T20 World Cup ವಿರಾಟ್ ಕೊಹ್ಲಿಗೆ ತಂಡದಲ್ಲಿ ಸ್ಥಾನ ಡೌಟ್?
ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಬೇಕು ಎಂದು ರೋಹಿತ್ ಶರ್ಮಾ ಪಟ್ಟು ಹಿಡಿದಿದ್ದರು. ಆದರೆ ಸದ್ಯದ ವಾಸ್ತವ ಸ್ಥಿತಿಯನ್ನು ನೋಡಿದರೆ, ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನವನ್ನು ಪಡೆಯಲು ಸಾಧ್ಯವೇ ಇಲ್ಲ ಎಂದು ತೋರುತ್ತಿದೆ. ಚೇಸಿಂಗ್ ಸ್ಟಾರ್ ಬಿಟ್ಟು ಟೀಮ್ ಇಂಡಿಯಾ ತಂಡವನ್ನು ಕಟ್ಟುತ್ತದಾ ಎಂಬ ಪ್ರಶ್ನೆ ಉದ್ಭವಿಸಿದ್ದು, ಅದಕ್ಕೆ ಉತ್ತರ ಇಲ್ಲಿದೆ.
ಟಿ20 ವಿಶ್ವಕಪ್ ತಂಡ ಕಟ್ಟುವುದು ಬಿಸಿಸಿಐಗೆ ದೊಡ್ಡ ಚಿಂತೆಯಾಗಿದೆ. ಇತ್ತೀಚಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ರೋಹತ್ ಶರ್ಮಾ 2024 ಟಿ20 ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದ್ದರು. ಈ ಹೇಳಿಕೆಯ ಬಳಿಕ ರೋಹಿತ್ ಶರ್ಮಾ ಸಹ ವಿರಾಟ್ ಕೊಹ್ಲಿ ವಿಶ್ವಕಪ್ ತಂಡದಲ್ಲಿ ಬೇಕು ಎಂದು ಪಟ್ಟನ್ನು ಸಹ ಹಿಡಿದಿದ್ದರು. ಆದರೆ ವಾಸ್ತವನ್ನು ನೋಡಿದರೆ ರೋಹಿತ್ ಹೇಳಿಕೆಗೆ ಬಿಸಿಸಿಐ ಸೊಪ್ಪು ಹಾಕುವಂತೆ ಕಾಣುತ್ತಿಲ್ಲ.

ವಿರಾಟ್ ಕೊಹ್ಲಿ ಅವರು ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಕನಸು ಕಾಣುತ್ತಿದ್ದಾರೆ. ಇವರು ಐಪಿಎಲ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಹುಮ್ಮಸ್ಸಿನಲ್ಲಿದ್ದಾರೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಅಂಗಳದಲ್ಲಿ ವಿರಾಟ್ ಕೊಹ್ಲಿ ಅಪ್‌ಡೇಟ್ ವರ್ಷನ್ ಅನಾವರಣವಾಗಿತ್ತು. ಇದರಿಂದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ ಆಡಬಹುದು ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದರೆ ಈ ಆಸೆ ಕಮರಿಲಿದೆ ಎಂದು ಎದ್ದು ಕಾಣುತ್ತಿದೆ.
ವಿರಾಟ್ ಕೊಹ್ಲಿ ಅವರಿಗೆ ಸ್ಥಾನ ಏಕೆ ಲಭ್ಯವಿಲ್ಲ?
ವಿರಾಟ್ ಕೊಹ್ಲಿ ಕಳೆದ ಕೆಲವು ವರ್ಷಗಳಲ್ಲಿ ಟೆಸ್ಟ್ ಕ್ರಿಕೆಟ್ ಆಡುವಂತ ಚಿತ್ತ ನೆಟ್ಟಿದ್ದಾರೆ. ಏಕದಿನ ಕ್ರಿಕೆಟ್‌ನ್ನು ನಂತರದ ಸ್ಥಾನದಲ್ಲಿ ಅವರು ನೋಡುತ್ತಾರೆ. ಟಿ20 ಕ್ರಿಕೆಟ್‌ನಿಂದ ವಿರಾಟ್ ಕೊಂಚ ದೂರ ಸರಿದಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಕಳೆದ ವಿಶ್ವಕಪ್ ಬಳಿಕ ವಿರಾಟ್ ಟಿ20 ಕ್ರಿಕೆಟ್ ಆಡಿರಲಿಲ್ಲ. ಆದರೆ ತವರಿನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಟೀಮ್ ಇಂಡಿಯಾಕ್ಕೆ 14 ತಿಂಗಳ ಬಳಿಕ ಕಮ್ ಬ್ಯಾಕ್ ಮಾಡಿ ತಾವು ಸಹ ಟಿ20 ವಿಶ್ವಕಪ್‌ನಲ್ಲಿ ಆಡುವ ಆಸೆಯನ್ನು ಹೊಂದಿರುವುದಾಗಿ ತಿಳಿಸಿದ್ದರು. ಆದರೆ ಇವರ ಕನಸಿಗೆ ಪೆಟ್ಟು ಬೀಳುವ ಸಾಧ್ಯತೆ ಇದೆ.
ಭರ್ಜರಿ ಫಾರ್ಮ್‌ನಲ್ಲಿರುವ ಯುವಕರು
ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಯಶಸ್ವಿ ಜೈಸ್ವಾಲ್ ಸಿಕ್ಕ ಅವಕಾಶದಲ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದು, ಇವರನ್ನು ಬಿಟ್ಟು ತಂಡವನ್ನು ಕಟ್ಟುವುದು ಅಸಾಧ್ಯ ಎಂದೇ ಭಾಸವಾಗುತ್ತದೆ. ಇನ್ನು ಮಿಡ್ಲ್ ಆರ್ಡರ್‌ನಲ್ಲಿ ಸೂರ್ಯಕುಮಾರ್ ಯಾದವ್ ಆಡುವುದು ಫಿಕ್ಸ್. ಕೆಎಲ್ ರಾಹುಲ್ ಸಹ ಈ ರೇಸ್‌ನಲ್ಲಿದ್ದಾರೆ. ಉಳಿದಂತೆ ಹಾರ್ದಿಕ್ ಪಾಂಡ್ಯ ಫಿಟ್ ಆದಲ್ಲಿ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ವಿಕೆಟ್ ಕೀಪರ್ ರೂಪದಲ್ಲಿ ಎರಡು ಸ್ಥಾನಕ್ಕೆ ಜಿತೇಶ್ ಶರ್ಮಾ, ಸಂಜು ಸ್ಯಾಮ್ಸನ್, ಧ್ರುವ್ ಜುರೇಲ್ ಹಾಗೂ ರಿಷಭ್ ಪಂತ್ ಫೈಟ್ ನಡೆಸಲಿದ್ದಾರೆ.

ಆಲ್‌ರೌಂಡರ್ ಸ್ಥಾನದಲ್ಲಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಶಿಂಗ್ಟನ್ ಸುಂದರ್ ಕಾಣಿಸಿಕೊಳ್ಳ ಬಹುದು. ಇನ್ನು ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್, ಯುಜುವೇಂದ್ರ ಚಹಾಲ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಜಸ್ಪ್ರಿತ್ ಬುಮ್ರಾ, ರವಿ ಬಿಷ್ಣೋಯಿ ತಂಡದಲ್ಲಿ ಸ್ಥಾನ ಪಡೆಯುವ ಕನಸಿನಲ್ಲಿದ್ದಾರೆ.
ವಿರಾಟ್ ಆಡಬೇಕಾದಲ್ಲಿ ಯಾರಿಗೆ ಕೊಕ್?
ಸದ್ಯ ಟೀಮ್ ಇಂಡಿಯಾದ ಯುವ ಆಟಗಾರರು ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಒಂದು ವೇಳೆ ವಿರಾಟ್ ಕೊಹ್ಲಿ ತಂಡದಲ್ಲಿ ಸ್ಥಾನ ಪಡೆಯಬೇಕು ಎಂದರೆ, ಆರಂಭಿಕ ಯಶಸ್ವಿ ಜೈಸ್ವಾಲ್ ಅಥವಾ ರಿಂಕು ಸಿಂಗ್‌ರಲ್ಲಿ ಒಬ್ಬರ ಸ್ಥಾನಕ್ಕೆ ಕುತ್ತು ಬರುವುದು ಗ್ಯಾರಂಟಿ.
ರುತುರಾಜ್, ಗಿಲ್‌ಗೆ ಸ್ಥಾನ ಡೌಟ್?
ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸುತ್ತಿರುವ ಶುಭಮನ್ ಗಿಲ್ ಹಾಗೂ ಸಿಎಸ್‌ಕೆ ತಂಡವನ್ನು ಮುನ್ನಡೆಸುತ್ತಿರುವ ರುತುರಾಜ್ ಗಾಯಕ್ವಾಡ್ ಅವರಿಗೆ ಈ ತಂಡದಲ್ಲಿ ಸ್ಥಾನ ಸಿಗುವುದು ಕಷ್ಟ ಎಂದೇ ಹೇಳಲಾಗುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications