IPL: ವೆಂಕಟೇಶ್ ಅಯ್ಯರ್, ವಿರಾಟ್ ಕೊಹ್ಲಿ ಅರ್ಧಶತಕದ ಸೊಬಗು
ಧರ್ಮಶಾಲಾ: ಭರವಸೆಯ ಬ್ಯಾಟರ್ ವೆಂಕಟೇಶ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಅವರು ಬಾರಿಸಿದ ಅರ್ಧಶತಕ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಅರ್‌ಸಿಬಿ) 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಸವಾಲಿನ ಮೊತ್ತದ ಗುರಿಯನ್ನು ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡದ ಆರಂಭ ಸಾಧಾರಣವಾಗಿತ್ತು. ಆರಂಭಿಕ ಜಾಕೊಬ್ ಬೆಥೆಲ್ (11) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು.

ಎರಡನೇ ವಿಕೆಟ್‌ಗೆ ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿಯ ಆಟಕ್ಕೆ ಪಂಜಾಬ್ ಬೌಲರ್‌ಗಳು ಬ್ರೇಕ್ ಹಾಕುವಲ್ಲಿ ವಿಫಲರಾದರು. ಈ ಜೋಡಿ ಎರಡನೇ ವಿಕೆಟ್‌ಗೆ 42 ಎಸೆತಗಳಲ್ಲಿ 76 ರನ್ ಸೇರಿಸಿತು. ಈ ಹಂತದಲ್ಲಿ ದೇವದತ್ ಪಡಿಕ್ಕಲ್ 45 ರನ್ ಬಾರಿಸಿದಾಗ ಹರ್ಪಿತ್ ಬ್ರಾರ್ ತೋಡಿದ ಖೆಡ್ಡಾಗೆ ಬಲಿಯಾದರು.
ಮೂರನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಜೋಡಿ ಸಹ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಸಹ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಸಫಲವಾಯಿತು. ಈ ಜೋಡಿ 35 ಎಸೆತಗಳಲ್ಲಿ 60 ರನ್ ಸೇರಿಸಿತು. ಭರ್ಜರಿ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 58 ರನ್ ಬಾರಿಸಿದರು.
ವೆಂಕಟೇಶ್ ಅಯ್ಯರ್ ಅಬ್ಬರ
ಈ ಲೀಗ್‌ನಲ್ಲಿ ಇದೇ ಮೊದಲ ಬಾರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡುವ ಅವಕಾಶವನ್ನು ಪಡೆದ ವೆಂಕಟೇಶ್ ಅಯ್ಯರ್ ಅಬ್ಬರಿಸಿದರು. ಇವರು ಸಿಕ್ಕ ಅವಕಾಶವನ್ನು ಬಳಸಿಕೊಂಡು ಆರ್ಭಟಿಸಿದರು. ವೆಂಕಟೇಶ್ ಅಯ್ಯರ್ 8 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 73 ರನ್ ಸಿಡಿಸಿದರು. ಮಧ್ಯಮ ಕ್ರಮಾಂಕದ ಆಟಗಾರ ಟಿಮ್ ಡೇವಿಡ್ 28 ರನ್ ಬಾರಿಸಿದ ತಂಡಕ್ಕೆ ಆಧಾರವಾದರು. ಅಂತಿಮವಾಗಿ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 222 ರನ್ ಸೇರಿಸಿತು.
ಪಂಜಾಬ್ ಪರ ಹರ್ಪಿತ್ ಬ್ರಾರ್ 2, ಅರ್ಷದೀಪ್ ಸಿಂಗ್, ಯುಜುವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications