ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐರ್ಲೆಂಡ್ vs ಅಫ್ಘಾನಿಸ್ತಾನ: ಟಿ20 ಸರಣಿ 5ನೇ ಪಂದ್ಯ: Live ಸ್ಕೋರ್ ಹಾಗೂ ಆಡುವ ಬಳಗ

Ireland vs Afghanistan, 5th t20I match, Live score and playing XI, Belfast

ಐರ್ಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವಿನ ಟಿ20 ಸರಣಿಯ ಐದನೇ ಹಾಗೂ ಅಂತಿಮ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಆತಿಥೇಯ ಐರ್ಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ಅಫ್ಘಾನಿಸ್ತಾನ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಐದು ಪಂದ್ಯಗಳ ಈ ಟಿ20 ಸರಣಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ಐರ್ಲೆಂಡ್ ತಂಡ ಎರಡು ಪಂದ್ಯಗಳಲ್ಲಿ ಗೆದ್ದಿದ್ದರೆ ಕೊನೆಯ ಎರಡು ಪಂದ್ಯಗಳಲ್ಲಿ ಪ್ರವಾಸಿ ಅಫ್ಘಾನಿಸ್ತಾನ ಗೆಲುವು ಸಾಧಿಸಿದೆ. ಹೀಗಾಗಿ ಸರಣಿ ಸದ್ಯ 2-2 ಅಂತರದಿಂದ ಸಮಬಲದಲ್ಲಿದೆ. ಮೊದಲ ಎರಡು ಪಂದ್ಯಗಳಲ್ಲಿ ಐರ್ಲೆಂಡ್ ತಂಡ ಅದ್ಭುತ ಪ್ರದರ್ಶನ ನೀಡಿ ಗೆಲುವು ಸಾಧಿಸಿದ್ದರೆ ಕೊನೆಯ ಎರಡು ಪಂದ್ಯಗಳಲ್ಲಿ ಪ್ರವಾಸಿ ಅಫ್ಘಾನಿಸ್ತಾನ ನಿರೀಕ್ಷೆಗೂ ಮೀರಿದಂತೆ ತಿರುಗೇಟು ನೀಡಿತು. ಈ ಮೂಲಕ ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.

Live ಸ್ಕೋರ್ ಹೀಗಿದೆ

1
53758

PAK vs NED: ನೆದರ್ಲೆಂಡ್ಸ್‌ ವಿರುದ್ಧ ವಿಶ್ವದಾಖಲೆ ಮಾಡಿದ ಬಾಬರ್ ಅಜಮ್PAK vs NED: ನೆದರ್ಲೆಂಡ್ಸ್‌ ವಿರುದ್ಧ ವಿಶ್ವದಾಖಲೆ ಮಾಡಿದ ಬಾಬರ್ ಅಜಮ್

ಸರಣಿ ಗೆಲ್ಲಲು ಕಸರತ್ತು: ಪ್ರಸ್ತುತ ಈ ಸರಣಿಯಲ್ಲಿ ಎರಡು ತಂಡಗಳು ಕೂಡ ತಲಾ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಸರಣಿಯ ಅಂತಿಮ ಪಂದ್ಯ ನಿರ್ಣಾಯಕವೂ ಆಗಿದ್ದು ಯಾವ ತಂಡ ಗೆಲ್ಲಲಿದೆಯೋ ಆ ತಂಡ ಸರಣಿಯನ್ನು ವಶಕ್ಕೆ ಪಡೆದುಕೊಳ್ಳಲಿದೆ. ಹೀಗಾಗಿ ಸಾಕಷ್ಟು ಕುತೂಹಲ ಮೂಡಿಸಿದೆ.

ಐರ್ಲೆಂಡ್ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಜಾರ್ಜ್ ಡಾಕ್ರೆಲ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಸಿಮಿ ಸಿಂಗ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್
ಬೆಂಚ್: ಫಿಯಾನ್ ಹ್ಯಾಂಡ್, ಕ್ರೇಗ್ ಯಂಗ್, ಆಂಡಿ ಮ್ಯಾಕ್‌ಬ್ರೈನ್, ಸ್ಟೀಫನ್ ಡೊಹೆನಿ, ಗ್ರಹಾಂ ಹ್ಯೂಮ್
ಡಬ್ಲ್ಯೂ

ಅಫ್ಘಾನಿಸ್ತಾನ ಆಡುವ ಬಳಗ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಉಸ್ಮಾನ್ ಘನಿ, ಇಬ್ರಾಹಿಂ ಝದ್ರಾನ್, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್ ಮಲಿಕ್
ಬೆಂಚ್: ಶರಫುದ್ದೀನ್ ಅಶ್ರಫ್, ಹಷ್ಮತುಲ್ಲಾ

Story first published: Wednesday, August 17, 2022, 20:14 [IST]
Other articles published on Aug 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X