ಸನ್ ತಂಡಕ್ಕೆ ಆಧಾರವಾದ ಇಶಾನ್, ಕ್ಲಾಸೆನ್: ಪಂಜಾಬ್‌ಗೆ 236 ರನ್ ಗುರಿ
ಹೈದರಾಬಾದ್: ಭರವಸೆಯ ಬ್ಯಾಟರ್ ಇಶಾನ್ ಕಿಶನ್ ಹಾಗೂ ಹೆನ್ರಿಕ್ ಕ್ಲಾಸೇನ್ ಅವರು ಬಾರಿಸಿದ ಭರ್ಜರಿ ಅರ್ಧಶತಕದ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ 19ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 49ನೇ ಪಂದ್ಯದಲ್ಲಿ 236 ರನ್‌ಗಳ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡಕ್ಕೆ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಜೋಡಿ ಮೊದಲ ವಿಕೆಟ್‌ಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 3.3 ಓವರ್‌ಗಳಲ್ಲಿ 54 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ಹಂತದಲ್ಲಿ 269ರ ಸ್ಟ್ರೈಕ್ ರೇಟ್‌ನಲ್ಲಿ 35 ರನ್ ಕಲೆ ಹಾಕಿದ್ದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಇವರ ಇನಿಂಗ್ಸ್‌ನಲ್ಲಿ 2 ಬೌಂಡರಿ, 4 ಸಿಕ್ಸರ್ ಸೇರಿವೆ.

ಭರ್ಜರಿ ಫಾರ್ಮ್‌ನಲ್ಲಿರುವ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಸಹ ತಂಡದ ರನ್ ವೇಗಕ್ಕೆ ಚುರುಕು ನೀಡಿದರು. ಸನ್ ತಂಡ ಪವರ್ ಪ್ಲೇನಲ್ಲಿ 79 ರನ್ ಸೇರಿಸಿತು. ಟ್ರಾವಿಸ್ ಹೆಡ್ 19 ಎಸೆತಗಳಲ್ಲಿ 3 ಬೌಂಡರಿ, 3 ಸಿಕ್ಸರ್ ಸಹಿತ 38 ರನ್ ಬಾರಿಸಿ ಸ್ಪಿನ್ ಬೌಲರ್ ಯುಜುವೇಂದ್ರ ಚಹಾಲ್ ಅವರ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಮುಂದಾಗಿ ಔಟ್ ಆದರು.
ಇಶಾನ್, ಕ್ಲಾಸೆನ್ ಅರ್ಧಶತಕ
84 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದಾಗ ಭರವಸೆಯ ಬ್ಯಾಟರ್ ಇಶಾನ್ ಕಿಶನ್ ಹಾಗೂ ಹೆನ್ರಿಕ್ ಕ್ಲಾಸೆನ್ ಜೋಡಿ ತಂಡಕ್ಕೆ ಆಧಾರವಾಯಿತು. ಮೂರನೇ ವಿಕೆಟ್‌ಗೆ ಜೀವದಾನದ ಲಾಭ ಪಡೆದು ಬ್ಯಾಟ್ ಮಾಡಿದ ಜೋಡಿ ಅಬ್ಬರಿಸಿತು. ಈ ಜೋಡಿ 48 ಎಸೆತಗಳಲ್ಲಿ 88 ರನ್ ಸೇರಿಸಿ ತಂಡಕ್ಕೆ ಆಧಾರವಾಯಿತು. ಈ ಜೊತೆಯಾಟಕ್ಕೆ ಬ್ರೇಕ್ ಹಾಕುವಲ್ಲಿ ಅರ್ಷದೀಪ್ ಸಿಂಗ್ ಯಶಸ್ವಿಯಾದರು. ಈ ಹಂತದಲ್ಲಿ ಇಶಾನ್ ಕಿಶನ್ 32 ಎಸೆತಗಳಲ್ಲಿ 2 ಬೌಂಡರಿ, 4 ಸಿಕ್ಸರ್ ಸಹಾಯದಿಂದ 55 ರನ್ ಬಾರಿಸಿದರು.

ಹೆನ್ರಿಕ್ ಕ್ಲಾಸೆನ್ ಈ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದು, ಅಬ್ಬರಿಸಿದರು. 19ನೇ ಆವೃತ್ತಿಯ ಐಪಿಎಲ್‌ನಲ್ಲಿ 5ನೇ ಅರ್ಧಶತಕ ಬಾರಿಸಿದ ಕ್ಲಾಸೆನ್ ಹೈದರಾಬಾದ್ ತಂಡಕ್ಕೆ ನೆರವಾಯಿತು. ಅಲ್ಲದೆ ಐಪಿಎಲ್‌ನ ಎಲ್ಲ ತಂಡಗಳ ವಿರುದ್ಧ ಅರ್ಧಶತಕ ಬಾರಿಸಿದ ಹೆಗ್ಗಳಿಕೆ ಕ್ಲಾಸೆನ್ ಅವರದ್ದಾಗಿದೆ. ಕ್ಲಾಸೆನ್ 43 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ ಸಹಾಯದಿಂದ 69 ರನ್ ಬಾರಿಸಿ ಔಟ್ ಆದರು.
ಮಧ್ಯಮ ಕ್ರಮಾಂಕದಲ್ಲಿ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ 13 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ನೆರವಿನಿಂದ ಅಜೇಯ 29 ರನ್ ಬಾರಿಸಿ ತಂಡಕ್ಕೆ ನೆರವವಾದರು. ಅಂತಿಮವಾಗಿ ಸನ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 235 ರನ್ ಸೇರಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications