For Quick Alerts
ALLOW NOTIFICATIONS  
For Daily Alerts
 

SA vs IRE: ಬಲಿಷ್ಠ ದಕ್ಷಿಣ ಆಫ್ರಿಕಾ ತಂಡಕ್ಕೆ ಸೋಲುಣಿಸಿದ ಐರ್ಲೆಂಡ್

ಇತ್ತೀಚೆಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ತಂಡದ ದಾರಿ ಹಿಡಿಯುವಂತೆ ತೋರುತ್ತಿದೆ. ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು ಸೋತ ದಕ್ಷಿಣ ಆಫ್ರಿಕಾ ಇದೀಗ ಐರ್ಲೆಂಡ್ ಎದುರು ಮುಗ್ಗರಿಸಿದೆ.

ಐರ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ20 ಸರಣಿ ನಡೆಯುತ್ತಿದೆ. ಈ ಸರಣಿಯ ಎರಡನೇ ಪಂದ್ಯದಲ್ಲಿ ಐರ್ಲೆಂಡ್ ಎದುರು ದಕ್ಷಿಣ ಆಫ್ರಿಕಾ ಭಾರೀ ಮುಖಭಂಗ ಅನುಭವಿಸಿದೆ. 196 ರನ್‌ಗಳ ಗುರಿ ಬೆನ್ನಟ್ಟಿದ ಹರಿಣಗಳ ಪಡೆಯನ್ನು ಐರ್ಲೆಂಡ್ 10 ರನ್‌ಗಳಿಂದ ಸೋಲಿಸಿದೆ.

Ireland win against South Africa

ಐರ್ಲೆಂಡ್ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ್ದು ಇದೇ ಮೊದಲು. ದುಬೈನ ಶೇಖ್ ಜಾಯೆದ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಮೊದಲ ಪಂದ್ಯದಲ್ಲಿ ಗೆದ್ದಿದ್ದರೂ, ಎರಡನೇ ಪಂದ್ಯದಲ್ಲಿ ಚೇಸಿಂಗ್ ಮಾಡುವಾಗ ಸೋಲನುಭವಿಸಬೇಕಾಯಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಐರ್ಲೆಂಡ್ ತಂಡ 6 ವಿಕೆಟ್ ಕಳೆದುಕೊಂಡು 196 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆಫ್ರಿಕಾ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 185 ರನ್ ಗಳಿಸಲಷ್ಟೇ ಶಕ್ತವಾಯಿತು.

ಐರ್ಲೆಂಡ್ ಪರ ಆರಂಭಿಕರಾಗಿ ಕಣಕ್ಕೀಳಿದ ರಾಸ್ ಅಡೈರ್ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದರು. ಅವರು 58 ಎಸೆತಗಳಲ್ಲಿ 5 ಬೌಂಡರಿ ಹಾಗೂ 9 ಸಿಕ್ಸರ್‌ಗಳ ನೆರವಿನಿಂದ 100 ರನ್ ಬಾರಿಸಿದರು. ಇದಲ್ಲದೇ ನಾಯಕ ಪಾಲ್ ಸ್ಟಿರ್ಲಿಂಗ್ 31 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 52 ರನ್ ಗಳಿಸಿದರು. ಸ್ಟಿರ್ಲಿಂಗ್ ಮತ್ತು ರಾಸ್ ಅಡೈರ್ ಮೊದಲ ವಿಕೆಟ್‌ಗೆ 137 ರನ್‌ಗಳ ಜೊತೆಯಾಟವಾಡಿದರು. ಹೀಗಾಗಿ ಐರ್ಲೆಂಡ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಕಲೆ ಹಾಕಿತು.

ಆಫ್ರಿಕಾ ಪರ ರೀಜಾ ಹೆನ್ರಿಕ್ಸ್ (51) ಮತ್ತು ಮ್ಯಾಥ್ಯೂ ಬ್ರೀಟ್ಜ್ಕೆ (51) ಅರ್ಧಶತಕ ಗಳಿಸಿದರು. ಇವರನ್ನು ಬಿಟ್ಟರೆ ಬೇರೆ ಯಾವುದೇ ಬ್ಯಾಟರ್‌ಳು ರನ್ ಗಳಿಸಲು ಸಾಧ್ಯವಾಗಲಿಲ್ಲ. ರಯಾನ್ ರಿಕೆಲ್ಟನ್ 36 ರನ್‌ಗಳ ಕೊಡುಗೆ ನೀಡಿ ಔಟಾದರು. ರೀಜಾ 32 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 51 ರನ್ ಗಳಿಸಿದರೆ, ರಿಟ್ಜ್ಕೆ 41 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 51 ಗಳಿಸಿ ವಿಕೆಟ್‌ ಕಳೆದುಕೊಂಡರು. ಐರ್ಲೆಂಡ್ ಪರ ಮಾರ್ಕ್ ಆಡೈರ್ 4 ವಿಕೆಟ್ ಕಬಳಿಸ ಮಿಂಚಿದರೆ, ಗ್ರಹಾಂ ಹ್ಯೂಮ್ 3 ವಿಕೆಟ್ ಪಡೆದರು.

Story first published: Monday, September 30, 2024, 10:43 [IST]
Other articles published on Sep 30, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+