ಫಾರ್ಮ್ ಹಾಗೂ ಫಿಟ್‌ನೆಸ್ ಬಗ್ಗೆ ಚಿತ್ತ ಹರಿಸಲು ರೋಹಿತ್ ಶರ್ಮಾಗೆ ಇರ್ಫಾನ್ ಪಠಾಣ್ ಸಲಹೆ

ಈ ವರ್ಷ ಏಕದಿನ ವಿಶ್ವಕಪ್ ನಡೆಯಲಿರುವ ಕಾರಣದಿಂದಾಗಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಫಾರ್ಮ್ ಹಾಗೂ ಫಿಟ್‌ನೆಸ್ ಕಡೆಗೆ ಗಮನ ನೀಡುವುದು ಉತ್ತಮ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್. ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಹೆಬ್ಬರಳಿಗೆ ಗಾಯಮಾಡಿಕೊಂಡ ಬಳಿಕ ತಂಡದಿಂದ ಹೊರಗುಳಿದಿದ್ದ ರೋಹಿತ್ ಇದೀಗ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಕಮ್‌ಬ್ಯಾಕ್‌ಗೆ ಸಜ್ಜಾಗಿದ್ದಾರೆ.
ಕಳೆದ ವರ್ಷಾರಂಭದಲ್ಲಿ ಎಲ್ಲಾ ಮೂರು ಮಾದರಿಗಳಿಗೂ ರೋಹಿತ್ ಶರ್ಮಾ ನಾಯಕನಾಗಿ ನೇಮಕವಾದರು. ಆದರೆ 2022ರಲ್ಲಿ ಭಾರತ ತಂಡ ಆಡಿದ 71 ಪಂದ್ಯಗಳ ಪೈಕಿ 32 ಪಂದ್ಯಗಳನ್ನು ಆಡದೆ ಹೊರಗುಳಿದಿದ್ದರು. 2022ರಲ್ಲಿ ಟೀಮ್ ಇಂಡಿಯಾ ಆಡಿದ 7 ಟೆಸ್ಟ್ ಪಂದ್ಯಗಳ ಪೈಕಿ ರೋಹಿತ್ ಶರ್ಮಾ ಕೇವಲ 2 ಪಂದ್ಯಗಳನ್ನಷ್ಟೇ ಆಡಿದ್ದಾರೆ.
ವಿಶ್ವಕಪ್‌ಗೆ ಕೆಲವೇ ತಿಂಗಳುಗಳು ಇರುವ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಫಿಟ್‌ಬೆಸ್ ಬಗ್ಗೆ ಸಾಕಷ್ಟು ಪ್ರಶ್ನೆಗಳು ಏಳುತ್ತಿದೆ. ಹಾರ್ದಿಕ್ ಪಾಂಡ್ಯ ಅವರನ್ನು ಉಪನಾಯಕನ ಸ್ಥಾನಕ್ಕೆ ನೇಮಕ ಮಾಡಲಾಗಿದ್ದು ರೋಹಿತ್ ಶರ್ಮಾಗೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುವ ಅನಿವಾರ್ಯತೆ ಬಂದಿದೆ.
ರೋಹಿತ್ ಶರ್ಮಾ ಕಳೆದ ವಿಶ್ವಕಪ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ್ದರು. ಟೂರ್ನಿಯಲ್ಲಿ ಕೇವಲ 116 ರನ್‌ಗಳಿಸಿದ ರೋಹಿತ್ ಶರ್ಮಾ ಒಂದು ಅರ್ಧ ಶತಕ ಮಾತ್ರವೇ ಸಿಡಿಸಿದ್ದರು. ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯಲ್ಲಿ ಗಾಯದಿಂದ ಹೊರಬಿಳುವ ಮುನ್ನ ರೋಹಿತ್ ಶರ್ಮಾ 27 ಎಸೆತಗಳಲ್ಲಿ 51 ರನ್ ಸಿಡಿಸಿದ್ದರು. ಬಳಿಕ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ರೋಹಿತ್ ಶರ್ಮಾ ಹೊರಗುಳಿದಿದ್ದರು.
ಈ ಸಂದರ್ಭದಲ್ಲಿ ಇರ್ಫಾನ್ ಪಠಾಣ್ ರೋಹಿತ್ ಶರ್ಮಾ ಫಿಟ್‌ನೆಸ್ ಹಾಗೂ ಫಾರ್ಮ್ ಬಗ್ಗೆ ಮಾತನಾಡಿದ್ದಾರೆ. "ನಾಯಕತ್ವದ ಬಗ್ಗೆ ಹೇಳುವುದಾದರೆ ಆತನೋರ್ವ ಅದ್ಭುತವಾದ ನಾಯಕ. ಈ ತಂಡವನ್ನು ಅವರು ಬಹಳ ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ಆದರೆ ಎರಡು ವಿಚಾರಗಳಲ್ಲಿ ಅವರು ಸಾಕಷ್ಟು ಗಮನ ನೀಡಬೇಕಿದೆ. ಅದೆಂದರೆ ಅವರ ಫಾರ್ಮ್ ಹಾಗೂ ಫಿಟ್‌ನೆಸ್" ಎಂದಿದ್ದಾರೆ ಇರ್ಫಾನ್ ಪಠಾಣ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications