ಕೊಹ್ಲಿಯಂತೆ ಸಾಮರ್ಥ್ಯವಿರುವ ಆಟಗಾರ ಈತ: ಯುವ ಕ್ರಿಕೆಟಿಗನ ಬಗ್ಗೆ ಇರ್ಫಾನ್ ಪಠಾಣ್ ಮಾತು

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅಬ್ಬರಿಸಿದ ಬಳಿಕ ಮೊದಲ ಎರಡು ಟಿ20 ಪಂದ್ಯಗಳಲ್ಲಿ ಮಂಕಾಗಿದ್ದ ಶುಬ್ಮನ್ ಗಿಲ್ ಅಂತಿಮ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದಾರೆ. ಸ್ಪೋಟಕ ಶತಕ ಸಿಡಿಸಿದ ಗಿಲ್ ಟೀಮ್ ಇಂಡಿಯಾ ಬೃಹತ್ ಮೊತ್ತಗಳಿಸಲು ಕಾರಣವಾದರು. ಈ ಮೂಲಕ ಟೀಮ್ ಇಂಡಿಯಾ ನಿರ್ಣಾಯಕ ಪಂದ್ಯದಲ್ಲಿ ಗೆದ್ದು ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.
ಈ ಪಂದ್ಯದಲ್ಲಿ ಯುವ ಆಟಗಾರ ಶುಬ್ಮನ್ ಗಿಲ್ ನೀಡಿದ ಪ್ರದರ್ಶನಕ್ಕೆ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ ಇರ್ಫಾನ್ ಪಠಾಣ್ ಭಾರತದ ಹಿರಿಯ ಆಟಗಾರ ವಿರಾಟ್ ಕೊಹ್ಲಿಗೆ ಹೋಲಿಸಿದ್ದಾರೆ. ಶುಬ್ಮನ್ ಗಿಲ್ ವಿರಾಟ್ ಕೊಹ್ಲಿ ರೀತಿಯಲ್ಲಿಯೇ ಮೂರು ಮಾದರಿಯಲ್ಲಿಯೂ ಸುದೀರ್ಘ ಕಾಲ ಅದ್ಭುತ ಪ್ರದರ್ಶನ ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಇರ್ಫಾನ್ ಪಠಾಣ್ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಅದ್ಭುತ ಫಾರ್ಮ್ ಮುಂದುವರಿಸಿದ ಗಿಲ್
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಶುಬ್ಮನ್ ಗಿಲ್ 63 ಎಸೆತಗಳಲ್ಲಿ 126 ರನ್‌ಗಳನ್ನು ಗಳಿಸಿದ್ದಾರೆ. ಅಹ್ಮದಾಬಾದ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿದ ಬಳಿಕ ತನ್ನ ರನ್ ವೇಗವನ್ನು ಅದ್ಭುತ ರೀತಿಯಲ್ಲಿ ಹೆಚ್ಚಿಸಿಕೊಂಡ ಗಿಲ್ ಒಟ್ಟಾರೆಯಾಗಿ ಈ ಪಂದ್ಯದಲ್ಲಿ 12 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ ಸಿಡಿಸಿದರು. ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಅಲ್ಪ ಮೊತ್ತಕ್ಕೆ ವಿಕೆಟ್ ಕಳೆದುಕೊಂಡ ಕಾರಣ ಚುಟುಕು ಮಾದರಿಯಲ್ಲಿ ಗಿಲ್ ಸಾಮರ್ಥ್ಯದ ಬಗ್ಗೆ ಪ್ರಶ್ನೆಗಳು ಏಳಲು ಆರಂಭವಾಗಿದ್ದವು. ಇದಕ್ಕೆ ಶುಬ್ಮನ್ ಗಿಲ್ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

ಕೊಹ್ಲಿಗೆ ಹೋಲಿಸಿದ ಪಠಾಣ್
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಶುಬ್ಮನ್ ಗಿಲ್ ನೀಡಿದ ಅದ್ಭುತ ಪ್ರದರ್ಶನದ ಬಳಿಕ ಇರ್ಫಾನ್ ಪಠಾಣ್ ಗಿಲ್ ಅವರನ್ನು ಟೀಮ್ ಇಂಡಿಯಾದ ಹಿರಿಯ ಆಟಗಾರ ವಿರಾಟ್ ಕೊಹ್ಲಿಗೆ ಹೋಲಿಸಿದ್ದಾರೆ. ವಿರಾಟ್ ಕೊಹ್ಲಿ ರೀತಿಯಲ್ಲಿಯೇ ಶುಬ್ಮನ್ ಗಿಲ್ ಕೂಡ ಮೂರು ಮಾದರಿಯಲ್ಲಿಯೂ ಸುದೀರ್ಘ ಕಾಲ ಅಬ್ಬರಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದಿದ್ದಾರೆ ಇರ್ಫಾನ್ ಪಠಾಣ್.

ಗಿಲ್ ಆಟದ ಅಭಿಮಾನಿ ಎಂದ ಪಠಾಣ್
"ಆತ ಬ್ಯಾಟಿಂಗ್ ಮಾಡುವ ರೀತಿಗೆ ನಾನು ಆತನ ದೊಡ್ಡ ಅಭಿಮಾನಿಯಾಗಿದ್ದೇನೆ. ನಾನು ಮತ್ತೆ ಮತ್ತೆ ಹೇಳುವುದೇನೆಂದರೆ ಆತ ಮೂರು ಮಾದರಿಯ ಆಟಗಾರ. ವಿರಾಟ್ ಕೊಹ್ಲಿ ಮೂರು ಮಾದರಿಯಲ್ಲಿಯೂ ಸುದೀರ್ಘ ಕಾಲ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ಈತ ಕೂಡ ಅಂಥಾದ್ದೇ ಸಾಮರ್ಥ್ಯ ಹೊಂದಿದ್ದಾರೆ" ಎಂದು ಶುಬ್ಮನ್ ಗಿಲ್ ಬಗ್ಗೆ ಇರ್ಫಾನ್ ಪಠಾಣ್ ಭಾರೀ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಗಿಲ್ ಆಟದ ರೀತಿಗೆ ಅಚ್ಚರಿ ವ್ಯಕ್ತಪಡಿಸಿದ ಪಠಾಣ್
ಇನ್ನು ಶುಬ್ಮನ್ ಗಿಲ್ ಬ್ಯಾಟಿಂಗ್‌ನಲ್ಲಿ ನೀಡುತ್ತಿರುವ ಅದ್ಭುತ ಪ್ರದರ್ಶನಕ್ಕೆ ಪಠಾಣ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. "ಇರ್ಫಾನ್ ಪಠಾಣ್ ತನ್ನ ಮೊದಲ ಶತಕವನ್ನು ಕಳೆದ ಆಗಸ್ಟ್‌ನಲ್ಲಿ ಸಿಡಿಸಿದರು. ಈಗ ಗಿಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 6 ಶತಕಗಳನ್ನು ಹೊಂದಿದ್ದಾರೆ. ಈಗ ನಾವು ಫೆಬ್ರವರಿ ತಿಂಗಳಿನಲ್ಲಿದ್ದೇವೆ. ಈ ಅವಧಿಯಲ್ಲಿ ಉಳಿದ ಎಲ್ಲಾ ಆಟಗಾರರು ಸೇರಿ ನಾಲ್ಕು ಶತಕ ಗಳಿಸಿದ್ದಾರೆ" ಎಂದು ಶುಬ್ಮನ್ ಗಿಲ್ ಬ್ಯಾಟಿಂಗ್ ಬಗ್ಗೆ ಭಾರೀ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications