ಬೆಂಗಳೂರಿನಿಂದ ಐಪಿಎಲ್ ಶಿಫ್ಟ್? ಏಕೆ... ಇಲ್ಲಿದೆ ಕಾರಣ
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತ್ಯಂತ ಪ್ರಸಿದ್ಧ ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದು. ಈ ತಂಡ ಕಳೆದ 17 ವರ್ಷಗಳಿಂದ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿತ್ತು. ಆದರೆ 18ನೇ ಆವೃತ್ತಿಯಲ್ಲಿ ಆರ್‌ಸಿಬಿ ಸ್ಥಿರ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಆರ್‌ಸಿಬಿ ಕಪ್ ಗೆದ್ದ ಮೇಲೆ ನಡೆದ ಸಂಭ್ರಮಾಚರಣೆ ದುರಂತದಲ್ಲಿ ಮಾರ್ಪಟ್ಟಿದೆ. ಚಿನ್ನಸ್ವಾಮಿ ಮೈದಾನದ ಹೊರಗಡೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಆರ್‌ಸಿಬಿ ನುಂಗಲಾರದ ತುತ್ತಾಗಿದೆ.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಅಲ್ಲದೆ ಈ ಸಂಬಂಧ ಕರ್ನಾಟಕ ಸರ್ಕಾರ ಕ್ಯಾಬಿನೇಟ್‌ನಲ್ಲೂ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ವೇಳೆ ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‌ಎ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ ನೀಡಿದೆ. ಆರ್‌ಸಿಬಿ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್‌ಸಿಎ) ಘಟನೆಗೆ ಕಾರಣವೆಂದು ಆರೋಪಿಸಲಾಗಿದೆ.

ಇನ್ನು ವರದಿಂಗಳ ಪ್ರಕಾರ 2026ರ ಐಪಿಎಲ್ ಪಂದ್ಯಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವುದಿಲ್ಲ ಎಂದು ತಿಳಿದು ಬಂದಿದೆ. ಕಾಲ್ತುಳಿತದ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಆಯೋಗವು, ಕ್ರೀಡಾಂಗಣದಲ್ಲಿ ಪ್ರಮುಖ ಕಾರ್ಯಕ್ರಮ ನಡೆಸುವುದಕ್ಕೆ ನಿಷೇಧಿಸಿದೆ. ತನಿಖಾ ಆಯೋಗದ ಈ ನಿರ್ಧಾರ ನಿಜಕ್ಕೂ ಆರ್‌ಸಿಬಿ ತಂಡಕ್ಕೆ ದೊಡ್ಡ ಪೆಟ್ಟು ನೀಡಲಿದೆ.
ಐಪಿಎಲ್ ನಡೆಯದಿರಲು ಕಾರಣ ಏನು?
ವರದಿಗಳ ಪ್ರಕಾರ, ರಾಜ್ಯ ಸರ್ಕಾರಕ್ಕೆ ತನಿಖಾ ಆಯೋಗ ನೀಡಿದ ವರದಿಯಲ್ಲಿ ಬೆಂಗಳೂರಿನ ಐಕಾನಿಕ್ ಕ್ರೀಡಾಂಗಣ ದೊಡ್ಡ ಕಾರ್ಯಕ್ರಮ ನಡೆಸಲು ಅಸುರಕ್ಷಿತ ಎಂದು ತಿಳಿಸಿದೆ. ಹೀಗಾಗಿ ಈ ಮೈದಾನದಲ್ಲಿ ದೊಡ್ಡ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಹೀಗಾಗಿ ಮುಂದಿನ ವರ್ಷ ಬೆಂಗಳೂರಿನ ಹೃದಯ ಭಾಗದಲ್ಲಿರುವ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಗಳು ನಡೆಯುವುದು ಡೌಟ್ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನು ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಒಂದು ವೇಳೆ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯಗಳು ನಡೆಯದೇ ಇದ್ದರೆ, ನಿಶ್ಚಿತವಾಗಿ ಆರ್‌ಸಿಬಿಗೆ ಹಿನ್ನಡೆ ಆಗಲಿದೆ. ನ್ಯಾಯಮೂರ್ತಿ ಕುನ್ಹಾ ವರದಿಯನ್ನು ಕಳೆದ ವಾರ ಕರ್ನಾಟಕ ಸಚಿವ ಸಂಪುಟದ ಮುಂದೆ ಮಂಡಿಸಲಾಯಿತು, ಇದನ್ನು ಜುಲೈ 24 ರ ಗುರುವಾರ ಅನುಮೋದಿಸಲಾಗಿದೆ.
ಆಗಿದ್ದೇನು?
ಜೂನ್ 3 ರಂದು 18ನೇ ಆವೃತ್ತಿಯ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಟ ನಡೆಸಿದವು. ಪ್ರಶಸ್ತಿ ಸುತ್ತಿನ ಕಾಳಾಗಕ್ಕೆ ಅಹಮದಾಬಾದ್ ಅಂಗಳ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಆರ್‌ಸಿಬಿ 6 ರನ್‌ಗಳಿಂದ ಪಂಜಾಬ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಬಳಿಕ ಜೂನ್ 4 ರಂದು ಬೆಂಗಳೂರಿನಲ್ಲಿ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆರ್‌ಸಿಬಿ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಚಿನ್ನಸ್ವಾಮಿ ಮೈದಾನದ ಸುತ್ತ ಜಮಾಯಿಸಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಈ ವೇಳೆ 11 ಜನ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications