ಐರ್ಲೆಂಡ್ ವಿರುದ್ಧ ಮುಗ್ಗರಿಸಿದ ಶ್ರೇಯಸ್ ಅಯ್ಯರ್ ಪಡೆ; ವಿಶ್ವ ಚಾಂಪಿಯನ್‌ರಿಗೆ ಹೀನಾಯ ಸೋಲು
ಬೆಲ್‌ಫಾಸ್ಟ್: ತವರಿನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಐರ್ಲೆಂಡ್ ತಂಡ ವಿಶ್ವ ಚಾಂಪಿಯನ್ ಟೀಮ್ ಇಂಡಿಯಾಕ್ಕೆ ಮಣ್ಣು ಮುಕ್ಕಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿದ ಐರ್ಲೆಂಡ್ ಇದೇ ಮೊದಲ ಬಾರಿಗೆ ಭಾರತದ ವಿರುದ್ಧ ಜಯ ಸಾಧಿಸಿದೆ. ಟೀಮ್ ಇಂಡಿಯಾ ಯುವ ಆಟಗಾರರೊಂದಿಗೆ ಕಣಕ್ಕೆ ಇಳಿದು ಮುಖಭಂಗ ಅನುಭವಿಸಿದೆ. ಟೀಮ್ ಇಂಡಿಯಾ ಸ್ಥಿರ ಆಟದ ಪ್ರದರ್ಶನ ನೀಡುವಲ್ಲಿ ವಿಫಲವಾಗಿ ಹೀನಾಯ ಸೋಲು ಕಂಡಿದೆ. ಐರ್ಲೆಂಡ್ 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ (5) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. 2ನೇ ವಿಕೆಟ್‌ಗೆ ಆರಂಭಿಕ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಜೋಡಿ 13 ಎಸೆತಗಳಲ್ಲಿ 29 ರನ್ ಸೇರಿಸಿತು. ಈ ಹಂತದಲ್ಲಿ ರನ್ ಕಲೆ ಹಾಕಲು ಪರದಾಟ ನಡೆಸಿದ್ದ ಇಶಾನ್ ಕಿಶನ್ (1) ಬೇಗನೆ ಪೆವಿಲಿಯನ್ ಸೇರಿದರು. ನಾಯಕ ಶ್ರೇಯಸ್ ಅಯ್ಯರ್ (3) ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡುವಲ್ಲಿ ವಿಫಲರಾದರು.

ಜವಾಬ್ದಾರಿ ಮರೆತ ಬ್ಯಾಟರ್ಸ್
ಟೀಮ್ ಇಂಡಿಯಾ ಪವರ್ ಪ್ಲೇನಲ್ಲಿ ಭಾರತ 68 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತು. ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ 20 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್ ಸಹಾಯದಿಂದ 50 ರನ್ ಬಾರಿಸಿ ಮಿಂಚಿದರು. ನಂತರ ಬಂದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಶಿವಂ ದುಬೆ 25 ರನ್ ಬಾರಿಸಿ ಸೋಲಿನ ಅಂತರವನ್ನ ಕಡಿಮೆ ಮಾಡಿದರು. ಅಂತಿಮವಾಗಿ ಟೀಮ್ ಇಂಡಿಯಾ 18.5 ಓವರ್‌ಗಳಲ್ಲಿ 148 ರನ್‌ಗಳಿಗೆ ಆಲೌಟ್ ಆಯಿತು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ಆರಂಭ ಕಳಪೆಯಾಗಿತ್ತು. ಆರಂಭಿಕರಾದ ರಾಸ್ ಅಡೈರ್ (12) ಹರ್ಷಿತ್ ರಾಣಾ ಅವರಿಗೆ ವಿಕೆಟ್ ಒಪ್ಪಿಸಿದರು. ರಾಸ್ ಅಡೈರ್ ಔಟ್ ಆಗುತ್ತಿದ್ದಂತೆ ಕ್ರೀಸ್ ಬಂದ ಹ್ಯಾರಿ ಟೆಕ್ಟರ್ ಸೊನ್ನೆ ಸುತ್ತಿದರು. ಟಿಮ್ ಟೆಕ್ಟರ್ 2 ಬೌಂಡರಿ, 1 ಸಿಕ್ಸರ್ ಸಹಾಯದಿಂದ 17 ರನ್ ಬಾರಿಸಿ ಔಟ್ ಆದರು.
51 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ನಾಯಕ ಲೋರ್ಕನ್ ಟಕರ್, ಗರೆಥ್ ಡೆಲಾನಿ ಜೋಡಿ ಆಸರೆಯಾಯಿತು. ಈ ಜೊಡಿ 44 ಎಸೆತಗಳಲ್ಲಿ 64 ರನ್ ಸೇರಿಸಿ ತಂಡದ ಮೊತ್ತ ಹಿಗ್ಗಿಸಿತು. ನಾಯಕ ಲೋರ್ಕನ್ ಟಕರ್ ಅರ್ಧಶತಕ ಬಾರಿಸಿ ಔಟ್ ಆದರು. 6ನೇ ವಿಕೆಟ್‌ಗೆ ಡೆಲಾನಿ, ಜಾರ್ಜ್ ಡಾಕ್ರೆಲ್ 49 ರನ್ ಸೇರಿಸಿತು. ಗರೆಥ್ ಡೆಲಾನಿ 3 ಬೌಂಡರಿ, 3 ಸಿಕ್ಸರ್ ಸಹಾಯದಿಂದ 49 ರನ್ ಬಾರಿಸಿ ನಿರ್ಗಮಿಸಿದರು. ಅಂತಿಮವಾಗಿ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 182 ರನ್ ಸೇರಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications