RCB vs SRH: ಮೊದಲ ಪಂದ್ಯಕ್ಕೆ ಹೇಗಿರಲಿದೆ ಆರ್‌ಸಿಬಿ ಪ್ಲೇಯಿಂಗ್ ಇಲೆವೆನ್?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 28ರಿಂದ ಆರಂಭವಾಗಲಿದೆ. ಈ ಲೀಗ್‌ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಲೀಗ್‌ನಲ್ಲಿ ಗೆಲವಿನ ಆರಂಭ ಪಡೆಯುವ ಆಸೆ ಆರ್‌ಸಿಬಿ ತಂಡದ್ದಾಗಿದೆ. ಈ ಮಹತ್ವದ ಪಂದ್ಯಕ್ಕಾಗಿ ಆರ್‌ಸಿಬಿ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಇಲ್ಲಿದೆ ಮಾಹಿತಿ.
ಮೊದಲ ಪಂದ್ಯದಲ್ಲಿ ಆರ್‌ಸಿಬಿ ಗೆಲುವಿನ ಖಾತೆ ತೆರೆಯಲು ಪ್ಲ್ಯಾನ್ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬ ಲೆಕ್ಕಾಚಾರ ಎಲ್ಲರಲ್ಲೂ ಮನೆ ಮಾಡಿದೆ. ಈ ಬಗ್ಗೆ ಉತ್ತರ ಇಲ್ಲಿದೆ.

ಮಹತ್ವದ ಪಂದ್ಯಕ್ಕಾಗಿ ಆರ್‌ಸಿಬಿ ನಾಲ್ವರು ವಿದೇಶಿ ಆಟಗಾರಿಗೆ ಸ್ಥಾನ ನೀಡಲಿದೆ. ಇದರಲ್ಲಿ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅವರಿಗೆ ಅವಕಾಶ ಸಿಗಲಿದೆ. ಈ ಪ್ಲೇಯರ್ ಕಳೆದ ವರ್ಷ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಇವರಿಗೆ ತಂಡ ಮಣೆ ಹಾಕುವ ಸಾಧ್ಯತೆ ಇದೆ. ಇವರೊಂದಿಗೆ ಚೇಸಿಂಗ್ ಸ್ಟಾರ್ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಲಿದ್ದಾರೆ. ವಿರಾಟ್ ಈ ಲೀಗ್‌ನಲ್ಲಿ ಅಬ್ಬರಿಸಿ ತಮ್ಮ ಕ್ಷಮತೆಯನ್ನು ತೋರಿಸಲಿದ್ದಾರೆ. ಈ ಜೋಡಿ ಪವರ್ ಪ್ಲೇನಲ್ಲಿ ಪವರ್ ಫುಲ್ ಬ್ಯಾಟಿಂಗ್ ನಡೆಸಬೇಕಿದೆ. ಅಂದಾಗ ಮಾತ್ರ ಗೆಲುವಿನ ಕನಸು ನನಸಾಗುತ್ತದೆ.
ಯಾವ ಆಲ್‌ರೌಂಡರ್‌ಗೆ ಸಿಗುತ್ತೆ ಚಾನ್ಸ್
ಮೂರನೇ ಕ್ರಮಾಂಕದಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಅವರಿಗೆ ಸ್ಥಾನ ಫಿಕ್ಸ್ ಇದ್ದಂತೆ ಕಾಣುತ್ತಿದೆ. ಇವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಳ್ಳಬಹುದು. ನಾಲ್ಕನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಆಡಲಿದ್ದಾರೆ. ಇನ್ನು ಪರಿಸ್ಥಿತಿಗೆ ತಕ್ಕಂತೆ ಮಧ್ಯಮ ಕ್ರಮಾಂಕದಲ್ಲಿ ಬದಲಾವಣೆಗಳನ್ನು ಕಾಣಬಹುದು. ತಂಡದಲ್ಲಿ ಟೀಮ್ ಡೇವಿಡ್, ವಿಕೆಟ್ ಕೀಪರ್ ಜಿತೇಶ್ ಶರ್ಮಾ ಸ್ಥಾನ ಪಡೆಯಲಿದ್ದಾರೆ. ಆಲ್‌ರೌಂಡರ್ ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ ತಂಡದಲ್ಲಿ ಸ್ಥಾನ ಪಡೆಯಬಹುದಾಗಿದೆ. ವೇಗದ ಬೌಲರ್ ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ ಕಾಣಿಸಿಕೊಳ್ಳಲಿದ್ದಾರೆ. ವೇಗದ ಬೌಲರ್‌ಗಳು ಬಿಗುವಿನ ದಾಳಿ ನಡೆಸಿ ಎದುರಾಳಿ ಬ್ಯಾಟರ್‌ಗಳನ್ನು ಕಾಡಬೇಕಿದೆ.
ಈ ಪಂದ್ಯದಲ್ಲಿ ಜಯ ಸಾಧಿಸಿ ಗೆಲುವಿನ ಟ್ರ್ಯಾಕ್ ಓಪನ್ ಮಾಡುವ ಕನಸು ಆರ್‌ಸಿಬಿ ತಂಡದ್ದಾಗಿದೆ. ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ ತಂಡಗಳು ಒಟ್ಟು 25 ಬಾರಿ ಮುಖಾಮುಖಿಯಾಗಿವೆ. ಈ ಬಾರಿ ಆರ್‌ಸಿಬಿ 11 ಬಾರಿ ಜಯ ಸಾಧಿಸಿದ್ದು, ಎಸ್‌ಆರ್‌ಎಚ್ 13 ಪಂದ್ಯಗಳನ್ನು ಗೆಲುವು ಸಾಧಿಸಿದೆ.
ಎಸ್‌ಆರ್‌ಎಚ್ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (c), ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೋ ಶೆಫರ್ಡ್ / ಜಾಕೋಬ್ ಬೆಥೆಲ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications