For Quick Alerts
ALLOW NOTIFICATIONS  
For Daily Alerts
 

Ishan Kishan: ಭಾರತ ತಂಡಕ್ಕೆ ಬೇಗ ವಾಪಸ್ ಆಗುತ್ತಾರೆ ಇಶಾನ್‌ ಕಿಶನ್‌?

ಟೀಮ್ ಇಂಡಿಯಾದ ಯುವ ಆಟಗಾರ ಇಶಾನ್ ಕಿಶನ್ ತಂಡವನ್ನು ಸೇರುವ ಕನಸು ಕಾಣುತ್ತಿದ್ದಾರೆ. ಈ ವೇಳೆ ಹಲವು ಬಾರಿ ಸ್ಥಿರ ಪ್ರದರ್ಶನವನ್ನು ನೀಡಿದರೂ, ಅವರನ್ನು ಬಿಸಿಸಿಐ ಆಯ್ಕೆ ಸಮಿತಿ ತಂಡಕ್ಕೆ ಆಯ್ಕೆ ಮಾಡಲಿಲ್ಲ. ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನವನ್ನು ನೀಡಿದರೂ ಇಶಾನ್‌ ಕಿಶನ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಬಿಸಿಸಿಐ ಹಿಂದೆಟು ಹಾಕಿತು. ಆದರೆ ಈಗ ಬರುತ್ತಿರುವ ಸುದ್ದಿಗಳಂತೆ ಇಶಾನ್‌ ಕಿಶನ್‌ ಮತ್ತೆ ಭಾರತ ತಂಡವನ್ನು ಸೇರುವ ಹತ್ತಿರದ್ದಲ್ಲಿ ನಿಂತಿದ್ದಾರೆ.

ಜಾರ್ಖಂಡ್ ಪರ ಇಶಾನ್‌ ಕಿಶನ್‌ ಅಮೋಘ ಪ್ರದರ್ಶನ ನೀಡಿದ್ದು ಬಿಸಿಸಿಐ ಆಯ್ಕೆ ಸಮಿತಿಯ ಗಮನ ಸೆಳೆಯಿತು. ಅಲ್ಲದೆ ದೇಶೀಯ ಟೂರ್ನಿಯಲ್ಲಿ ರನ್‌ಗಳನ್ನು ಕಲೆ ಹಾಕಿದ ಪರಿಣಾಮ ಇವರನ್ನು ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಎ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ.

Ishan Kishan Likely to Join India A Team for Australia Tour After Central Contract Snub

ಭಾರತ ಯುವ ತಂಡ ಆಸ್ಟ್ರೇಲಿಯಾ ತಂಡದ ಪ್ರವಾಸವನ್ನು ಬೆಳೆಸಲಿದೆ. ಈ ವೇಳೆ ಎರಡು ಪಂದ್ಯಗಳನ್ನು ಆಡಲಿದೆ. ಭಾರತ ಎ ತಂಡ ಮತ್ತು ಆಸ್ಟ್ರೇಲಿಯಾ ಎ ನಡುವಿನ ಸರಣಿ ಅಕ್ಟೋಬರ್ 31 ರಿಂದ ಆರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಅಕ್ಟೋಬರ್ 31 ರಿಂದ ನವೆಂಬರ್ 3 ರ ನಡುವೆ ನಡೆಯಲಿದೆ.

ಎರಡನೇ ಪಂದ್ಯ ನವೆಂಬರ್ 7 ಮತ್ತು ನವೆಂಬರ್ 10 ರ ನಡುವೆ ಮೆಲ್ಬೋರ್ನ್‌ನಲ್ಲಿ ನಡೆಯಲಿದೆ. ಈ ಪ್ರವಾಸದಲ್ಲಿ ಇಶಾನ್ ಕಿಶನ್ ಭಾರತ ಎ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಈ ಪ್ರವಾಸಕ್ಕಾಗಿ ಬಿಸಿಸಿಐ ಶೀಘ್ರದಲ್ಲೇ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ಸರಣಿಗಾಗಿ ಭಾರತ ತಂಡವನ್ನು ಅಭಿಮನ್ಯು ಈಶ್ವರನ್‌ ಹಾಗೂ ರುತುರಾಜ್ ಗಾಯಕ್ವಾಡ್ ಅವರನ್ನು ನಾಯಕರನ್ನಾಗಿ ಮಾಡುವ ಸಾಧ್ಯತೆ ಇದೆ.

Ishan Kishan Likely to Join India A Team for Australia Tour After Central Contract Snub

ದೇವದತ್ ಪಡಿಕ್ಕಲ್‌ಗೆ ಸ್ಥಾನ?

ಕರ್ನಾಟಕದ ಸ್ಟಾರ್ ಆಟಗಾರ ದೇವದತ್‌ ಪಡಿಕ್ಕಲ್‌ ಅವರು ಭಾರತ ಎ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಇವರು ಸಹ ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಇವರನ್ನು ಸಹ ಆಸ್ಟ್ರೇಲಿಯಾ ಪ್ರವಾಸದಲ್ಲಿ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ವೇಳೆ ಇಶಾನ್‌ ಕಿಶನ್‌ ಅವರು ಅವಕಾಶ ವಂಚಿರಾಗಿದ್ದರು. ಇದರಿಂದ ಮುಂದಿನ ಸರಣಿಯ ವೇಳೆ ತಂಡದಿಂದ ಕೈ ಬಿಡಲಾಗಿತ್ತು. ಅಲ್ಲದೆ ಇವರಿಗೆ ದೇಶೀಯ ಟೂರ್ನಿಗಳಲ್ಲಿ ಸ್ಥಿರ ಪ್ರದರ್ಶನವನ್ನು ನೀಡುವಂತೆ ಆಗಿನ ಕೋಚ್ ರಾಹುಲ್ ದ್ರಾವಿಡ್ ಸೂಚನೆ ನೀಡಿದ್ದರು. ಆದರೆ ಇದಕ್ಕೆ ಆಗ ಸೊಪ್ಪು ಹಾಕದ ಇಶಾನ್ ಕಿಶನ್‌ ದೇಶೀಯ ಟೂರ್ನಿಗಳಲ್ಲಿ ಆಡಿರಲಿಲ್ಲ.

ಆದರೆ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಸೇರಿಕೊಳ್ಳಲು ಹಾರ್ದಿಕ್ ಪಾಂಡ್ಯ ಅವರೊಂದಿಗೆ ಅಹಮದಾಬಾದ್‌ನಲ್ಲಿ ಅಭ್ಯಾಸ ನಡೆಸಿದ ವರದಿಗಳು ಹೊರ ಬಂದಿದ್ದವು. ಇದದ ಬಳಿಕ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದರು. ಅಲ್ಲದೆ ಪ್ರಸಕ್ತ ವರ್ಷ ಬುಚ್ಚಿ ಬಾಬು, ಇರಾನಿ ಟ್ರೋಫಿ, ರಣಜಿ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಗಮನ ಸೆಳೆದರು.

Story first published: Saturday, October 19, 2024, 20:30 [IST]
Other articles published on Oct 19, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+