ವಿಧಾನಸಭೆ ಚುನಾವಣೆ: ಆರ್‌ಸಿಬಿ ಪಂದ್ಯಗಳ ವೇಳಾಪಟ್ಟಿ ಬದಲು

Posted By:
ಐ ಪಿ ಎಲ್ ಗೂ ತಟ್ಟಿದೆ ಕರ್ನಾಟಕ ವಿಧಾನಸಭಾ ಚುನಾವಣೆ 2018ರ ಬಿಸಿ | Oneindia Kannada
IPL RCB matches schedule change due to assembly elections

ಬೆಂಗಳೂರು, ಮಾರ್ಚ್‌ 28: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಮುಂದಿನ ತಿಂಗಳ 7ರಿಂದ ಪ್ರಾರಂಭವಾಗುವ ಐಪಿಎಲ್‌ ಕ್ರಿಕೆಟ್ ಟೂರ್ನಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ ಆಗಲಿದೆ.

ವಿಧಾನಸಭಾ ಚುನಾವಣೆಯ ಮತದಾನವು ಮೇ 12ಕ್ಕೆ ನಡೆಯಲಿದ್ದು, ಅಂದೇ ಬೆಂಗಳೂರಿನಲ್ಲಿ ಆರ್‌ಸಿಬಿ ಪಂದ್ಯವೊಂದು ಇದೆ. ಮತ್ತೊಂದು ಪಂದ್ಯ ಚುನಾವಣೆ ಮತ ಎಣಿಕೆಯ ನಂತರದ ಅಂದರೆ ಮೇ 17ಕ್ಕೆ ಇದೆ ಇವೆರಡೂ ಪಂದ್ಯಗಳ ವೇಳಾಪಟ್ಟಿ ಬದಲಾಗುವ ಸಂಭವ ಇದೆ.

ಚುನಾವಣೆಯ ದಿನಾಂಕ ಪ್ರಕಟಗೊಂಡ ತಕ್ಷಣ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಾಹಿತಿ ನೀಡಿದೆ. ಬಿಸಿಸಿಐ ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಐಪಿಎಲ್ ಆಡಳಿತ ಮಂಡಳಿ ಚರ್ಚೆಯ ನಂತರ ಹೊಸ ದಿನಾಂಕ ಪ್ರಕಟವಾಗಲಿದೆ.

ಬೆಂಗಳೂರಿನಿಂದ ಪಂದ್ಯಗಳು ಸ್ಥಳಾಂತರ ಆಗುವ ಸಂಭವ ಅತ್ಯಂತ ಕಡಿಮೆ ಎಂದಿರುವ ಕೆಸ್‌ಸಿಎ ಪಂದ್ಯಗಳ ದಿನಾಂಕ ಮಾತ್ರ ಬದಲಿಗೆ ಮನವಿ ಸಲ್ಲಿಸಿದ್ದೇವೆ ಎಂದಿದ್ದಾರೆ.

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Wednesday, March 28, 2018, 19:05 [IST]
Other articles published on Mar 28, 2018

myKhel ನಿಂದ ತಾಜಾ ಸುದ್ದಿಗಳನ್ನು ಪಡೆಯಿರಿ