Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB Vs LSG: ವಿರಾಟ್ ಕೊಹ್ಲಿ ತಮ್ಮ ಫಾರ್ಮ್ ಮುಂದುವರೆಸುವುದು ಅನುಮಾನ ಎಂದ ಇರ್ಫಾನ್ ಪಠಾಣ್

ಇಂಡಿಯನ್ ಪ್ರೀಮಿಯರ್ ಲೀಗ್ 2013ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಎರಡು ಪಂದ್ಯಗಳಲ್ಲಿ ಸಿಹಿ-ಕಹಿ ಎರಡನ್ನು ನೋಡಿದೆ. ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಬಳಿಕ, ಎರಡನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲನುಭವಿಸಿತು. ಮೊದಲನೇ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದ ವಿರಾಟ್ ಕೊಹ್ಲಿ ಎರಡನೇ ಪಂದ್ಯದಲ್ಲಿ ವಿಫಲವಾದರು.

ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ ಜೈಂಟ್ಸ್ ವಿರುದ್ಧ ನಡೆಯುವ ಪಂದ್ಯದಲ್ಲಿ ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡಲು ಕೊಹ್ಲಿ ಸಜ್ಜಾಗಿದ್ದಾರೆ. ಎಲ್‌ಎಸ್‌ಜಿ ವಿರುದ್ಧದ ಪಂದ್ಯಕ್ಕೆ ಮುನ್ನವೇ ಭಾರತ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್ ಕೊಹ್ಲಿ ಫಾರ್ಮ್ ಕುರಿತಂತೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Irfan Pathan About Virat Kohli

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ಮುಂದುವರೆಸುತ್ತಾರೆ ಎನ್ನುವುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಹೇಳಿರುವ ಅವರು, ವಿರಾಟ್ ಕೊಹ್ಲಿ ಮುಂದಿನ ಪಂದ್ಯಗಳಲ್ಲಿ ಆರಂಭಿಕರಾಗಿ ಕಣಕ್ಕಿಳಿಯಬಾರದು ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕಳೆದ ಆವೃತ್ತಿಯಿಂದ ಅವರು ಆರ್ ಸಿಬಿ ತಂಡಕ್ಕಾಗಿ ಆರಂಭಿಕರಾಗಿ ಆಡುತ್ತಿದ್ದಾರೆ. ಈ ಮೊದಲು ಕೂಡ ಅವರು ಆರಂಭಿಕರಾಗಿ ಯಶಸ್ಸು ಕಂಡಿದ್ದರೂ ಪಠಾಣ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಪ್ರತಿ ಬಾರಿ ಅವರಿಂದ ದೊಡ್ಡ ಮೊತ್ತ ನಿರೀಕ್ಷೆ ಮಾಡಬಾರದು

"ಮೊದಲ ಕೆಲವು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟ್‌ನಿಂದ ರನ್ ಬರುತ್ತಿರುವ ಕಾರಣ ಆರ್ ಸಿಬಿಗೆ ಈ ವರ್ಷ ವಿಭಿನ್ನವಾಗಿ ಕಾಣಿಸುತ್ತಿದೆ. ಆದರೆ ಮುಂದಿನ ಪಂದ್ಯಗಳಲ್ಲಿ ಅವರು ಅದೇ ವೇಗದಲ್ಲಿ ಸ್ಕೋರ್ ಮಾಡುವುದನ್ನು ಮುಂದುವರಿಸುತ್ತಾರೆ ಮತ್ತು ಪ್ರತಿ ಬಾರಿಯೂ ಪಂದ್ಯವನ್ನು ಗೆಲ್ಲಿಸುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ. ಆಟ" ಎಂದು ಪಠಾಣ್ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಹೇಳಿದರು.

Irfan Pathan About Virat Kohli

"ಇಂತಹ ಪಂದ್ಯಾವಳಿಯಲ್ಲಿ, ಆರ್‌ಸಿಬಿ ತಂಡದಲ್ಲಿರುವ ಇತರ ಬ್ಯಾಟರ್‌ಗಳು ಸವಾಲಿಗೆ ಸಿದ್ಧರಾಗಿರಬೇಕು ಮತ್ತು ಅವರ ಪ್ರತಿಭೆ ಮತ್ತು ಪಾತ್ರಗಳಿಗೆ ತಕ್ಕಂತೆ ಪ್ರದರ್ಶನ ನೀಡಬೇಕು. ಅಲ್ಲದೆ, ಕೊಹ್ಲಿ ಆರ್‌ಸಿಬಿಗಾಗಿ ಇನ್ನಿಂಗ್ಸ್ ಆರಂಭಿಸಬೇಕು ಎಂದು ನಾನು ಭಾವಿಸುವುದಿಲ್ಲ" ಎಂದು ಮಾಜಿ ಭಾರತೀಯ ಆಲ್- ರೌಂಡರ್ ಹೇಳಿದರು.

ಐಪಿಎಲ್‌ನಲ್ಲಿ 100 ಕ್ಯಾಚ್‌ಗಳನ್ನು ಪೂರೈಸಲು ಕೊಹ್ಲಿ 5 ಕ್ಯಾಚ್‌ಗಳ ಅಂತರದಲ್ಲಿದ್ದಾರೆ. 34ರ ಹರೆಯದ ಅವರು ಟಿ20 ಕ್ರಿಕೆಟ್‌ನಲ್ಲಿ 11,500 ರನ್‌ಗಳನ್ನು ತಲುಪಲು 71 ರನ್‌ಗಳನ್ನು ಗಳಿಸಬೇಕಿದೆ. ಐಪಿಎಲ್‌ನಲ್ಲಿ 225 ಪಂದ್ಯಗಳನ್ನಾಡಿರುವ ಅವರು 6,727 ರನ್‌ ಗಳಿಸಿದ್ದಾರೆ. ಐಪಿಎಲ್ 2023ರ ಮೊದಲ ಎರಡು ಪಂದ್ಯಗಳಲ್ಲಿ 103 ರನ್ ಗಳಿಸಿದ್ದಾರೆ.

ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 49 ಎಸೆತಗಳಲ್ಲಿ ಅಜೇಯ 82 ರನ್ ಗಳಿಸುವ ಮೂಲಕ ಮಿಂಚಿದ್ದರು. ಆದರೆ, ಕೆಕೆಆರ್ ವಿರುದ್ಧದ ಎರಡನೇ ಪಂದ್ಯದಲ್ಲಿ 18 ಎಸೆತಗಳಲ್ಲಿ 21 ರನ್ ಗಳಿಸಿ ಔಟಾದರು. ಫಾಫ್ ಡುಪ್ಲೆಸಿಸ್ ಕೂಡ ಕಡಿಮೆ ಮೊತ್ತಕ್ಕೆ ಔಟಾದ ನಂತರ ಆರ್ ಸಿಬಿ ದಿಢೀರ್ ಕುಸಿತ ಕಂಡಿತು. ಕೆಕೆಆರ್ ವಿರುದ್ಧ ಸೋತ ಬಳಿಕ ತವರಿನಲ್ಲಿ ಈ ಬಾರಿ ಐಪಿಎಲ್‌ನ ಎರಡನೇ ಪಂದ್ಯವನ್ನಾಡಲು ಸಜ್ಜಾಗಿದ್ದು, ಮತ್ತೆ ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿದೆ.

Story first published: Monday, April 10, 2023, 17:13 [IST]
Other articles published on Apr 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+