ಕಿವೀಸ್‌ಗೆ 272 ರನ್ ಗುರಿ ನೀಡಿದ ಟೀಮ್ ಇಂಡಿಯಾ
ತಿರುವನಂತಪುರಂ: ಭರವಸೆಯ ಆಟಗಾರ ಇಶಾನ್ ಕಿಶನ್ ಬಾರಿಸಿದ ಶತಕ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಅವರು ಬಾರಿಸಿದ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಐದನೇ ಟಿ20 ಪಂದ್ಯದಲ್ಲಿ 271 ರನ್ ಕಲೆ ಹಾಕಿದೆ. ಈ ಮೂಲಕ ಮಹತ್ವದ ಪಂದ್ಯವನ್ನು ಗೆಲ್ಲಲು ನ್ಯೂಜಿಲೆಂಡ್ ತಂಡಕ್ಕೆ 272 ರನ್ ಗುರಿಯನ್ನು ನೀಡಿದೆ.
ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ತನ್ನದಾಗಿಸಿಕೊಂಡಿತು. ಈ ವೇಳೆ ಆರಂಭಿಕರಾದ ಸಂಜು ಸ್ಯಾಮ್ಸನ್ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಇದೇ ಮೊದಲ ಬಾರಿಗೆ ಆಡುವ ಅವಕಾಶ ಪಡೆದಿದ್ದ ಸಂಜು ರನ್ ಕಲೆ ಹಾಕುವಲ್ಲಿ ವಿಫಲರಾದರು. ಸ್ಫೋಟಕ ಬ್ಯಾಟಿಂಗ್‌ನಿಂದಲೇ ಹೆಸರು ಮಾಡಿರುವ ಅಭಿಷೇಕ್ ಶರ್ಮಾ ಸಹ ಸಿಕ್ಕ ಅವಕಾಶವನ್ನು ಬಳಸಿಕೊಂಡು ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಇವರು ಕೇವಲ 16 ಎಸೆತಗಳಲ್ಲಿ 2 ಸಿಕ್ಸರ್, 4 ಬೌಂಡರಿ ಸಹಾಯದಿಂದ 30 ರನ್ ಬಾರಿಸಿ ಔಟ್ ಆದರು.

ಮೂರನೇ ವಿಕೆಟ್‌ಗೆ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಜೋಡಿ ಮತ್ತೊಮ್ಮೆ ಜವಾಬ್ದಾರಿಯನ್ನು ಹೊತ್ತುಕೊಂಡರು. ಈ ವೇಳೆ ಈ ಆಟಗಾರರು ಅಬ್ಬರದ ಆಟಕ್ಕೆ ಮಣೆ ಹಾಕಿದರು. ಈ ಜೋಡಿಯ ಆಟಕ್ಕೆ ಬ್ರೇಕ್ ಹಾಕುವಲ್ಲಿ ನ್ಯೂಜಿಲೆಂಡ್ ಬೌಲರ್‌ಗಳು ವಿಫಲರಾದರು. ಈ ಜೋಡಿ 58 ಎಸೆತಗಳಲ್ಲಿ 137 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.
ಇಶಾನ್ ಶತಕ
ಟೀಮ್ ಇಂಡಿಯಾದ ಸ್ಟಾರ್ ಆರಂಭಿಕ ಆಟಗಾರ ಇಶಾನ್ ಕಿಶನ್ ಆರ್ಭಟ ನಡೆಸಿದರು. ಇವರು ನ್ಯೂಜಿಲೆಂಡ್ ತಂಡದ ಬೌಲರ್‌ಗಳನ್ನು ದಂಡಿಸುತ್ತಾ ಸಾಗಿದರು. ಇವರು 43 ಎಸೆತಗಳಲ್ಲಿ 6 ಬೌಂಡರಿ, 10 ಸಿಕ್ಸರ್ ಸಹಾಯದಿಂದ 103 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಸರಣಿಯಲ್ಲಿ ತಮ್ಮ ಅಮೋಘ ಬ್ಯಾಟಿಂಗ್ ಐದನೇ ಪಂದ್ಯದಲ್ಲೂ ಮುಂದುವರಿಸಿದರು. ಇವರು 4 ಬೌಂಡರಿ, 6 ಸಿಕ್ಸರ್ ಸಹಾಯದಿಂದ 63 ರನ್ ಸಿಡಿಸಿದರು.
ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 247ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಿದರು. ಇವರು 1 ಬೌಂಡರಿ, 4 ಸಿಕ್ಸರ್ ಸಹಾಯದಿಂದ 42 ರನ್ ಬಾರಿಸಿ ಮಿಂಚಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 271 ರನ್ ಸೇರಿಸಿತು.
ಟಿ20 ಕ್ರಿಕೆಟ್‌ನಲ್ಲಿ ಇಶಾನ್ ಕಿಶನ್ ಈ ಬಿಗ್ ಇನಿಂಗ್ಸ್ ಮೂಲಕ ಸಾವಿರ ರನ್‌ಗಳನ್ನು ಪೂರೈಸಿದರೆ, ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ತಮ್ಮ ಕ್ಲಾಸಿಕ್ ಬ್ಯಾಟಿಂಗ್ ನೆರವಿನಿಂದ ಟಿ20 ಫಾರ್ಮೆಟ್‌ನಲ್ಲಿ ಮೂರು ಸಾವಿರ ರನ್ ಪೂರೈಸಿದ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ಈ ಮೂಲಕ ಸೂರ್ಯ, ರೋಹಿತ್ ಹಾಗೂ ವಿರಾಟ್ ಕೊಹ್ಲಿ ಅವರ ವಿಶೇಷ ಕ್ಲಬ್ ಸೇರಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications