ದೇಶಕ್ಕಿಂತಲೂ ಐಪಿಎಲ್ ಹೆಚ್ಚು ಮುಖ್ಯವಾಯಿತಾ? ರೋಹಿತ್ ಶರ್ಮಾಗೆ ಮಾಜಿ ಕ್ರಿಕೆಟಿಗನ ಪ್ರಶ್ನೆ

ಗಾಯಗೊಂಡ ಕಾರಣ ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆಯಾಗಿರಲಿಲ್ಲ. ರೋಹಿತ್ ಫಿಟ್‌ನೆಸ್ ನೋಡಿಕೊಂಡ ಬಳಿಕ ನಿರ್ಧರಿಸಲಾಗುತ್ತದೆ ಎಂದು ಸ್ವತಃ ಬಿಸಿಸಿಐ ಸ್ಪಷ್ಟವಾಗಿ ಹೇಳಿತ್ತು. ರೋಹಿತ್ ಶರ್ಮಾಗೆ ಮೂರು ವಾರಗಳ ವಿಶ್ರಾಂತಿಗೂ ಸೂಚಿಸಲಾಗಿತ್ತು. ಆದರೆ ಈ ಅವಧಿಯ ಒಂದು ವಾರಕ್ಕೂ ಮುನ್ನವೇ ರೋಹಿತ್ ಶರ್ಮಾ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದು ಹುಬ್ಬೇರಿಸುವಂತೆ ಮಾಡಿದ್ದರು.
ರೋಹಿತ್ ಶರ್ಮಾ ಅವರ ಈ ನಿರ್ಧಾರಕ್ಕೆ ಮಾಜಿ ಕ್ರಿಕೆಟಿಗ ದಿಲೀಪ್ ವೆಂಗ್‌ಸರ್ಕಾರ್ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. "ಭಾರತಕ್ಕೆ ಆಡುವುದಕ್ಕಿಂತಲೂ ಐಪಿಎಲ್‌ನಲ್ಲಿ ಪಾಲ್ಗೊಳ್ಳುವುದು ಮುಖ್ಯವಾಯಿತಾ? ದೇಶವನ್ನು ಪ್ರತಿನಿಧಿಸುವುದಕ್ಕಿಂತಲೂ ಕ್ಲಬ್ ತಂಡವನ್ನು ಪ್ರತಿನಿಧಿಸುವುದು ಆತನಿಗೆ ಹೆಚ್ಚಾಯಿತಾ?" ಎಂದು ಆಕ್ರೋಶದಿಂದ ಪ್ರಶ್ನಿಸಿದ್ದಾರೆ.
ಮುಂದುವರಿದು ಮಾತನಾಡಿದ ದಿಲೀಪ್ ವೆಂಗ್ ಸರ್ಕಾರ್ "ಈ ಬಗ್ಗೆ ಬಿಸಿಸಿಐ ಏನಾದರೂ ನಿರ್ಧಾರವನ್ನು ತೆಗೆದುಕೊಳ್ಳಲಿದೆಯಾ? ಅಥವಾ ಬಿಸಿಸಿಐ ಫಿಸಿಯೋ ರೋಹಿತ್ ಶರ್ಮಾ ಅವರ ಗಾಯವನ್ನು ಸರಿಯಾಗಿ ಪತ್ತೆ ಹಚ್ಚುವಲ್ಲಿ ವಿಫಲರಾದರಾ? ಎಂದು ಪ್ರಶ್ನಿಸಿದ್ದಾರೆ.
ಅಸ್ಟ್ರೇಲಿಯಾ ಪ್ರವಾಸಕ್ಕೆ ತಂಡವನ್ನು ಆಯ್ಕೆ ಮಾಡಿದ ಸಂದರ್ಭದಲ್ಲಿ ರೋಹಿತ್ ಶರ್ಮಾ ಅನ್‌ಫಿಟ್ ಎಂದು ಹೇಳಲಾಗಿತ್ತು. ಆದರೆ ಬಳಿಕ ಕೆಲವೇ ಗಂಟೆಗಳಲ್ಲಿ ರೋಹಿತ್ ಶರ್ಮಾ ನೆಟ್ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆಯಾಗದಿರಲು ನಿಜವಾದ ಕಾರಣವೇನೆಂಬ ಪ್ರಶ್ನೆಗಳು ಹುಟ್ಟಿಕೊಂಡಿತ್ತು. ಇದು ಗೊಂದಲಕ್ಕೆ ಕಾರಣವಾಗಿತ್ತು.
ಐಪಿಎಲ್ ಮುಗಿದ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್ 27ರಿಂದ ಏಕದಿನ ಸರಣಿ ಆರಂಭಗೊಳ್ಳುವ ಮೂಲಕ ಸುದೀರ್ಘ ಸರಣಿಗೆ ಚಾಲನೆ ದೊರೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications