ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನಿರ್ಣಾಯಕ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಗೆದ್ದು ಟಿ20 ಸರಣಿ ವಶಕ್ಕೆ ಪಡೆದ ಐರ್ಲೆಂಡ್

Ire vs Afghan, 5th t20I match, Ireland won the match and won series against Afganistan

ಐರ್ಲೆಂಡ್ ಹಾಗೂ ಅಫ್ಘಾನಿಸ್ತಾನ ನಡುವಿನ ಐದು ಪಂದ್ಯಗಳ ಟಿ20 ಸರಣಿ ರೋಚಕವಾಗಿ ಅಂತ್ಯಕಂಡಿದೆ. ನಾಲ್ಕು ಪಂದ್ಯಗಳ ಮುಕ್ತಾಯಕ್ಕೆ ಎರಡು ತಂಡಗಳು ಕೂಡ ತಲಾ ಎರಡು ಪಂದ್ಯಗಳನ್ನು ಗೆದ್ದು ಸರಣಿ ಸಮಬಲಗೊಳಿಸಿತ್ತು. ಹೀಗಾಗಿ ಅಂತಿಮ ಪಮದ್ಯದಲ್ಲಿ ಗೆಲ್ಲುವ ತಂಡ ಸರಣಿಯನ್ನು ವಶಕ್ಕೆ ಪಡೆದುಕೊಳ್ಳಲಿತ್ತು. ಈ ನಿರ್ಣಾಯಕ ಪಂದ್ಯಕ್ಕೆ ಮಳೆ ಅಡ್ಡಿಯಿಮಟು ಮಾಡಿದ ಪರಿಣಾಮವಾಗಿ ಪೂರ್ಣ ಪ್ರಮಾಣದಲ್ಲಿ ಪಂದ್ಯ ನಡೆಯಲು ಸಾಧ್ಯವಾಗದಿದ್ದರೂ ಫಲಿತಾಂಶ ಆತಿಥೇಯ ಐರ್ಲೆಂಡ್ ತಂಡದ ಪರವಾಯಿತು.

ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿತ್ತು. ಆದರೆ ಅಫ್ಘಾನಿಸ್ತಾನದ ಪರವಾಗಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ಬಾರಲಿಲ್ಲ. ಮಧ್ಯಮ ಕ್ರಮಾಂಕದ ಆಟಗಾರ ಉಸ್ಮಾನ್ ಘನಿ 40 ಎಸೆತಗಳಲ್ಲಿ 44 ರನ್‌ಗಳಿಸಿ ತಂಡಕ್ಕೆ ಬಲ ನೀಡಿದರು. ಇದರ ಪರಿಣಾಮವಾಗಿ 15 ಓವರ್‌ಗಳ ಅವಧಿಯಲ್ಲಿ ಮಳೆ ಪಂದ್ಯಕ್ಕೆ ಅಡ್ಡಿಯುಂಟು ಮಾಡಿದಾಗ ಅಫ್ಘಾನಿಸ್ತಾನ 5 ವಿಕೆಟ್ ಕಳೆದುಕೊಂಡು 95 ರನ್‌ಗಳನ್ನು ಗಳಿಸಿತ್ತು.

PAK vs NED: ನೆದರ್ಲೆಂಡ್ಸ್‌ ವಿರುದ್ಧ ವಿಶ್ವದಾಖಲೆ ಮಾಡಿದ ಬಾಬರ್ ಅಜಮ್PAK vs NED: ನೆದರ್ಲೆಂಡ್ಸ್‌ ವಿರುದ್ಧ ವಿಶ್ವದಾಖಲೆ ಮಾಡಿದ ಬಾಬರ್ ಅಜಮ್

ಇನ್ನು ಭಾರೀ ಪ್ರಮಾಣದಲ್ಲಿ ಮಳೆ ಪಂದ್ಯಕ್ಕೆ ಅಡ್ಡಿಯುಂಟು ಮಾಡಿದ ಪರಣಾಮವಾಗಿ ಅಫ್ಘಾನಿಸ್ತಾನ ಇನ್ನಿಂಗ್ಸ್ ಮುಂದುವರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಆತಿಥೇಯ ಐರ್ಲೆಂಡ್ ತಂಡಕ್ಕೆ ಗೆಲ್ಲಲು ಡಕ್ವರ್ತ್ ಲೂಯಿಸ್ ನಿಯಮದಲ್ಲಿ 7 ಓವರ್‌ಗಳಲ್ಲಿ 56 ರನ್‌ಗಳಿಸುವ ಸವಾಲು ನಿಗದಿಯಾಯಿತು.
ಈ ಗುರಿಯನ್ನು ಬೆನ್ನಟ್ಟಿದ ಆತಿಥೇಯ ಐರ್ಲೆಂಡ್ ತಂಡ 3 ವಿಕೆಟ್ ಕಳೆದುಕೊಂಡು ಎರಡು ಎಸೆತಗಳು ಬಾಕಿಯಿರುವಂತೆ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.

ಐದು ಪಂದ್ಯಗಳ ಈ ಟಿ20 ಸರಣಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ಐರ್ಲೆಂಡ್ ತಂಡ ಎರಡು ಪಂದ್ಯಗಳಲ್ಲಿ ಗೆದ್ದಿದ್ದರೆ ಕೊನೆಯ ಎರಡು ಪಂದ್ಯಗಳಲ್ಲಿ ಪ್ರವಾಸಿ ಅಫ್ಘಾನಿಸ್ತಾನ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯದ ಆರಂಭಕ್ಕೆ ಮುನ್ನ ಸರಣಿ 2-2 ಅಂತರದಿಂದ ಸಮಬಲದಲ್ಲಿತ್ತು. ಮೊದಲ ಎರಡು ಪಂದ್ಯಗಳಲ್ಲಿ ಐರ್ಲೆಂಡ್ ತಂಡ ಅದ್ಭುತ ಪ್ರದರ್ಶನ ನೀಡಿ ಗೆಲುವು ಸಾಧಿಸಿದ್ದರೆ ಕೊನೆಯ ಎರಡು ಪಂದ್ಯಗಳಲ್ಲಿ ಪ್ರವಾಸಿ ಅಫ್ಘಾನಿಸ್ತಾನ ನಿರೀಕ್ಷೆಗೂ ಮೀರಿದಂತೆ ತಿರುಗೇಟು ನೀಡಿತು. ಇದೀಗ ಅಂತಿಮ ಪಂದ್ಯದಲ್ಲಿ ಆತಿಥೆಯ ಐರ್ಲೆಂಡ್ ತಂಡ ಭರ್ಜರಿ ಗೆಲುವು ಸಾಧಿಸಿದೆ

ಐರ್ಲೆಂಡ್ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಜಾರ್ಜ್ ಡಾಕ್ರೆಲ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಸಿಮಿ ಸಿಂಗ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್

ಬೆಂಚ್: ಫಿಯಾನ್ ಹ್ಯಾಂಡ್, ಕ್ರೇಗ್ ಯಂಗ್, ಆಂಡಿ ಮ್ಯಾಕ್‌ಬ್ರೈನ್, ಸ್ಟೀಫನ್ ಡೊಹೆನಿ, ಗ್ರಹಾಂ ಹ್ಯೂಮ್
ಡಬ್ಲ್ಯೂ

ಆಸ್ಟ್ರೇಲಿಯಾದ T20 ವಿಶ್ವಕಪ್ ಗೆ ರೊಹಿತ್-ರಾಹುಲ್ ಹೊಸ ತಂಡ ರೆಡಿಯಾಗ್ತಿದೆ | *Cricket | Oneindia Kannada

ಅಫ್ಘಾನಿಸ್ತಾನ ಆಡುವ ಬಳಗ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಉಸ್ಮಾನ್ ಘನಿ, ಇಬ್ರಾಹಿಂ ಝದ್ರಾನ್, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್ ಮಲಿಕ್
ಬೆಂಚ್: ಶರಫುದ್ದೀನ್ ಅಶ್ರಫ್, ಹಷ್ಮತುಲ್ಲಾ

Story first published: Thursday, August 18, 2022, 0:08 [IST]
Other articles published on Aug 18, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X