IPL 2022: ಬೆಸ್ಟ್ ಪ್ಲೇಯಿಂಗ್ 11 ತಿಳಿಸಿದ ಇರ್ಫಾನ್ ಪಠಾಣ್

ಟೀಂ ಇಂಡಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್ ಐಪಿಎಲ್ 2022ರ ಬೆಸ್ಟ್ ಪ್ಲೇಯಿಂಗ್ ಇಲೆವೆನ್ ಅನ್ನು ಪ್ರಕಟಿಸಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 15ನೇ ಸೀಸನ್‌ನಲ್ಲಿ ಗುಜರಾತ್ ಟೈಟನ್ಸ್ ಚೊಚ್ಚಲ ಸೀಸನ್‌ನಲ್ಲೇ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ಪಠಾಣ್ ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.
ಐಪಿಎಲ್ 2022ರ ಆವೃತ್ತಿಯಲ್ಲಿ ಎರಡು ಹೊಸ ತಂಡಗಳು ಸೇರಿದಂತೆ ಒಟ್ಟು 10 ತಂಡಗಳು ಭಾಗಿಯಾಗಿದ್ದವು. ಆದ್ರೆ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ತನ್ನ ಮೊದಲ ಆವೃತ್ತಿಯಲ್ಲೇ ಟ್ರೋಫಿಯನ್ನ ಗೆದ್ದಿರುವುದು ವಿಶೇಷ. ಫೈನಲ್‌ನಲ್ಲಿ ಆಲ್‌ರೌಂಡರ್ ಪ್ರದರ್ಶನ ನೀಡಿದ ಪಾಂಡ್ಯ ಮೂರು ಪ್ರಮುಖ ವಿಕೆಟ್‌ಗಳನ್ನ ಸಂಪಾದಿಸಿದ್ದಾರೆ.
ಈ ಗೆಲುವಿನ ನಂತರ ಇರ್ಫಾನ್ ಪಠಾಣ್ ತನ್ನ ನೆಚ್ಚಿನ ಪ್ಲೇಯಿಂಗ್ ಇಲೆವೆನ್ ಆಟಗಾರರನ್ನ ಆಯ್ಕೆ ಮಾಡಿದ್ದಾರೆ. ಇತ್ತೀಚೆಗೆ ಸಚಿನ್ ಹೇಳಿದಂತೆ ಜೋಸ್ ಬಟ್ಲರ್ ಮತ್ತು ಕೆ.ಎಲ್ ರಾಹುಲ್ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸಿಕೊಂಡಿರುವುದು ಸಹಜ.
ಓಪನಿಂಗ್‌ನಲ್ಲಿ ಈ ಇಬ್ಬರು ಬ್ಯಾಟ್ಸ್‌ಮನ್‌ಗಳ ನಂತರ ಮೂರನೇ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಲಾಗಿದ್ದು, ಪಾಂಡ್ಯ 15 ಪಂದ್ಯಗಳಲ್ಲಿ 487 ರನ್‌ಗಳ ಜೊತೆಗೆ ಏಳು ವಿಕೆಟ್ ಸಂಪಾದಿಸಿದ್ದರು.
ಇನ್ನು ಪಠಾಣ್ ಟೀಂನಲ್ಲಿ ಐದನೇ ಮತ್ತು ಆರನೇ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು ಡೇವಿಡ್ ಮಿಲ್ಲರ್‌ಗೆ ಅವಕಾಶ ನೀಡಲಾಗಿದೆ. ಇದಾದ ಬಳಿಕ ರಶೀದ್ ಖಾನ್, ಮೊಹಮ್ಮದ್ ಶಮಿ ಜೊತೆಗೆ ಆರ್‌ಸಿಬಿಯಿಂದ ಏಕೈಕ ಆಟಗಾರನಾಗಿ ಹರ್ಷಲ್ ಪಟೇಲ್‌ರನ್ನ ಆಯ್ಕೆ ಮಾಡಿಕೊಂಡಿದ್ದಾರೆ.
ಇನ್ನು ಸನ್‌ರೈಸರ್ಸ್ ಹೈದ್ರಾಬಾದ್ ಪರ ಆಡಿದ ಸ್ಪೀಡ್‌ಸ್ಟರ್ ಉಮ್ರಾನ್ ಮಲ್ಲಿಕ್ ಹಾಗೂ ಪರ್ಪಲ್ ಕ್ಯಾಪ್ ವಿನ್ನರ್ ಯುಜವೇಂದ್ರ ಚಹಾಲ್‌ಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಿದ್ದಾರೆ. ಕುಲದೀಪ್ ಯಾದವ್‌ಗೆ 12ನೇ ಆಟಗಾರನಾಗಿ ಅವಕಾಶ ಒದಗಿಸಲಾಗಿದೆ.
ಇರ್ಫಾನ್ ಪಠಾಣ್ ಬೆಸ್ಟ್ ಪ್ಲೇಯಿಂಗ್ 11:
ಜೋಸ್ ಬಟ್ಲರ್, ಕೆ.ಎಲ್ ರಾಹುಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಿಲ್ಲರ್, ರಶೀದ್ ಖಾನ್, ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್ (12ನೇ ಆಟಗಾರ- ಕುಲದೀಪ್ ಯಾದವ್)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications