For Quick Alerts
ALLOW NOTIFICATIONS  
For Daily Alerts
 

ಐಪಿಎಲ್‌ನಲ್ಲಿ ಆರಂಭಿಕರಾಗಿ ಹೆಚ್ಚು ಬಾರಿ ಸೊನ್ನೆಗೆ ಔಟ್ ಆದ ಟಾಪ್‌ 5 ಬ್ಯಾಟರ್ಸ್

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಆರಂಭವಾಗಿದೆ. ಈ ವೇಳೆ ಸ್ಟಾರ್ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಹಲವು ಆಟಗಾರರು ಲಯವನ್ನು ಕಂಡುಕೊಳ್ಳಲು ಈಗಲೂ ಪರದಾಟ ನಡೆಸಿದ್ದಾರೆ. ಐಪಿಎಲ್‌ನಲ್ಲಿ ಇನಿಂಗ್ಸ್‌ ಆರಂಭಿಸುವ ಆಟಗಾರ ಬಿಗ್ ಹಿಟ್‌ಗಳನ್ನು ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸುತ್ತಾ ಸಾಗುತ್ತಾರೆ. ಇನ್ನು ಹಲವು ಆಟಗಾರರು ರನ್‌ ಕಲೆ ಹಾಕುವಲ್ಲಿ ವಿಫಲರಾಗಿ ಬೇಗನೆ ವಿಕೆಟ್‌ ಒಪ್ಪಿಸುತ್ತಾರೆ. ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟ್‌ ಆದ ಆರಂಭಿಕ ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟ್ ಆದ ಆರಂಭಿಕ ಬ್ಯಾಟರ್‌ಗಳ ಪಟ್ಟಿಯಲ್ಲಿ ಸ್ಫೋಟಕ ಆಟಗಾರರು ಸೇರಿದ್ದಾರೆ. ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ತಂಡದ ಆಟಗಾರ ಡೇವಿಡ್ ವಾರ್ನರ್ ಇದ್ದಾರೆ. ಇವರು ಐಪಿಎಲ್‌ನಲ್ಲಿ ಹಲವು ಬಾರಿ ಇನಿಂಗ್ಸ್ ಆರಂಭಿಸಿದ್ದು, 9 ಬಾರಿ ಶೂನ್ಯಕ್ಕೆ ಔಟ್ ಆಗಿದ್ದಾರೆ. ಇವರು ಸದ್ಯ ಐಪಿಎಲ್‌ನಲ್ಲಿ ಆಡುತ್ತಿಲ್ಲ. ಇವರು ಐಪಿಎಲ್‌ನಲ್ಲಿ ಅಬ್ಬರದ ಪ್ರದರ್ಶನ ನೀಡಿ ಹಲವು ದಾಖಲೆ ಬರೆದಿದ್ದಾರೆ. ಅದರಲ್ಲಿ ಈ ಬೇಡವಾದ ದಾಖಲೆ ಸಹ ಸೇರಿದೆ.

IPL Records

ಟೀಮ್ ಇಂಡಿಯಾದ ಕೋಚ್‌ ಗೌತಮ್ ಗಂಭೀರ್ ಸಹ ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದ ಸದ್ದು ಮಾಡಿರುವ ಆಟಗಾರ. ಇವರು ಸಹ ಐಪಿಎಲ್‌ನಲ್ಲಿ ಹಲವು ದಾಖಲೆಗಳನ್ನು ಹೊಂದಿದ್ದಾರೆ. ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡದ ಮಾಜಿ ನಾಯಕ ಗೌತಿ ಐಪಿಎಲ್‌ನಲ್ಲಿ 10 ಬಾರಿ ಶೂನ್ಯಕ್ಕೆ ಔಟ್ ಆಗಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್‌ ಅವರಿಗೂ ಸ್ಥಾನವಿದೆ. ಇವರು ಸಹ ಐಪಿಎಲ್‌ನಲ್ಲಿ ಆರಂಭಿಕರಾಗಿ ಕಣಕ್ಕೆ ಇಳಿದು 10 ಬಾರಿ ಸೊನ್ನೆ ಸುತ್ತಿದ್ದಾರೆ.

ಕೆಕೆಆರ್‌ ನಾಯಕನಿಗೆ ಅಗ್ರಸ್ಥಾನ

ಅತಿ ಹೆಚ್ಚು ಬಾರಿ ಐಪಿಎಲ್‌ನಲ್ಲಿ ಇನಿಂಗ್ಸ್‌ ಆರಂಭಿಸಿ ಖಾತೆ ತೆರೆಯದೆ ಪೆವಿಲಿಯನ್ ಸೇರಿದ ಆಟಗಾರರ ಪಟ್ಟಿಯಲ್ಲಿ ಪಾರ್ಥಿವ್ ಪಟೇಲ್ ಅವರಿಗೂ ಸ್ಥಾನ. ಇವರು ಒಟ್ಟಾರೆ ಐಪಿಎಲ್‌ ವೃತ್ತಿ ಜೀವನದಲ್ಲಿ 11 ಬಾರಿ ಸೊನ್ನೆಗೆ ಔಟ್ ಆಗಿದ್ದಾರೆ.

ಐಪಿಎಲ್‌ನಲ್ಲಿ ಆರಂಭಿಕರಾಗಿ ಕಣಕ್ಕೆ ಇಳಿದು ಅತಿ ಹೆಚ್ಚು ಬಾರಿ ಖಾತೆಯನ್ನು ತೆರೆಯದೇ ಪೆವೆಲಿಯನ್‌ನತ್ತ ಹೆಜ್ಜೆ ಹಾಕಿದ ಹೆಗ್ಗಳಿಕೆ ಸದ್ಯ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಅವರಿಗೆ ಸಲ್ಲುತ್ತದೆ. ಇವರು ಈ ಬಾರಿ ಕೆಕೆಆರ್ ಪರ ಇನಿಂಗ್ಸ್ ಆರಂಭಿಸುತ್ತಿದ್ದಾರೆ. ಆದರೆ ಇವರ ಲಯ ಕಂಡುಕೊಳ್ಳುವಲ್ಲಿ ಎಡವಿದ್ದಾರೆ. ರಹಾನೆ ಈ ಬಾರಿಯ ಐಪಿಎಲ್‌ನಲ್ಲಿ ಎರಡು ಬಾರಿ ಡಕೌಟ್‌ ಆಗಿದ್ದಾರೆ. ಈ ಎರಡೂ ಬಾರಿ ಇವರು ಆರಂಭಿಕರಾಗಿ ಕಣಕ್ಕೆ ಇಳಿದಿದ್ದಾರೆ. ಒಟ್ಟಾರೆ ಐಪಿಎಲ್‌ ಇತಿಹಾಸದಲ್ಲಿ ರಹಾನೆ ಆರಂಭಿಕರಾಗಿ ಮೈದನಾ ಪ್ರವೇಶಿಸಿ 12 ಬಾರಿ ಲಗು ಬಗೆಯಿಂದ ಪೆವೆಲಿಯನ್‌ನತ್ತ ಹೆಜ್ಜೆ ಹಾಕಿದ್ದಾರೆ.

Story first published: Monday, May 4, 2026, 13:09 [IST]
Other articles published on May 4, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+