IRE vs NZ: ದ್ವಿತೀಯ ಟಿ20 ಪಂದ್ಯದ ಟಾಸ್ ವರದಿ ಮತ್ತು ಲೈವ್ ಸ್ಕೋರ್; ಸರಣಿ ಗೆಲ್ಲುವತ್ತ ನ್ಯೂಜಿಲೆಂಡ್ ಚಿತ್ತ

ಐರ್ಲೆಂಡ್ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಗಳಲ್ಲಿ ಐರ್ಲೆಂಡ್ ವಿರುದ್ಧ ಸೆಣಸಾಟವನ್ನು ನಡೆಸುತ್ತಿದೆ.
ಇತ್ತಂಡಗಳ ನಡುವೆ ಮೊದಲಿಗೆ ನಡೆದ 3 ಪಂದ್ಯಗಳ ಏಕದಿನ ಸರಣಿಯ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದ ಪ್ರವಾಸಿ ನ್ಯೂಜಿಲೆಂಡ್ ಐರ್ಲೆಂಡ್ ತಂಡಕ್ಕೆ ತವರಿನಲ್ಲಿಯೇ ವೈಟ್ ವಾಷ್ ಮುಖಭಂಗ ಮಾಡಿತ್ತು. ನಂತರ ಇದೀಗ 3 ಪಂದ್ಯಗಳ ಟ್ವೆಂಟಿ ಸರಣಿ ಆರಂಭವಾಗಿದ್ದು, ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಜಯ ಸಾಧಿಸಿದೆ ಹಾಗೂ ಇಂದು ( ಜುಲೈ 20 ) ನಡೆಯಲಿರುವ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿಯೂ ಗೆದ್ದು ಸರಣಿ ವಶಪಡಿಸಿಕೊಳ್ಳುವತ್ತ ಚಿತ್ತ ನೆಟ್ಟಿದೆ.
ನ್ಯೂಜಿಲೆಂಡ್ ಮತ್ತು ಐರ್ಲೆಂಡ್ ತಂಡಗಳ ನಡುವಿನ ಈ ಎರಡನೇ ಟಿ ಟ್ವೆಂಟಿ ಪಂದ್ಯ ಬೆಲ್ ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದಿರುವ ಆತಿಥೇಯ ಐರ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಕೆಳಕಂಡಂತಿದೆ.
{cricket_681-2022_53600}

ಐರ್ಲೆಂಡ್ ಆಡುವ ಬಳಗ
ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಕ್ರೇಗ್ ಯಂಗ್, ಜೋಶುವಾ ಲಿಟಲ್

ನ್ಯೂಜಿಲೆಂಡ್ ಆಡುವ ಬಳಗ
ಮಾರ್ಟಿನ್ ಗಪ್ಟಿಲ್, ಫಿನ್ ಅಲೆನ್, ಡೇನ್ ಕ್ಲೀವರ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಇಶ್ ಸೋಧಿ, ಲಾಕಿ ಫರ್ಗುಸನ್, ಜಾಕೋಬ್ ಡಫಿ

ಪ್ರಥಮ ಪಂದ್ಯದ ಫಲಿತಾಂಶ
ಐರ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಜುಲೈ 18ರಂದು ನಡೆದಿದ್ದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ ಆತಿಥೇಯ ಐರ್ಲೆಂಡ್ ವಿರುದ್ಧ 31 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ಗ್ಲೆನ್ ಫಿಲಿಪ್ಸ್ ಅವರ ಅಬ್ಬರದ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಕಲೆಹಾಕಿ ಎದುರಾಳಿ ಐರ್ಲೆಂಡ್ ತಂಡಕ್ಕೆ 174 ರನ್‌ಗಳ ಗುರಿಯನ್ನು ನೀಡಿತ್ತು. ಅತ್ತ 18.2 ಓವರ್‌ಗಳಲ್ಲಿ 142 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲ್ ಔಟ್ ಆದ ಐರ್ಲೆಂಡ್ ಸೋಲನ್ನು ಅನುಭವಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications