ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ಕ್ರಿಕೆಟ್; ಪಂತ್ ಬದಲು ಕನ್ನಡಿಗನಿಗೆ ವಿಕೆಟ್ ಕೀಪಿಂಗ್ ಜವಾಬ್ಧಾರಿ?

Is KL Rahul a ready made replacement for Rishabh Pant?

ಮಹೇಂದ್ರ ಸಿಂಗ್ ಧೋನಿ ವಿಶ್ವಕಪ್ ಬಳಿಕ ಯಾವುದೇ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪಾಲ್ಗೊಂಡಿಲ್ಲ. ಧೋನಿ ಮುಂದಿನ ನಡೆಯ ಕುರಿತಾಗಿಯೂ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ. ಹೀಗಾಗಿ ಆಸ್ಟ್ರೇಲಿಯಾದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್‌ನಲ್ಲಿ ಧೋನಿ ಪಾಲ್ಗೊಳ್ಳುವ ಕುರಿತು ಸ್ಪಷ್ಟತೆಯಿಲ್ಲ.

ಹೀಗಾಗಿ ಟೀಮ್ ಇಂಡಿಯಾ ಧೋನಿ ಜಾಗಕ್ಕೆ ಉತ್ತಮ ಕೀಪರ್‌ನ ಹುಡುಕಾಟದಲ್ಲಿದೆ. ರಿಷಬ್ ಪಂತ್‌ಗೆ ಸತತ ಅವಕಾಶಗಳನ್ನು ನೀಡಲಾಗಿದ್ದರೂ ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಸಂಜು ಸ್ಯಾಮ್ಸನ್ ಅವರನ್ನು ಕಳೆದೆರಡು ಸರಣಿಗಳಿಗೆ ಆಯ್ಕೆ ಮಾಡಲಾಗಿತ್ತಾದರೂ ತಂಡದ ನಾಯಕ ಹಾಗೂ ಮ್ಯಾನೇಜ್‌ಮೆಂಟ್‌ಗೆ ಸಂಜು ಮೇಲೆ ನಂಬಿಕೆಯಿದ್ದಂತೆ ಕಾಣುತ್ತಿಲ್ಲ. ಹೀಗಾಗಿ ಟೀಮ್ ಇಂಡಿಯಾ ಪರ್ಯಾಯ ದಾರಿಯ ಹುಡುಕಾಟದಲ್ಲಿದೆ.

ಪಂತ್ ಮತ್ತೆ ವಿಫಲ, ಸ್ಥಾನ ಪಡೆಯಲು ಸಫಲ; ಇದು ಯಾರ ಕೃಪಾಕಟಾಕ್ಷದ ಫಲಪಂತ್ ಮತ್ತೆ ವಿಫಲ, ಸ್ಥಾನ ಪಡೆಯಲು ಸಫಲ; ಇದು ಯಾರ ಕೃಪಾಕಟಾಕ್ಷದ ಫಲ

ಟೀಮ್ ಇಂಡಿಯಾದ ಪ್ರಮುಖ ಆಟಗಾರ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಆಗಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮುಂದುವರಿಸಿದರೆ ಹೇಗೆ ಎಂಬ ಚಿಂತನೆಯಲ್ಲಿ ಕೋಚ್ ರವಿ ಶಾಸ್ತ್ರಿ ಇದ್ದಾರೆ ಎನ್ನುವುದು ತಿಳಿದುಬಂದಿದೆ. ಚುಟುಕು ಮಾದರಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಕೆಎಲ್ ರಾಹುಲ್ ಮುಂದಿನ ವಿಶ್ವಕಪ್ ದೃಷ್ಟಿಯಲ್ಲಿ ಉತ್ತಮ ಆಯ್ಕೆಯಾಗಿರಲಿದೆ.

ಕೆಎಲ್ ರಾಹುಲ್ ದೇಸಿ ಟೂರ್ನಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದು, ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಐಪಿಎಲ್‌ನಲ್ಲೂ ಪಂಜಾಬ್ ತಂಡವನ್ನು ಪ್ರತಿನಿಧಿಸುತ್ತಿರುವ ರಾಹುಲ್ ಪಂಜಾಬ್ ಪರವಾಗಿಯೂ ಗ್ಲೌಸ್ ತೊಟ್ಟಿದ್ದು ಅಲ್ಲೂ ವಿಕೆಟ್ ಹಿಂದೆ ಗಮನಾರ್ಹ ಪ್ರದರ್ಶನ ನೀಡಿದ್ದಾರೆ.

ರಿಷಬ್ ಪಂತ್, ಸಂಜು ಸ್ಯಾಮ್ಸನ್ ಪ್ರದರ್ಶನದ ಮೇಲೆ ಎಂಎಸ್ ಧೋನಿ ಕಣ್ಣು!?ರಿಷಬ್ ಪಂತ್, ಸಂಜು ಸ್ಯಾಮ್ಸನ್ ಪ್ರದರ್ಶನದ ಮೇಲೆ ಎಂಎಸ್ ಧೋನಿ ಕಣ್ಣು!?

ಹೀಗಾಗಿ ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪಿಂಗ್ ಕುರಿತಾಗ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಡೆಲ್ಲಿ ಆಟಗಾರ ರಿಷಬ್ ಪಂತ್ ಹಾಗೂ ತಂಡದ ಮ್ಯಾನೇಜ್‌ಮೆಂಟ್ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದು ಆ ನಿರೀಕ್ಷೆ ತಲುಪುವಲ್ಲಿ ಪಂತ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಹೀಗಾಗಿ ಮುಂದಿನ ಸರಣಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಟೀಮ್ ಇಂಡಿಯಾ ಪಾಲಿಗೆ ವಿಶ್ವಕಪ್ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ.

Story first published: Sunday, December 15, 2019, 15:38 [IST]
Other articles published on Dec 15, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X