ವಿಶ್ವ ಕ್ರಿಕೆಟ್‌ನಲ್ಲಿ ಈತನಂಥಾ ಆಟಗಾರರು ಅಪರೂಪ: ಭಾರತದ ಆಟಗಾರನ ಬಗ್ಗೆ ಇರ್ಫಾನ್ ಪಠಾಣ್ ಹೇಳಿಕೆ

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಭಾರತದ ಪ್ರಮುಖ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಉಪನಾಯಕಾಗಿರುವ ಹಾರ್ದಿಕ್ ಪಾಂಡ್ಯ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ತಂಡ ಬೃಹತ್ ಮೊತ್ತ ಗಳಿಸಲು ಕಾರಣವಾಗಿದ್ದರು. ಈ ಪ್ರದರ್ಶನದ ಬಳಿಕ ಮಾತನಾಡಿರುವ ಇರ್ಫಾನ್ ಪಠಾಣ್ ಹಾರ್ದಿಕ್ ಪಾಂಡ್ಯ ಅಪರೂಪದ ಸಾಮರ್ಥ್ಯ ಹೊಂದಿರುವ ಆಟಗಾರ ಎಂದು ಕೊಂಡಾಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಆರಂಬಿಕರಾದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಶತಕ ಸಿಡಿಸಿ ಅಬ್ಬರಿಸಿದರು. ಆದರೆ ಈ ಜೋಡಿ ಬೇರ್ಪಟ್ಟ ಬಳಿಕ ಟೀಮ್ ಇಂಡಿಯಾ ಕುಸಿತ ಕಂಡಾಗ ಹಾರ್ದಿಕ್ ಪಾಂಡ್ಯ ಭಾರತದ ರನ್ ಮೇಲೆತ್ತುವಲ್ಲಿ ಹಾರ್ದಿಕ್ ಪಾಂಡ್ಯ ಪಾತ್ರ ಮಹತ್ವದ್ದಾಗಿತ್ತು. 7ನೇ ವಿಕೆಟ್‌ಗೆ ಶಾರ್ದೂಲ್ ಠಾಕೂರ್ ಜೊತೆ ಸೇರಿಕೊಂಡು ಅರ್ಧ ಶತಕದ ಜೊತೆಯಾಟ ನೀಡಿದ ಹಾರ್ದಿಕ್ ಪಾಂಡ್ಯ 38 ಎಸೆತಗಳಲ್ಲಿ 54 ರನ್ ಬಾರಿಸಿ ಅಬ್ಬರಿಸಿದರು. ಇದರ ಪರಿಣಾಮವಾಗಿ ಟೀಮ್ ಇಂಡಿಯಾ 385/9 ರನ್‌ಗಳಿಸಲು ಸಾಧ್ಯವಾಯಿತು.

ಶತಕ ಬಾರಿಸಿದರೂ ಅಪ್ಪನಿಗೆ ಪೂರ್ತಿ ಖುಷಿಯಾಗಿಲ್ಲ: ಆಸಕ್ತಿಕರ ವಿಚಾರ ಹಂಚಿಕೊಂಡ ಶುಭಮನ್ ಗಿಲ್ಶತಕ ಬಾರಿಸಿದರೂ ಅಪ್ಪನಿಗೆ ಪೂರ್ತಿ ಖುಷಿಯಾಗಿಲ್ಲ: ಆಸಕ್ತಿಕರ ವಿಚಾರ ಹಂಚಿಕೊಂಡ ಶುಭಮನ್ ಗಿಲ್

ಈ ಪ್ರದರ್ಶನದ ಬಳಿಕ ಇರ್ಫಾನ್ ಪಠಾಣ್ ಹಾರ್ದಿಕ್ ಪಾಂಡ್ಯ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. "ಆತ ಅತ್ಯಂತ ನಿರ್ಣಾಯಕ ಆಟಗಾರ. ತಂಡದಲ್ಲಿ ಸಮತೋಲನ ಕಾಪಾಡಿಕೊಳ್ಳಬೇಕಾದರೆ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚುವ ಆಟಗಾರನ ಅಗತ್ಯವಿರುತ್ತದೆ. ಹಾರ್ದಿಕ್ ಪಾಂಡ್ಯ ತಂಡಕ್ಕೆ ನೀಡುವ ಬಲವನ್ನು ಬೇರೆಯವರಿಂದ ತುಂಬುವುದು ಕಠಿಣ. ವಿಶ್ವಕ್ರಿಕೆಟ್‌ನಲ್ಲಿ ಆತನಂಥಾ ಆಟಗಾರರು ಬಹಳ ಅಪರೂಪ" ಎಂದಿದ್ದಾರೆ ಇರ್ಫಾನ್ ಪಠಾಣ್.

ಮುಂದುವರಿದು ಮಾತನಾಡಿದ ಇರ್ಫಾನ್ ಪಠಾಣ್ "ಆತ ಉತ್ತಮ ಲಯದಲ್ಲಿದ್ದರೆ ಆತನನ್ನು ತಡೆಯುವುದು ಬಹಳ ಕಷ್ಟ. ಈ ಪ್ರದರ್ಶನ ಸರಿಯಾದ ಸಮಯದಲ್ಲಿ ಮತ್ತು ವೇಗವಾಗಿ ಬಂದಿದೆ ಯಾಕೆಂದರೆ ಇತರ ಬ್ಯಾಟರ್‌ಗಳು ಹಳೆಯ ಚೆಂಡಿನಲ್ಲಿ ರನ್‌ಗಳಿಸಲು ಕಷ್ಟಪಡುತ್ತಿದ್ದರು. ಆದರೆ ಹಾರ್ದಿಕ್ ಪಾಂಡ್ಯಗೆ ಅಷ್ಟು ಕಷ್ಟವಾಗಲಿಲ್ಲ" ಎಂದಿದ್ದಾರೆ ಇರ್ಫಾನ್ ಪಠಾಣ್.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಭಾರತ ವಶಕ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಭಾರತ ತಂಡ ಐಸಿಸಿ ಶ್ರೇಯಾಂಕಪಟ್ಟಿಯಲ್ಲಿಯೂ ಮೊದಲ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ. ಇದೀಗ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಟಿ20 ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದು ಚುಟುಕು ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಅವರೇ ಮುನ್ನಡೆಸಲಿದ್ದಾರೆ.

IND vs NZ T20 Series: ಟಿ20 ಸರಣಿಯಿಂದ ಹೊರಬಿದ್ದ ಟೀಂ ಇಂಡಿಯಾ ಆರಂಭಿಕ ಬ್ಯಾಟರ್IND vs NZ T20 Series: ಟಿ20 ಸರಣಿಯಿಂದ ಹೊರಬಿದ್ದ ಟೀಂ ಇಂಡಿಯಾ ಆರಂಭಿಕ ಬ್ಯಾಟರ್

ಸ್ಕ್ವಾಡ್‌ಗಳು
ಟೀಮ್ ಇಂಡಿಯಾ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪ ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಖೇಶ್ ಕುಮಾರ್

ನ್ಯೂಜಿಲೆಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಡೇನ್ ಕ್ಲೀವರ್, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆಂಜಮಿನ್ ಲಿಸ್ಟರ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್

For Quick Alerts
ALLOW NOTIFICATIONS
For Daily Alerts
Story first published: Wednesday, January 25, 2023, 18:28 [IST]
Other articles published on Jan 25, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X