ಐಪಿಎಲ್ ಆಡುತ್ತೇನೆ ಆದರೆ ಟಿ ಟ್ವೆಂಟಿ ವಿಶ್ವಕಪ್ ಅನುಮಾನ ಎಂದು ಶಾಕ್ ನೀಡಿದ ಇಂಗ್ಲೆಂಡ್‌ನ ಸ್ಟಾರ್ ಆಟಗಾರ

ಇದೇ ವರ್ಷ ಏಪ್ರಿಲ್ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆಯಿಲ್ಲದೆ ನಡೆದಿತ್ತು. ಆದರೆ ತದನಂತರ ವಿವಿಧ ತಂಡಗಳ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ತಕ್ಷಣವೇ ನಿರ್ಧಾರವನ್ನು ತೆಗೆದುಕೊಂಡ ಬಿಸಿಸಿಐ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಈ ಕೆಟ್ಟ ಆಟಗಾರನಿಗೆ ಅವಕಾಶ ಕೊಟ್ಟಿದ್ದೇ ಹಿನ್ನಡೆಗೆ ಕಾರಣ; ಕೊಹ್ಲಿ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ!ಈ ಕೆಟ್ಟ ಆಟಗಾರನಿಗೆ ಅವಕಾಶ ಕೊಟ್ಟಿದ್ದೇ ಹಿನ್ನಡೆಗೆ ಕಾರಣ; ಕೊಹ್ಲಿ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ!

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನು ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಆರಂಭಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಲಿರುವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಪಾಲ್ಗೊಳ್ಳುವುದಿಲ್ಲ ಎಂದು ಟೂರ್ನಿಯಿಂದ ಹಿಂದೆ ಸರಿದಿದ್ದರು. ಹೀಗಾಗಿ ಆ ಆಟಗಾರರ ಬದಲು ಹೊಸ ಆಟಗಾರರನ್ನು ವಿವಿಧ ಫ್ರಾಂಚೈಸಿಗಳು ನೇಮಕ ಮಾಡಿಕೊಂಡಿದ್ದವು.

ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ತಂಡದ ಪರ ಭಾಗವಹಿಸಲು ಕೆಲ ಆಟಗಾರರು ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಮತ್ತು ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಆಟಗಾರನಾಗಿರುವ ಡಾವಿಡ್ ಮಲನ್ ಮಾತ್ರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಡುವುದು ಅನುಮಾನವಾದರೂ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸುತ್ತೇನೆ ಎಂಬ ಹೇಳಿಕೆಯನ್ನು ನೀಡುವುದರ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಭಾರತ vs ಇಂಗ್ಲೆಂಡ್: ಅಶ್ವಿನ್‌ಗೆ ಅವಕಾಶ ಸಿಗದಿರಲು ಕಾರಣ ಯಾರೆಂಬುದನ್ನು ತಿಳಿಸಿದ ಮೊಹಮ್ಮದ್ ಶಮಿಭಾರತ vs ಇಂಗ್ಲೆಂಡ್: ಅಶ್ವಿನ್‌ಗೆ ಅವಕಾಶ ಸಿಗದಿರಲು ಕಾರಣ ಯಾರೆಂಬುದನ್ನು ತಿಳಿಸಿದ ಮೊಹಮ್ಮದ್ ಶಮಿ

ಹೀಗೆ ಟಿ ಟ್ವೆಂಟಿ ವಿಶ್ವಕಪ್ ಆಡುವುದು ಅನುಮಾನ ಆದರೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಲಿದ್ದೇನೆ ಎಂದು ಆಶ್ಚರ್ಯಕರ ಹೇಳಿಕೆ ನೀಡಿರುವ ಡಾವಿಡ್ ಮಲನ್ ಈ ಕೆಳಕಂಡಂತೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ...

ಟಿ ಟ್ವೆಂಟಿ ವಿಶ್ವಕಪ್ ಮತ್ತು ಆ್ಯಶಸ್ ಅನುಮಾನ ಆದರೆ ಐಪಿಎಲ್ ಆಡುತ್ತೇನೆ

ಟಿ ಟ್ವೆಂಟಿ ವಿಶ್ವಕಪ್ ಮತ್ತು ಆ್ಯಶಸ್ ಅನುಮಾನ ಆದರೆ ಐಪಿಎಲ್ ಆಡುತ್ತೇನೆ

ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಮತ್ತು ಆ್ಯಶಸ್ ಸರಣಿಯಲ್ಲಿ ಭಾಗವಹಿಸುತ್ತೇನೋ ಇಲ್ಲವೋ ಗೊತ್ತಿಲ್ಲ ಆದರೆ ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ಯುಎಇಯಲ್ಲಿ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಾತ್ರ ಭಾಗವಹಿಸುವುದು ಖಚಿತ ಎಂದು ಡೇವಿಡ್ ಮಲನ್ ಆಶ್ಚರ್ಯಕರ ಹೇಳಿಕೆಯನ್ನು ನೀಡಿದ್ದಾರೆ.

ಲೀಡ್ಸ್ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ ಮಲನ್

ಲೀಡ್ಸ್ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ ಮಲನ್

ಸದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ಪರ ಡೇವಿಡ್ ಮಲನ್ ಕೂಡ ಭಾಗವಹಿಸಿದ್ದಾರೆ. ಹೀಗೆ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಡೇವಿಡ್ ಮಲನ್ 128 ಎಸೆತಗಳಲ್ಲಿ 70 ರನ್ ಬಾರಿಸುವುದರ ಮೂಲಕ ಭರ್ಜರಿ ಆಟವಾಡಿದ್ದಾರೆ.

ಭರ್ಜರಿ ಸಿಕ್ಸರ್ ಮೂಲಕ ಕಪಿಲ್ ದೇವ್ ದಾಖಲೆ ಮುರಿದ ಹಿಟ್ ಮ್ಯಾನ್ | Oneindia Kannada
ಐಪಿಎಲ್ ಯಾವಾಗ ಆರಂಭ?

ಐಪಿಎಲ್ ಯಾವಾಗ ಆರಂಭ?

ಇದೇ ವರ್ಷದ ಏಪ್ರಿಲ್ 9 ರಂದು ಭರ್ಜರಿಯಾಗಿ ಆರಂಭವಾಗಿ ಯಾವುದೇ ಅಡಚಣೆಗಳಿಲ್ಲದೇ 29 ಪಂದ್ಯಗಳ ಮುಕ್ತಾಯದವರೆಗೂ ಯಶಸ್ವಿಯಾಗಿ ನಡೆದಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಿದ್ದ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಸ್ಥಗಿತಗೊಂಡಿದ್ದ ಐಪಿಎಲ್ ಟೂರ್ನಿ ಯುಎಇಗೆ ಸ್ಥಳಾಂತರಿಸಲ್ಪಟ್ಟಿತು. ಹೀಗೆ ಯುಎಇಯಲ್ಲಿ ಮುಂದುವರಿಯಲಿರುವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸೆಪ್ಟೆಂಬರ್ 19 ರಂದು ಆರಂಭವಾಗಲಿದ್ದು ಅಕ್ಟೋಬರ್ 15 ರಂದು ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಮುಕ್ತಾಯವಾಗಲಿದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 20 - October 27 2021, 03:30 PM
ಇಂಗ್ಲೆಂಡ್
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Friday, August 27, 2021, 22:39 [IST]
Other articles published on Aug 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X