ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಗ್ಗೆ ವಿಶೇಷ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಬಾರಿಯ ಉಳಿದೆಲ್ಲಾ ನಾಯಕರುಗಳಿಗಿಂತ ಅತ್ಯಂತ ಹೆಚ್ಚು ಆಕ್ರಮಣಕಾರಿ ಮನೋಭಾವದೊಂದಿಗೆ ಕಣಕ್ಕಿಳಿದಿದ್ದು ಇದು ಅವರನ್ನು ಇತರ ನಾಯಕರಿಗಿಂತ ಭಿನ್ನವಾಗಿಸಿದೆ ಎಂದಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೂ ಮುನ್ನ ಸ್ಟಾರ್ ಸ್ಪೋರ್ಟ್ಸ್ ಜೊತೆಗೆ ಇರ್ಫಾನ್ ಪಠಾಣ್ ಮಾತನಾಡಿದ್ದು ರೋಹಿತ್ ಶರ್ಮಾ ಅವರ ಆಕ್ರಮಣಕಾರಿ ಆಟದ ಬಗ್ಗೆ ಮಾತನಾಡಿದರು. ರೋಹಿತ್ ಶರ್ಮಾ ಅಹ್ಮದಾಬಾದ್‌ನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 63 ಎಸೆತಗಳಲ್ಲಿ 86 ರನ್‌ಗಳನ್ನು ಬಾರಿಸಿದ್ದರು.

"ಅದು ಅವರ ಟೈಮಿಂಗ್. ಅವರು ಬಹಳ ಅದ್ಭುತವಾದ ಫಾರ್ಮ್‌ನಲ್ಲಿದ್ದಾರೆ. ಅವರು ಚೆಂಡುಗಳನ್ನು ಬಿಡುತ್ತಿರುವ ರೀತಿ ನೋಡಿದರೆ ನೆಟ್ಸ್‌ನಲ್ಲಿ ಅಸಡ್ಡೆಯಿಂದ ಆಡದೆ ಜೇವಲ ದೊಡ್ಡ ಹೊಡೆತಗಳನ್ನು ಮಾತ್ರವೇ ಅಭ್ಯಾಸ ಮಾಡುತ್ತಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಅವರು ಅಭ್ಯಾಸಕ್ಕೂ ಬಹಳ ಆತ್ಮವಿಶ್ವಾಸದಿಂದ ತೆರಳುತ್ತಿದ್ದಾರೆ. ಅಲ್ಲದೆ ಅರ್ಹ ಎಸೆತಗಳಿಗೆ ಅವರು ಗೌರವ ನೀಡುತ್ತಿದ್ದಾರೆ. ಆದರೆ ಉಳಿದೆಲ್ಲಾ ನಾಯಕರಿಗಿಣತಲೂ ರೋಹಿತ್ ಶರ್ಮಾ ಅತ್ಯಂತ ಆಕ್ರಮಣಕಾರಿ ಮನೋಭಾವದೊಂದಿಗೆ ಆಡುತ್ತಿದ್ದು ಇದು ಬಹಳ ಕಠಿಣ" ಎಂದು ರೋಹಿತ್ ಶರ್ಮಾ ಆಟದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ ಇರ್ಫಾನ್ ಪಠಾಣ್.
ಇನ್ನು ಈ ವಿಶ್ವಕಪ್‌ನಲ್ಲಿ ನಾಯಕನಾಗಿ ರೋಹಿತ್ ಶರ್ಮಾ ವಹಿಸಿಕೊಂಡಿರುವ ಜವಾಬ್ದಾರಿಯನ್ನು ಪರಿಗಣಿಸಿ ಪ್ರಶಂಸೆಗೆ ಅರ್ಹರು ಎಂದಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್‌ನಲ್ಲಿ ರೋಹಿತ್ ಮೂರು ಪಂದ್ಯಗಳಲ್ಲಿ ಒಂದು ಶತಕ ಮತ್ತು ಒಂದು ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.
"ರೋಹಿತ್ ಶರ್ಮಾ ಅವರನ್ನು ಎಷ್ಟು ಹೊರಗಳಿದರೂ ಕಡಿಮೆಯೇ. ಯಾಕೆಂದರೆ ಅವರು ಹೊತ್ತುಕೊಂಡಿರುವ ಜವಾಬ್ಧಾರಿಯಿಂದಾಗಿ ಈ ಪ್ರಶಂಸೆಗೆ ಅವರು ಅತ್ಯಂತ ಅರ್ಹರು. ಅವರು ಹೊಡೆತಗಳನ್ನು ಅತ್ಯಂತ ಸುಲಭವಾಗಿ ಬಾರಿಸುತ್ತಾರೆ. ಅಭ್ಯಾಸದ ಸಂದರ್ಭದಲ್ಲಿ ಅವರು ಆಕ್ರಮಣಕಾರಿ ಶಾಟ್‌ಗಳ ಜೊತೆಗೆ ರಕ್ಷಣಾತ್ಮಕ ಆಟವನ್ನು ಕೂಡ ಆಡುವುದಬ್ನು ಕಾಣಬಹುದು. ಆದರೆ ಮೈದಾನದಲ್ಲಿ ಅವರು ಅತ್ಯಮತ ಆಕ್ರಮಣಕಾರಿಯಾದ ಪ್ರದರ್ಶನ ನೀಡುತ್ತಿದ್ದಾರೆ" ಎಂದಿದ್ದಾರೆ ಇರ್ಫಾನ್ ಪಠಾಣ್.
ಸಂಪೂರ್ಣ ಸ್ಕ್ವಾಡ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್
ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ಕುಮರ್ ದಾಸ್, ತನ್ಜಿದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ (ಉಪನಾಯಕ), ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೇದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್