ವಿಶ್ವಕಪ್‌ಗೂ ಮುನ್ನ ಐರ್ಲೆಂಡ್‌ಗೆ ಯುಎಇಯಲ್ಲಿ ಮೂರು ಟಿ20ಐ ಪಂದ್ಯ

ದುಬೈ: ಮುಂಬರಲಿರುವ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಐರ್ಲೆಂಡ್ ಕ್ರಿಕೆಟ್ ತಂಡ ಸ್ಕಾಟ್ಲೆಂಡ್ ವಿರುದ್ಧ ಅಭ್ಯಾಸ ಪಂದ್ಯ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ವಿರುದ್ಧ ಮೂರು ಪಂದ್ಯಗಳ ಟಿ20ಐ ಸರಣಿ ಆಡಲಿದೆ. ಐರ್ಲೆಂಡ್ ಕ್ರಿಕೆಟ್ ಬೋರ್ಡ್ ಈ ಸಂಗತಿಯನ್ನು ಗುರುವಾರ (ಸೆಪ್ಟೆಂಬರ್ 23) ಖಾತರಿಪಡಿಸಿದೆ.
ಅಕ್ಟೋಬರ್ 17ರಿಂದ ನವೆಂಬರ್ 14ರ ವರೆಗೆ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಪ್ರತಿಷ್ಠಿತ ಟೂರ್ನಿಗೂ ಮುನ್ನ ಐರ್ಲೆಂಡ್ ತಂಡ ಯುಎಇ ವಿರುದ್ಧ ದುಬೈಯ ಐಸಿಸಿ ಅಕಾಡೆಮಿಯಲ್ಲಿ ಮೂರು ಪಂದ್ಯಗಳ ಟಿ20ಐ ಸರಣಿ ಆಡಲಿದೆ. ಅಕ್ಟೋಬರ್ 5ರಿಂದ ಅಕ್ಟೋಬರ್ 10ರ ವರೆಗೆ ಈ ಸರಣಿ ನಡೆಯಲಿದೆ.
"ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ ಈ ಸರಣಿಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಘೋಷಿಸಿದೆ. ಅಕ್ಟೋಬರ್ 5ರಿಂದ 10ರ ವರೆಗೆ ಈ ಸರಣಿ ನಡೆಯಲಿದೆ. ಯುಎಇ, ಐರ್ಲೆಂಡ್, ಸ್ಕಾಟ್ಲೆಂಡ್, ನಮೀಬಿಯಾ ಮತ್ತು ಪಪುವಾ ನ್ಯೂಗಿನಿಯಾ ತಂಡಗಳೂ ಅಭ್ಯಾಸ ಪಂದ್ಯದಲ್ಲಿ ಪಾಲ್ಗೊಳ್ಳಲಿವೆ," ಎಂದು ಕ್ರಿಕೆಟ್ ಐರ್ಲೆಂಡ್ ತಿಳಿಸಿದೆ.
ಸದ್ಯ ಯುಎಇಯಲ್ಲಿ ಐಪಿಎಲ್ 2021ರ ದ್ವಿತೀಯ ಹಂತದ ಪಂದ್ಯಗಳು ನಡೆಯುತ್ತಿವೆ. ಅಕ್ಟೋಬರ್ 15ರಂದು ಐಪಿಎಲ್ ಕೊನೆಗೊಳ್ಳಲಿದೆ. ಆ ಬಳಿಕ ಟಿ20 ವಿಶ್ವಕಪ್ ಟೂರ್ನಿ ಶುರುವಾಗಲಿದೆ. ಒಟ್ಟು 16 ದೇಶಗಳು ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. ಅಸಲಿಗೆ ಭಾರತದಲ್ಲಿ ನಡೆಯಬೇಕಿದ್ದ ಈ ಟೂರ್ನಿ ಕೋವಿಡ್ ಕಾರಣ ಯುಎಇ ಮತ್ತು ಓಮನ್‌ನಲ್ಲಿ ನಡೆಯುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications