ಸಂಘಟಿಸಬೇಕಿದೆ. ಅಂದಾಗ ಜಯ ಲಭಿಸುತ್ತದೆ. ಸ್ಪಿನ್ ಬೌಲರ್ ರಶೀದ್ ಖಾನ್ ಲಯದಲ್ಲಿರುವುದು ತಂಡದ ಚಿಂತೆಯನ್ನು ದೂರ ಮಾಡಿದೆ.
ಆರ್‌ಸಿಬಿ ವಿರುದ್ಧ ಫೈನಲ್ ಪಂದ್ಯ ಆಡುವುದು ಯಾರು ಎಂಬ ಪ್ರಶ್ನೆಗೆ ಶುಕ್ರವಾರ ರಾತ್ರಿ ಉತ್ತರ ಸಿಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications