
ಬಾಂಗ್ಲಾದೇಶ ಹಾಗೂ ಐರ್ಲೆಂಡ್ ತಂಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಿದ್ದು ಸರಣಿಯ ಎರಡನೇ ಪಂದ್ಯ ಇಂದು ಚಿತ್ತಗಾಂಗ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಪ್ರವಾಸಿ ಐರ್ಲೆಂಡ್ ತಂಡ ಟಾಸ್ ಗೆದ್ದಿದ್ದು ಆರಂಭದಲ್ಲಿ ಬೌಲಿಂಗ್ ನಡೆಸುವ ನಿರ್ಧಾರ ಮಾಡಿದೆ. ಹೀಗಾಗಿ ಆತಿಥೇಯ ಬಾಂಗ್ಲಾದೇಶ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸಲು ಕಣಕ್ಕಿಳಿದಿದೆ. ಆದರೆ ಪಂದ್ಯದಕ್ಕೆ ಆರಂಭದಲ್ಲಿ ಮಳೆ ಅಡ್ಡಿಯುಂಟು ಮಾಡಿದ್ದು ತಡವಾಗಿ ಆರಂಭವಾಗಲಿದೆ.
ಇನ್ನು ಮಳೆಯ ಕಾರಣದಿಂದಾಗಿ ಮೂರು ಓವರ್‌ಗಳನ್ನು ಕಡಿತಗೊಳಿಸಲಾಗಿದ್ದು 17 ಓವರ್‌ಗಳ ಪಂದ್ಯ ಇದಾಗಿರಲಿದೆ. ಐದು ಓವರ್‌ಗಳ ಪವರ್‌ಪ್ಲೇ ಹೊಂದಿದ್ದು ಇಬ್ಬರಯ ಬೌಲರ್‌ಗಳಿಗೆ ಮಾತ್ರವೇ ನಾಲ್ಕು ಓವರ್‌ಗಳ ಬೌಲಿಂಗ್ ಮಾಡುವ ಅವಕಾಶವಿದೆ.
Live ಸ್ಕೋರ್ ಹೀಗಿದೆ
ಇನ್ನು ಈ ಸರಣಿಯ ಮೊದಲ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡಿತ್ತು. ಆ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ ತಂಡ ಅದ್ಭುತ ಪ್ರದರ್ಶನ ನೀಡಿದ್ದು ಡಕ್ವರ್ತ್ ಲೂಯೀಸ್ ನಿಯಮದಲ್ಲಿ 22 ರನ್‌ಗಳ ಅಂತರದಿಂದ ಗೆದ್ದು ಬೀಗಿತ್ತು. ಹೀಗಾಗಿ ಮೂರು ಪಂದ್ಯಗಳ ಈ ಟಿ20 ಸರಣಿಯಲಿ ಬಾಂಗ್ಲಾದೇಶ ತಂಡ 1-0 ಅಂತರದಿಂದ ಮುನ್ನಡೆಯಲ್ಲಿದೆ.
ಇನ್ನು ಅದಕ್ಕೂ ಮುನ್ನ ಬಾಂಗ್ಲಾದೇಶ ಹಾಗೂ ಐರ್ಲೆಂಡ್ ತಂಡಗಳು ಏಕದಿನ ಸರಣಿಯಲ್ಲಿಯೂ ಪರಸ್ಪರ ಕಾದಾಟ ನಡೆಸಿದೆ. ಏಕದಿನ ಸರಣಿಯಲ್ಲಿ ಬಾಂಗ್ಲಾದೇಶ ತಂಡ 2-0 ಅಂತರದಿಂದ ಸರಣಿ ವಶಕ್ಕೆ ಪಡೆದುಕೊಂಡಿತ್ತು. ಒಂದು ಪಂದ್ಯ ಮಳೆಗೆ ಆಹುತಿಯಾಗಿತ್ತು.
ಬಾಂಗ್ಲಾದೇಶ ಆಡುವ ಬಳಗ: ಲಿಟ್ಟನ್ ದಾಸ್ (ವಿಕೆಟ್ ಕೀಪರ್), ರೋನಿ ತಾಲುಕ್ದಾರ್, ನಜ್ಮುಲ್ ಹೊಸೈನ್ ಶಾಂಟೋ, ಶಮೀಮ್ ಹೊಸೈನ್, ತೌಹಿದ್ ಹೃದಯ್, ಶಕೀಬ್ ಅಲ್ ಹಸನ್ (ನಾಯಕ), ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್
ಬೆಂಚ್: ಶೋರಿಫುಲ್ ಇಸ್ಲಾಂ, ರಿಶಾದ್ ಹೊಸೈನ್, ಜಾಕರ್ ಅಲಿ
ಐರ್ಲೆಂಡ್ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್ (ನಾಯಕ), ರಾಸ್ ಅಡೈರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಕರ್ಟಿಸ್ ಕ್ಯಾಂಫರ್,
ಮಾರ್ಕ್ ಅಡೇರ್, ಫಿಯಾನ್ ಹ್ಯಾಂಡ್, ಗ್ರಹಾಂ ಹ್ಯೂಮ್, ಬೆಂಜಮಿನ್ ವೈಟ್
ಬೆಂಚ್: ಕ್ರೇಗ್ ಯಂಗ್, ಮ್ಯಾಥ್ಯೂ ಹಂಫ್ರೀಸ್, ಥಾಮಸ್ ಮೇಯಸ್