Ishan Kishan: ರಿಷಬ್ ಪಂತ್ ಬದಲಿಗೆ ಇಶಾನ್ ಕಿಶನ್ ಆಡುವ ಸಾಧ್ಯತೆ?
ಇಶಾನ್ ಕಿಶನ್ ಟೀಮ್ ಇಂಡಿಯಾದಿಂದ ಬಹಳ ಸಮಯದಿಂದ ಹೊರಗುಳಿದಿದ್ದಾರೆ. ಅವರು 2023 ರಲ್ಲಿ ಟೀಮ್ ಇಂಡಿಯಾ ಪರ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು. ಮಾನಸಿಕ ಆಯಾಸ ಮತ್ತು ಪ್ಲೇಯಿಂಗ್-11ರಲ್ಲಿ ಅವಕಾಶ ಸಿಗದ ಕಾರಣ ತಂಡದಿಂದ ವಿರಾಮ ತೆಗೆದುಕೊಂಡಿದ್ದರು.
ಇದಾದ ನಂತರ ಬಿಸಿಸಿಐ ಇಶಾನ್ ಅವರನ್ನು ತಂಡದಿಂದ ಬಿಡುಗಡೆ ಮಾಡಿತ್ತು. ಇದಲ್ಲದೆ ಕೇಂದ್ರ ಗುತ್ತಿಗೆಯಿಂದ ಕೂಡ ಅವರನ್ನು ಬಿಸಿಸಿಐ ಕೈಬಿಟ್ಟಿತ್ತು. ಬಿಸಿಸಿಐನ ಈ ನಿರ್ಧಾರದಿಂದ ಇಶಾನ್ ಕಿಶನ್ ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಈಗ ಇಶಾನ್ ಕಿಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಬಂದಿದೆ.

ಇಶಾನ್ ಕಿಶನ್ ಶೀಘ್ರದಲ್ಲೇ ಟೀಮ್ ಇಂಡಿಯಾಗೆ ಮರಳುವ ಸಾಧ್ಯತೆಯಿದೆ. ಸದ್ಯ ಟೀಮ್ ಇಂಡಿಯಾದಲ್ಲಿ ಮಿಂಚುತ್ತಿರುವ ರಿಷಬ್ ಪಂತ್ ಅವರ ಸ್ಥಾನದ ಮೇಲೆ ಇಶಾನ್ ಕಿಶನ್ ಕಣ್ಣಿಟ್ಟಿದ್ದು, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಇಶಾನ್ ಕಮ್ ಬ್ಯಾಕ್?
ಬಾಂಗ್ಲಾದೇಶ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ ರಿಷಬ್ ಪಂತ್ ಟೀಮ್ ಇಂಡಿಯಾ ಆಧಾರ ಸ್ತಂಭವಾಗಿದ್ದಾರೆ. ಇದಾದ ಬಳಿಕ ಅವರಿಗೆ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗುತ್ತಿದೆ. ಏಕೆಂದರೆ ಈ ವರ್ಷ ಭಾರತ 10 ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಲಿದೆ.
ಈ ಎಲ್ಲ ಪಂದ್ಯಗಳಲ್ಲಿ ರಿಷಬ್ ಪಂತ್ ಲಭ್ಯತೆ ಮತ್ತು ಅವರ ಪ್ರದರ್ಶನ ಟೀಮ್ ಇಂಡಿಯಾಕ್ಕೆ ಉಪಯುಕ್ತವಾಗಿದೆ. ಹೀಗಾಗಿ ಅವರ ಕೆಲಸದ ಹೊರೆ ಕಡಿಮೆ ಮಾಡಲು ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಪಂತ್ ಬದಲಿಗೆ ಇಶಾನ್ ಕಿಶನ್ ವಿಕೆಟ್ ಕೀಪರ್-ಬ್ಯಾಟರ್ ಮನ್ ಆಗಿ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಿದೆ.
ಬುಚ್ಚು ಬಾಬು ಮತ್ತು ದುಲೀಪ್ ಟ್ರೋಫಿಯಲ್ಲಿ ಇಶಾನ್ ಕಿಶನ್ ಶತಕಗಳನ್ನು ಬಾರಿಸುವ ಮೂಲಕ ಬಿಸಿಸಿಐ ಗಮನ ಸೆಳೆದಿದ್ದಾರೆ. ಹೀಗಾಗಿ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಭಾಗವಾಗುವ ನಿರೀಕ್ಷೆಯಿದೆ.
ಈಗಾಗಲೇ ಟೀಮ್ ಇಂಡಿಯಾದ ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಟಿ20 ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ವೇಗದ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರಿಗೂ ಕೆಲಸದ ಹೊರೆ ಕಡಿಮೆ ಮಾಡಲು ವಿಶ್ರಾಂತಿ ನೀಡಲಾಗುತ್ತಿದೆ. ಜೊತೆಗೆ ಏಕದಿನ ಮತ್ತು ಟಿ20 ಭಾರತ ತಂಡದ ಉಪನಾಯಕ ಶುಭಮನ್ ಗಿಲ್ ಕೂಡ ವಿಶ್ರಾಂತಿ ಪಡೆಯಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications