ಮಾರ್ಚ್ 28 ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭವಾಗಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಟ ನಡೆಸಲಿವೆ. ತಂಡದ ನಾಯಕ ಪ್ಯಾಟ್ ಕಮಿನ್ಸ್ ಅವರು ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದು, ಬೇರೆ ನಾಯಕನನ್ನು ಎಸ್‌ಆರ್‌ಎಚ್ ಘೋಷಿಸಿದೆ.
ತಂಡ ಭರವಸೆಯ ಎಡಗೈ ಬ್ಯಾಟರ್ ಇಶಾನ್ ಕಿಶನ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಇವರು ಟಿ20 ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಇನ್ನು ಯುವ ಆಟಗಾರ ಅಭಿಷೇಕ್ ಶರ್ಮಾ ಅವರಿಗೆ ಉಪನಾಯಕನ ಜವಾಬ್ದಾರಿಯನ್ನು ನೀಡಲಾಗಿದೆ. ಸನ್ ತಂಡ ತನ್ನ ಸಾಮಾಜಿಕ ತಾಣದಲ್ಲಿ ಈ ಮಹತ್ವದ ಪ್ರಕಟಣೆಯನ್ನು ತಿಳಿಸಿದೆ.

ಎಸ್‌ಆರ್‌ಎಚ್ ಈ ವೇಳೆ ಮಹತ್ವದ ಘೋಷಣೆಯನ್ನು ಮಾಡಿದೆ. ತಂಡದ ನಾಯಕ ಪ್ಯಾಟ್ ಕಮಿನ್ಸ್ ಕೆಲವು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಅವರು ತಂಡಕ್ಕೆ ಮರಳುವವರೆಗೂ ಇಶಾನ್ ಕಿಶನ್ ತಂಡವನ್ನು ಮುನ್ನಡೆಸಲಿದ್ದಾರೆ. ಅಲ್ಲದೆ ಅಭಿಷೇಕ್ ಶರ್ಮಾ ಅವರಿಗೆ ಉಪನಾಯಕ ಸ್ಥಾನ ನೀಡಲಾಗಿದೆ ಎಂದು ಘೋಷಿಸಿದೆ.
18ನೇ ಆವೃತ್ತಿಯ ಐಪಿಎಲ್‌ನಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಎಸ್‌ಆರ್‌ಎಚ್ ತಂಡವನ್ನು ಮುನ್ನಡೆಸಿದ್ದರು. ಆದರೆ ಇವರು ಸದ್ಯ ಗಾಯಕ್ಕೆ ತುತ್ತಾಗಿದ್ದರಿಂದ ಆರಂಭಿಕ ಪಂದ್ಯಗಳಲ್ಲಿ ತಂಡವನ್ನು ಸೇರುವುದಿಲ್ಲ. ಹೀಗಾಗಿ ಇವರ ಸ್ಥಾನದಲ್ಲಿ ಟಾಪ್ ಆರ್ಡರ್ ಬ್ಯಾಟರ್ ಇಶಾನ್ ಕಿಶನ್ ತಂಡ ಮುನ್ನಡೆಸಲಿದ್ದಾರೆ. ಪ್ಯಾಟ್ ಕಮಿನ್ಸ್ ತಂಡ ಸೇರುವ ವರೆಗೂ ಇಶಾನ್ ಮುನ್ನಡೆಸಲಿದ್ದಾರೆ.
ಇಶಾನ್ ಕಿಶನ್ ದೇಶೀಯ ಸೈಯದ್ ಮುಷ್ತಾಕ್ ಅಲಿ ಕ್ರಿಕೆಟ್ ಟೂರ್ನಿಯಲ್ಲಿ ಜಾರ್ಖಂಡ್ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಅಲ್ಲದೆ ಇವರ ಮುಂದಾಳತ್ವದಲ್ಲಿ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಇವರಿಗೆ ನಾಯಕತ್ವದ ಗುಣಗಳು ಇವೆ. ಇದನ್ನು ಗುರುತಿಸಿರುವ ಸನ್ ತಂಡ ಪಟ್ಟ ಕಟ್ಟಿದೆ. ಇದಕ್ಕೂ ಮೊದಲು ಇಶಾನ್ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದರು.
2025ರ ಐಪಿಎಲ್ ಹರಾಜಿನಲ್ಲಿ ಇಶಾನ್ ಕಿಶನ್ ಅವರಿಗೆ ಸನ್ ತಂಡ 11.4 ಕೋಟಿ ರೂ. ನೀಡಿ ಖರೀದಿ ಮಾಡಿದೆ. ಇಶಾನ್ ಐಪಿಎಲ್‌ನಲ್ಲಿ ಆಡಿದ 112 ಇನಿಂಗ್ಸ್‌ಗಳಲ್ಲಿ 1 ಶತಕ ಹಾಗೂ 17 ಅರ್ಧಶತಕ ಸೇರಿದಂತೆ 2998 ರನ್ ಸಿಡಿಸಿದ್ದಾರೆ. ಇವರ ಸರಾಸರಿ 29.10 ಆಗಿದ್ದು, ಸ್ಟ್ರೈಕ್ ರೇಟ್ 137.64 ಆಗಿದೆ.
