RCB ವಿರುದ್ಧವೂ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್
19ನೇ ಆವೃತ್ತಿಯ ಐಪಿಎಲ್‌ನಲ್ಲಿ ಯುವ ಆಟಗಾರರ ಅಬ್ಬರ ಜೋರಾಗಿದೆ. ಈ ಬಾರಿಯ ಲೀಗ್‌ನಲ್ಲಿ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ತಮ್ಮ ವಿಸ್ಫೋಟಕ ಬ್ಯಾಟಿಂಗ್‌ನಿಂದ ಎದುರಾಳಿಗಳನ್ನು ಕಾಡಿದ್ದಾರೆ. ಈ ಯುವ ಆಟಗಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿರುದ್ಧವೂ ಆರ್ಭಟಿಸಿದ್ದಾರೆ. ಆರ್‌ಸಿಬಿ ನೀಡಿದ್ದ ಸ್ಪರ್ಧಾತ್ಮಕ ಗುರಿಯನ್ನು ಬೆನ್ನಟ್ಟಿದಾಗ ವೈಭವ್ ಮತ್ತೊಮ್ಮೆ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು.
ರಾಜಸ್ಥಾನ್ ರಾಯಲ್ಸ್ ತಂಡ ಟಾಸ್ ಸೋತರೂ ಮೊದಲು ಬೌಲಿಂಗ್ ನಡೆಸುವ ನಿರ್ಧಾರವನ್ನು ಮಾಡಿದರು. ಈ ವೇಳೆ ಆರ್‌ಸಿಬಿ ಮೊದಲು ಬ್ಯಾಟ್ ಮಾಡಿದ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 201 ರನ್ ಸಿಡಿಸಿದರು. ನಾಯಕ ರಜತ್ ಪಾಟಿದಾರ್ 40 ಎಸೆತಗಳಲ್ಲಿ 63 ರನ್ ಸಿಡಿಸಿದರು. ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ತಂಡದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅಮೋಘ ಬ್ಯಾಟಿಂಗ್ ಮುಂದುವರೆಸಿದರು.

ವೈಭವ್ ಸೂರ್ಯಂವಶಿ ಈ ಆವೃತ್ತಿಯಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದರು. ಇವರು ಆರ್‌ಸಿಬಿ ಬೌಲರ್‌ಗಳ ವಿರುದ್ಧ ಹೇಗೆ ಆಡುತ್ತಾರೆ ಎಂಬ ಅನುಮಾನ ಇತ್ತು. ಇದಕ್ಕೆ ಉತ್ತರ ಎಂಬಂತೆ ವೈಭವ್ ತಮ್ಮ ಕ್ಲಾಸಿಕ್ ಬ್ಯಾಟಿಂಗ್ ನಡೆಸಿದರು. ವಿಶ್ವದ ಶ್ರೇಷ್ಠ ಬೌಲರ್ ಜೋಶ್ ಹ್ಯಾಜಲ್‌ವುಡ್ ಅವರ ವಿರುದ್ಧವೂ ಸಹ ಅಬ್ಬರಿಸಿದರು. ಇವರ ಒಂದೇ ಓವರ್‌ನಲ್ಲಿ ವೈಭವ್ ಸೂರ್ಯವಂಶಿ 18 ರನ್ ಸಿಡಿಸಿದರು. ಪರಿಣಾಮ 15 ಎಸೆತಗಳಲ್ಲಿ ಮತ್ತೊಮ್ಮೆ ಅರ್ಧಶತಕ ಬಾರಿಸಿ ಮಿಂಚಿದರು.
ಇದಕ್ಕೂ ಮೊದಲು ವೈಭವ್ ಸೂರ್ಯವಂಶಿ ಇದೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧವೂ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು. ಇದೇ ಧಾಟಿಯಲ್ಲಿ ವೈಭವ್ ಆರ್‌ಸಿಬಿ ವಿರುದ್ಧ ಬ್ಯಾಟಿಂಗ್ ನಡೆಸಿದರು. ವೈಭವ್ ಸೂರ್ಯವಂಶಿ 26 ಎಸೆತಗಳಲ್ಲಿ 8 ಬೌಂಡರಿ, 7 ಸಿಕ್ಸರ್ ನೆರವಿನಿಂದ 78 ರನ್ ಬಾರಿಸಿ ಮಿಂಚಿದರು. ಇವರ ಸ್ಫೋಟಕ ಆಟಕ್ಕೆ ಸ್ಪಿನ್ ಬೌಲರ್ ಕೃನಾಲ್ ಪಾಂಡ್ಯ ಬ್ರೇಕ್ ಹಾಕಿದರು.
ವೈಭವ್‌ಗೆ ಆರೆಂಜ್ ಕ್ಯಾಪ್
ಈ ಆವೃತ್ತಿಯಲ್ಲಿ ವೈಭವ್ ಸೂರ್ಯವಂಶಿ ಆಡಿದ 4 ಪಂದ್ಯಗಳಲ್ಲಿ 266ರ ಸ್ಟ್ರೈಕ್ ರೇಟ್‌ನಲ್ಲಿ 200 ರನ್ ಬಾರಿಸಿದ್ದಾರೆ. ಈ ವೇಳೆ 2 ಅರ್ಧಶತಕ ಬಾರಿಸಿದ್ದಾರೆ. ಇವರು ಈ ವೇಳೆ 18 ಬೌಂಡರಿ, 18 ಸಿಕ್ಸರ್ ಸಿಡಿಸಿ ಅಬ್ಬರಿಸಿದ್ದಾರೆ. ಈ ಮೂಲಕ ವೈಭವ್ ಸೂರ್ಯವಂಶಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಎರಡನೇ ಸ್ಥಾನದಲ್ಲಿದ್ದಾರೆ. ಇವರು ಆಡಿದ 4 ಪಂದ್ಯಗಳಲ್ಲಿ 183 ರನ್ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಮೀರ್ ರಿಜ್ವಿ (160) ಮೂರನೇ ಸ್ಥಾನದಲ್ಲಿದ್ದಾರೆ. ಕೆಕೆಆರ್ ತಂಡದ ಅಂಗ್ರ್‌ಕಷ್ ರಘುವಂಶಿ (155) ನಾಲ್ಕನೇ ಸ್ಥಾನ, ಎಸ್‌ಆರ್‌ಎಚ್ ತಂಡದ ಹೆನ್ರಿಕ್ ಕ್ಲಾಸೆನ್ (145) ಐದನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications