Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL Winners List: ಇಲ್ಲಿದೆ ಐಪಿಎಲ್‌ ವಿಜೇತ ಹಾಗೂ ರನ್ನರ್‌ ಅಪ್ ತಂಡಗಳ ಪಟ್ಟಿ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡ 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಸತತ ಎರಡನೇ ಬಾರಿಗೆ ಟ್ರೋಫಿಗೆ ಮುತ್ತಿಟಿದೆ. ಆರ್‌ಸಿಬಿ ಅಹಮದಾಬಾದ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಅಮೋಘ ಸಂಘಟಿತ ಆಟದ ಪ್ರದರ್ಶನ ನೀಡಿ ಅಬ್ಬರಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಟ್ರೋಫಿ ಡಿಫೆಂಡ್ ಮಾಡಿಕೊಂಡ ಮೂರನೇ ತಂಡ ಎಂಬ ಹೆಗ್ಗಳಿಕೆ ತನ್ನದಾಗಿಸಿಕೊಂಡಿದೆ. ಈ ಮೂಲಕ ರಜತ್ ಪಾಟಿದಾರ್‌ ಪಡೆ ಇತಿಹಾಸ ನಿರ್ಮಿಸಿದೆ.

ಅಹಮದಾಬಾದ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 155 ರನ್‌ ಸೇರಿಸಿತು. ಈ ವೇಳೆ ಜಿಟಿ ತಂಡದ ಮಧ್ಯಮ ಕ್ರಮಾಂಕದ ಆಟಗಾರ ವಾಷಿಂಗ್ಟನ್‌ ಸುಂದರ್‌ ಅರ್ಧಶತಕ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಸಫಲರಾದರು. ಆರ್‌ಸಿಬಿ ತಂಡದ ಪರ ರಸಿಕ್ ಸಲಾಂ ದರ್ 3, ಜೋಶ್‌ ಹ್ಯಾಜಲ್‌ವುಡ್ ಹಾಗೂ ಭುವನೇಶ್ವರ್ ಕುಮಾರ್ ತಲಾ 2 ವಿಕೆಟ್‌ ಕಬಳಿಸಿದರು.

IPL Winners List

ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಪವರ್‌ ಪ್ಲೇನಲ್ಲಿ ಸಮಯೋಚಿತ ಬ್ಯಾಟಿಂಗ್ ನಡೆಸಿ ರನ್‌ ಕಲೆ ಹಾಕಿ ಅಬ್ಬರಿಸಿತು. ಮಧ್ಯದ ಓವರ್‌ಗಳಲ್ಲಿ ವಿಕೆಟ್‌ಗಳು ಬಿದ್ದವು. ಆದರೆ ಒಂದು ತುದಿಯಲ್ಲಿ ಕ್ರೀಸ್‌ ಕಚ್ಚಿನಿಂತಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದರು. ಐಪಿಎಲ್ ಇತಿಹಾಸದಲ್ಲಿ 2ನೇ ಬಾರಿಗೆ ಟ್ರೋಫಿ ಗೆದ್ದು ದಾಖಲೆ ಬರೆಯಿತು. ಐಪಿಎಲ್‌ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದ ತಂಡಗಳ ಪಟ್ಟಿ ಇಲ್ಲಿದೆ.

ವರ್ಷ (Year) ವಿಜೇತ ತಂಡ (Winner) ರನ್ನರ್‌ಅಪ್ (Runner-up)
2008 ರಾಜಸ್ಥಾನ್ ರಾಯಲ್ಸ್ ಚೆನ್ನೈ ಸೂಪರ್ ಕಿಂಗ್ಸ್
2009 ಡೆಕ್ಕನ್ ಚಾರ್ಜರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು
2010 ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಇಂಡಿಯನ್ಸ್
2011 ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು
2012 ಕೋಲ್ಕತಾ ನೈಟ್ ರೈಡರ್ಸ್ ಚೆನ್ನೈ ಸೂಪರ್ ಕಿಂಗ್ಸ್
2013 ಮುಂಬೈ ಇಂಡಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್
2014 ಕೋಲ್ಕತಾ ನೈಟ್ ರೈಡರ್ಸ್ ಕಿಂಗ್ಸ್ ಇಲೆವೆನ್ ಪಂಜಾಬ್
2015 ಮುಂಬೈ ಇಂಡಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್
2016 ಸನ್‌ರೈಸರ್ಸ್ ಹೈದರಾಬಾದ್ ರಾಯಲ್ ಚಾಲೆಂಜರ್ಸ್ ಬೆಂಗಳೂರು
2017 ಮುಂಬೈ ಇಂಡಿಯನ್ಸ್ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್
2018 ಚೆನ್ನೈ ಸೂಪರ್ ಕಿಂಗ್ಸ್ ಸನ್‌ರೈಸರ್ಸ್ ಹೈದರಾಬಾದ್
2019 ಮುಂಬೈ ಇಂಡಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್
2020 ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್
2021 ಚೆನ್ನೈ ಸೂಪರ್ ಕಿಂಗ್ಸ್ ಕೋಲ್ಕತಾ ನೈಟ್ ರೈಡರ್ಸ್
2022 ಗುಜರಾತ್ ಟೈಟಾನ್ಸ್ ರಾಜಸ್ಥಾನ್ ರಾಯಲ್ಸ್
2023 ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್
2024 ಕೋಲ್ಕತಾ ನೈಟ್ ರೈಡರ್ಸ್ ಸನ್‌ರೈಸರ್ಸ್ ಹೈದರಾಬಾದ್
2025 ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೋಲ್ಕತಾ ನೈಟ್ ರೈಡರ್ಸ್
2026 ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟಾನ್ಸ್

Story first published: Sunday, May 31, 2026, 23:29 [IST]
Other articles published on May 31, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+