ಇಂಗ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯವೇ ರೋಹಿತ್‌ಗೆ ಕೊನೆಯಾ? ವಿಶ್ವಕಪ್ ಯೋಜನೆಯಿಂದ ಹಿಟ್‌ಮ್ಯಾನ್ ಔಟ್?
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಅವರಿಗೆ, ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯ ಅವರ ಅಂತಾರಾಷ್ಟ್ರೀಯ ವೃತ್ತಿ ಜೀವನದ ಕೊನೆಯ ಪಂದ್ಯ ಆಗಬಹುದು ಎಂಬ ಸುದ್ದಿಗಳು ಹರಿದಾಡುತ್ತಿವೆ. ಮುಂದಿನ ವರ್ಷದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಆಡುವ ಕನಸು ಹೊಂದಿದ್ದ ರೋಹಿತ್ ಶರ್ಮಾ, ಇಂಗ್ಲೆಂಡ್ ನೆಲದಲ್ಲಿ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಇವರ ವೃತ್ತಿ ಜೀವನದ ಮೇಲೆ ಅಪಾಯದ ತೂಗುಗತ್ತಿ ನೇತಾಡುತ್ತಿದೆ.
ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಅನುಸಾರ, ಮುಂದಿನ ವರ್ಷದ ಏಕದಿನ ವಿಶ್ವಕಪ್‌ನ ಯೋಜನೆಗಳ ಭಾಗವಾಗಿ ರೋಹಿತ್ ಶರ್ಮಾ ಇಲ್ಲ ಎಂಬುದನ್ನು ಬಿಸಿಸಿಐ ಆಯ್ಕೆ ಸಮಿತಿ ತಿಳಿಸಿದೆ ಎಂದು ಸ್ಪಷ್ಟಪಡಿಸಿದೆ. ಇನ್ನು ಇಂಗ್ಲೆಂಡ್‌ಗೆ ಪ್ರವಾಸ ಬೆಳೆಸುವ ಸಮಯದಲ್ಲಿ ಕೋಚ್ ಗೌತಮ್ ಗಂಭೀರ್ ಜೊತೆಗೆ ನಡೆದ ಸಭೆಯಲ್ಲಿ ಬಿಸಿಸಿಐ ಆಯ್ಕೆ ಸಮಿತಿಯ ನಿರ್ಧಾರವನ್ನು ತಿಳಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಖಚಿತ ಮಾಹಿತಿ ಹೊರ ಬಂದಿಲ್ಲ.

ಸತತ ರನ್‌ಗಳನ್ನು ಕಲೆ ಹಾಕುವಲ್ಲಿ ರೋಹಿತ್ ಶರ್ಮಾ ವಿಫಲರಾಗುತ್ತಿದ್ದಾರೆ. ಅಫ್ಘಾನಿಸ್ತಾನ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು. ಆದರೆ ಇಂಗ್ಲೆಂಡ್ ವಿರುದ್ಧದ ನಡೆದ ಎರಡೂ ಏಕದಿನ ಪಂದ್ಯಗಳಲ್ಲಿ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ಎಡವಿದ್ದರು. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ರೋಹಿತ್ 11, ಕಾರ್ಡಿಫ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ 26 ರನ್ ಬಾರಿಸಿ ರೋಹಿತ್ ನಿರಾಸೆ ಅನುಭವಿಸಿದ್ದಾರೆ.
ಬಿಸಿಸಿಐ ಯುವ ಆಟಗಾರರತ್ತ ಚಿತ್ತ ನೆಟ್ಟಿದೆ ಎಂದು ತಿಳಿದು ಬಂದಿದೆ. ರೋಹಿತ್ ಶರ್ಮಾ ಅವರ ಬದಲಿಗೆ ಯಶಸ್ವಿ ಜೈಸ್ವಾಲ್ ಅವರಿಗೆ ಅವಕಾಶ ಕಲ್ಪಿಸಬೇಕು ಎಂಬ ಕನಸು ಬಿಸಿಸಿಐ ಹೊಂದಿದೆ, ಈ ಬಗ್ಗೆ ರೋಹಿತ್ ಶರ್ಮಾಗೂ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ. ರೋಹಿತ್ ಶರ್ಮಾ ಈ ನಿರ್ಧಾರದಿಂದ ಬೇಸರಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಅವರು ಫಿಟ್‌ನೆಸ್ ಬಗ್ಗೆ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಈ ಬಗ್ಗೆ ಅವರು ಬಿಸಿಸಿಐ ಕೆಲವು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಯುವಕರಿಗೆ ಅವಕಾಶ
ರೋಹಿತ್ ಶರ್ಮಾ ಅವರಿಗೆ ಸದ್ಯ 39 ವರ್ಷ 77 ದಿನಗಳಾಗಿವೆ. ವಿಶ್ವಕಪ್ ಆಗುವ ವರೆಗೆ ಇವರಿಗೆ 40 ವರ್ಷ ತುಂಬುತ್ತದೆ. ಹೀಗಾಗಿ ಬಿಸಿಸಿಐ ಆಯ್ಕೆ ಸಮಿತಿ ಇವರ ಸ್ಥಾನದಲ್ಲಿ ಬೇರೆ ಆಟಗಾರನ ಹುಡುಕಾಟ ನಡೆಸಿದೆ. ಬಿಸಿಸಿಐ ಆಯ್ಕೆ ಸಮಿತಿ 2027 ಏಕದಿನ ವಿಶ್ವಕಪ್‌ಗೆ ಹೊಸ ತಂಡವನ್ನು ಕಟ್ಟಲು ಬಯಸುತ್ತಿದೆ. ಹೀಗಾಗಿ ಬಿಸಿಸಿಐ ಯಶಸ್ವಿ ಜೈಸ್ವಾಲ್ ಅವರಂತಹ ಯುವ ಆಟಗಾರರಿಗೆ ಅವಕಾಶಗಳನ್ನು ನೀಡಲು ಬಯಸುತ್ತಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದರೂ ಯಶಸ್ವಿ ಜೈಸ್ವಾಲ್ ಅವರಿಗೆ ಏಕದಿನ ಫಾರ್ಮೆಟ್‌ನಲ್ಲಿ ತಮ್ಮ ಸ್ಥಾನವನ್ನು ಭಧ್ರ ಪಡಿಸಿಕೊಳ್ಳಲು ಇನ್ನು ಕಾಯುವಂತೆ ಆಗಿದೆ. ಯಶಸ್ವಿ ಅಪ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದರು.
ಶುಭಮನ್ ಗಿಲ್‌ಗೆ ಪಟ್ಟ ಕಟ್ಟಿದಾಗಲೇ ಸುಳಿವು
ರೋಹಿತ್ ಶರ್ಮಾ ಅವರಿಂದ ಏಕದಿನ ನಾಯಕತ್ವವನ್ನು ಕಸಿದುಕೊಂಡು ಈಗಾಗಲೇ ಶುಭಮನ್ ಗಿಲ್ ಅವರಿಗೆ ನೀಡಲಾಗಿದೆ. ಇದಾದ ಬಳಿಕವೇ ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಪ್ರಶ್ನೆಗಳು ಏಳಲು ಆರಂಭವಾಗಿದ್ದವು. ಈಗಾಗಲೇ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಪರ ಟಿ20 ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಸದ್ಯ ಅವರು ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ಇವರಿಗೆ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಆಡುವ ದೊಡ್ಡ ಆಸೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications

