
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆ ಶ್ರೇಯಸ್ ಐಯ್ಯರ್ ಗಾಯಕ್ಕೊಳಗಾದ ಹಿನ್ನಲೆಯಲ್ಲಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವವನ್ನು ಶ್ರೇಯಸ್ ಐಯ್ಯರ್ ಬದಲು ರಿಷಭ್ ಪಂತ್ ಹೆಗಲ ಮೇಲೆ ಹಾಕಲಾಗಿದೆ. ನಾಯಕತ್ವದ ಜವಾಬ್ದಾರಿ ಬಂದರೂ ಸಹ ಉತ್ತಮ ಪ್ರದರ್ಶನವನ್ನು ನೀಡುತ್ತಿರುವ ರಿಷಭ್ ಪಂತ್ ಗುರುವಾರದ ( ಏಪ್ರಿಲ್ 15 ) ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಶ್ರೇಯಸ್ ಐಯ್ಯರ್ ದಾಖಲೆಯನ್ನು ಸರಿಗಟ್ಟಿದ್ದಾರೆ.
32 ಎಸೆತಗಳನ್ನು ಎದುರಿಸಿದ ರಿಷಭ್ ಪಂತ್ 51 ರನ್ ಗಳಿಸಿದರು. ಈ ಅರ್ಧಶತಕದ ಮೂಲಕ ರಿಷಬ್ ಪಂತ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. 2018ರ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಿಂದ ಇಲ್ಲಿಯವರೆಗೂ ಅತಿಹೆಚ್ಚು ಅರ್ಧಶತಕ ಬಾರಿಸಿರುವ ನಾನ್ ಓಪನರ್ ( ಆರಂಭಿಕ ಆಟಗಾರರನ್ನು ಹೊರತುಪಡಿಸಿ ) ಆಟಗಾರ ಎಂಬ ಕೀರ್ತಿಗೆ ರಿಷಭ್ ಪಂತ್ ಪಾತ್ರರಾಗಿದ್ದಾರೆ.
2018ರಿಂದ ಇಲ್ಲಿಯವರೆಗೂ ರಿಷಭ್ ಪಂತ್ 11 ಅರ್ಧಶತಕಗಳನ್ನು ಬಾರಿಸಿ ಅಗ್ರಸ್ಥಾನದಲ್ಲಿದ್ದರೆ, ಶ್ರೇಯಸ್ ಐಯ್ಯರ್ 10 ಅರ್ಧಶತಕಗಳನ್ನು ಬಾರಿಸುವುದರ ಮೂಲಕ 2018ರ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಿಂದ ಇಲ್ಲಿಯವರೆಗೂ ಅತಿಹೆಚ್ಚು ಅರ್ಧಶತಕ ಬಾರಿಸಿರುವ ನಾನ್ ಓಪನರ್ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.