ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 28 ರಿಂದ ಆರಂಭವಾಗಲಿದೆ. ಈ ಲೀಗ್‌ನಲ್ಲಿ ಮಿಂಚಲು ಸ್ಟಾರ್ ಆಟಗಾರರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇದೇ ವೇಳೆ ಅನುಭವಿ ಆಟಗಾರರು ಸಹ ತಮ್ಮ ಮೇಲೆ ತಂಡ ಇಟ್ಟ ನಂಬಿಕೆಯನ್ನು ಉಳಿಸಿಕೊಂಡು ಅಬ್ಬರಿಸಲು ಯೋಜನೆ ರೂಪಿಸಿಕೊಂಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ವೇಳೆ ಚಾಂಪಿಯನ್ ಪಟ್ಟದ ಮೇಲೆ ಕಣ್ಣು ನೆಟ್ಟಿದೆ. ಈ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಇನಿಂಗ್ಸ್ ಆರಂಭಿಸುವುದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕೆ ರುತುರಾಜ್ ಗಾಯಕ್ವಾಡ್ ಉತ್ತರ ನೀಡಿದ್ದಾರೆ.
ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಯುಷ್ ಮಾತ್ರೆ ಇನಿಂಗ್ಸ್ ಆರಂಭಿಸಿದ್ದರು. ಈ ಬಾರಿ ಸಹ ಚೆನ್ನೈ ಪರ ಈ ಪ್ಲೇಯರ್ ಇನಿಂಗ್ಸ್ ಆರಂಭಿಸಬಹುದು ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿತ್ತು. ಇದೇ ವೇಳೆ ತಂಡಕ್ಕೆ ಸಂಜು ಸ್ಯಾಮ್ಸನ್ ಅವರು ಸಹ ಎಂಟ್ರಿ ನೀಡಿದ್ದರಿಂದ, ಯಾರು ಇನಿಂಗ್ಸ್ ಆರಂಭಿಸುವವರು ಎಂಬ ಲೆಕ್ಕಾಚಾರ ಆರಂಭವಾಗಿದೆ. ಇದಕ್ಕೆ ಸಂಬಂಧಿಸಿದಂತೆ ರುತುರಾಜ್ ಉತ್ತರಿಸಿದ್ದಾರೆ.

ನಾಯಕರ ಸಭೆಯಲ್ಲಿ ಉತ್ತರಿಸಿರುವ ರುತುರಾಜ್ ಸಂಜು ಸ್ಯಾಮ್ಸನ್ ಅವರೊಂದಿಗೆ ಇನಿಂಗ್ಸ್ ಆರಂಭಿಸುವುದಾಗಿ ತಿಳಿಸಿದ್ದಾರೆ. ಸಂಜು ಸ್ಯಾಮ್ಸನ್ ಅವರಿಗೆ ಇನಿಂಗ್ಸ್ ಆರಂಭಿಸಿದ ಅಪಾರ ಅನುಭವ ಇದೆ. ಅವರೊಂದಿಗೆ ಇನಿಂಗ್ಸ್ ಆರಂಭಿಸಲಿದ್ದೇನೆ ಎಂದು ರುತುರಾಜ್ ಗಾಯಕ್ವಾಡ್ ತಿಳಿಸಿದ್ದಾರೆ. ಆಯುಷ್ ಮಾತ್ರೆ ಯಾವ ಸ್ಥಾನದಲ್ಲಿ ಬ್ಯಾಟ್ ಮಾಡುತ್ತಾರೆ ಎಂಬ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ.

ಈ ಬಾರಿಯ ಹರಾಜಿಗೂ ಮುನ್ನ ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಟ್ರೇಡ್ ಮಾಡಿಕೊಂಡಿತ್ತು. ಈ ಬಾರಿಯ ಐಪಿಎಲ್‌ನಲ್ಲಿ ಇವರು ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇವರು ಇತ್ತೀಚಿಗೆ ನಡೆದ ಟಿ20 ವಿಶ್ವಕಪ್‌ನಲ್ಲೂ ಅಮೋಘ ಪ್ರದರ್ಶನ ನೀಡಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಹೀಗಾಗಿ ಎಲ್ಲರ ಚಿತ್ತ ಇವರ ಆಟದ ಮೇಲೆ ನೆಟ್ಟಿದೆ.

ಚೆನ್ನೈ ಸೂಪರ್ ಕಿಂಗ್ಸ್ ಆರನೇ ಬಾರಿ ಟ್ರೋಫಿ ಎತ್ತುವ ಕನಸು ಕಾಣುತ್ತಿದೆ. ಸಿಎಸ್‌ಕೆ ತಂಡದಲ್ಲಿ ಅನುಭವಿ ಹಾಗೂ ಯುವ ಆಟಗಾರರ ದಂಡೇ ಇದೆ. ಈ ಆಟಗಾರರು ತಂಡದ ಗೆಲುವಿನಲ್ಲಿ ಶ್ರಮಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಚೆನ್ನೈ ತಂಡ ತನ್ನ ಮೊದಲ ಪಂದ್ಯವನ್ನು ಮಾರ್ಚ್ 30 ರಂದು ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ.